ಬಸವಕಲ್ಯಾಣ ನಗರದ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿನ ಮೋಟಾರು ವಾಹನ ನಿರೀಕ್ಷಕ ವಿಜಯಕುಮಾರ್ ಭಜಂತ್ರಿ (53) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಕ್ರಾಸ್ ಗ್ರಾಮದವರಾದ ಇವರು ನಾಲ್ಕು ತಿಂಗಳ ಹಿಂದೆ ಇಲ್ಲಿಗೆ ವರ್ಗಾವಣೆಯಾಗಿ ಬಂದಿದ್ದರು. ನಗರದ ಕ್ರೀಡಾಂಗಣ ಬಳಿಯ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಿದ್ದರು.
ಕೊಠಡಿಯಲ್ಲಿ ಮಲಗಿದ್ದ ವೇಳೆ ಹೃದಯಾಘಾತವಾಗಿದೆ, ಮನೆಯಲ್ಲಿ ಒಬ್ಬರೇ ಇರುವ ಕಾರಣ ಮೃತಪಟ್ಟಿರುವುದು ತಡವಾಗಿ ಗೊತ್ತಾಗಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಗೂಡ್ಸ್ ವಾಹನ – ಕಾರು ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು
ವಿಷಯ ತಿಳಿದು ನಗರ ಠಾಣೆಯ ಸಿಪಿಐ ಅಲಿಸಾಬ್ ಹಾಗೂ ಸಿಬ್ಬಂದಿ ಸಮಕ್ಷಮದಲ್ಲಿ ಬಾಗಿಲು ತೆರೆದು ಮೃತದೇಹ ಆಸ್ಪತ್ರೆಗೆ ಸಾಗಿಸಿ ಶವಪರೀಕ್ಷೆ ನಡೆಸಲಾಗಿದೆ.