ಮರಳು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವಿಗೀಡಾದ ಘಟನೆ ಬೆಳಗಾವಿ ತಾಲೂಕಿನ ಅಗಸಗಿ ಗ್ರಾಮದ ಹೊರವಲಯದಲ್ಲಿ ರಸ್ತೆ ಅಪಘಾತ ನಡೆದಿದೆ.
ಅಂಬೇವಾಡಿ ಗ್ರಾಮದ ಯೋಗೇಶ ನಾವಿ(24), ನಿತೇಶ ತರಳೆ(27) ಅಪಘಾತದಲ್ಲಿ ಮೃತಪಟ್ಟ ಯುವಕರು ಎಂದು ತಿಳಿದುಬಂದಿದೆ.
ಮರಳು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರ ದೇಹಗಳು ಛಿದ್ರ ಛಿದ್ರವಾಗಿದೆ. ಘಟನೆ ನಡೆದ ತಕ್ಷಣ ಟಿಪ್ಪರ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲಿ ಪ್ರಕರಣ ದಾಖಲಾಗಿದೆ.