ಮಡಿಕೇರಿ | ಜ. 31 ರಿಂದ ಪೇರಡ್ಕ-ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಾರಂಭ

Date:

Advertisements

ಇತಿಹಾಸ ಪ್ರಸಿದ್ಧ ಪೇರಡ್ಕ-ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಾರಂಭ ಮತ್ತು ಸರ್ವಧರ್ಮ ಸಮ್ಮೇಳನವು ಜ.31 ರಿಂದ ಫೆ.2ರ ವರೆಗೆ ಪೇರಡ್ಕ ತೆಕ್ಕಿಲ್ ಮೊಹಮದ್ ಹಾಜಿ ವೇದಿಕೆಯಲ್ಲಿ ನಡೆಯಲಿದೆ ಎಂದು ಮುಹಿಯುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷ ಟಿ ಎಂ ಶಹೀದ್ ತೆಕ್ಕಿಲ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪೇರಡ್ಕ ಮುಹಿಯುದ್ದೀನ್ ಜುಮ್ಮಾ ಮಸೀದಿ ಮತ್ತು ದರ್ಗಾದಲ್ಲಿ ಜ.31ರಂದು ಸಮಾರಂಭಕ್ಕೆ ಚಾಲನೆ ದೊರೆಯಲಿದೆ. ಅಪರಾಹ್ನ 2 ಗಂಟೆಗೆ ಮುಖಾಂ ಅಲಂಕಾರ ಮತ್ತು ಕೂಟು ಪ್ರಾರ್ಥನೆ ನಡೆಯಲಿದ್ದು, ರಾತ್ರಿ 8 ಗಂಟೆಯಿಂದ ಪಾಣಕ್ಕಾಡ್ ಅಲ್‍ಹಾಜ್ ಹಮೀದಲೀ ಶಿಹಾಬ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಖುತ್‍ಮುಲ್ ಖುರ್‌ಆನ್ ದುಃಆ ನೇತೃತ್ವ ವಹಿಸಲಿದ್ದಾರೆ. ಪತ್ತನಂತಿಟ್ಟ ಅಬ್ದುಲ್ ರಝಾಕ್ ಅಬ್ರಾರಿ ಧಾರ್ಮಿಕ ಭಾಷಣ ಮಾಡಲಿದ್ದು, ವೇದಿಕೆಯಲ್ಲಿ ಸ್ಥಳದಾನಿಗಳಾದ ತೆಕ್ಕಿಲ್ ಬಾಬ ಹಾಜಿ, ತಾಜ್ ಮೊಹಮದ್, ಭಯಂಬಾಡಿ ಅಬೂಬಕ್ಕರ್ ಸಹಿತ ವಿವಿಧ ಗಣ್ಯರು ಉಪಸ್ಥಿತರಿಲಿದ್ದಾರೆ” ಎಂದು ಮಾಹಿತಿ ನೀಡಿದರು.

“ಫೆ.1 ರಂದು ಪೇರಡ್ಕ ದರ್ಗಾ ಶರೀಫ್ ವಠಾರದ ವೇದಿಕೆಯಲ್ಲಿ ಸಂಜೆ 7.30ಕ್ಕೆ ಕಾಸರಗೋಡ್‍ನ ರೌಲತುಲ್ ಉಲೂಂ ದಫ್ ಕಳಿ ಸಂಘಂ ಪೋವ್ವಲ್ ಅವರಿಂದ “ದಫ್ ಸ್ಪರ್ಧೆ, ಬುರ್ದಾ ಮಜ್ಲೀಸ್, ರಸೂಲ್ ಮದ್‍ಹ್ ಗಾನಂ” ನಡೆಯಲಿದೆ. ಕಾರ್ಯಕ್ರಮವನ್ನು ಕೇರಳದ ಸಮಸ್ತ ಕೇಂದ್ರ ಮುಶಾವರದ ಸದಸ್ಯ ಶೈಖುನಾ ಉಸ್ಮಾನುಲ್ ಫೈಝಿ ತೋಡಾರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಪೇರಡ್ಕ ಎಂಜೆಎಂ ಮಾಜಿ ಅಧ್ಯಕ್ಷ ಇಬ್ರಾಹಿಂ ಹಾಜಿ ಮೈಲುಕಲ್ಲು ವಹಿಸಲಿದ್ದಾರೆ. ಖತೀಬರಾದ ಅಹ್ಮದ್ ನಈಮ್ ಫೈಝಿ ಅಲ್ ಮಅïಬರಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ” ಎಂದರು.

Advertisements

“ಫೆ.2 ರಂದು ಸಂಜೆ 7 ಗಂಟೆಯಿಂದ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು, ದುವಾಃ ನೇತೃತ್ವವನ್ನು ಪೇರಡ್ಕ ಎಂ.ಜೆ.ಎಂ ಖತೀಬರಾದ ಅಹ್ಮದ್ ನಈಮ್ ಫೈಝಿ ಅಲ್ ಮಅïಬರಿ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಉದ್ಘಾಟಿಸಲಿದ್ದು, ಖತೀಬ ಪತ್ತನಂತಿಟ್ಟ ಅಬ್ದುಲ್ ರಝಾಕ್ ಅಬ್ರಾರಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುಳ್ಯ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಲೀಲಾಧರ್, ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ, ಜಮ್ಮು ಕಾಶ್ಮೀರ ಸಿಆರ್‌ಪಿಎಫ್ ಸಬ್‌ಇನ್ಸ್‌ಪೆಕ್ಟರ್ ಅನ್ವರ್ ಪಿ‌ ಎಂ ತೆಕ್ಕಿಲ್, ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಹಾಗೂ ಹೈಕೋರ್ಟ್ ವಕೀಲ ಅಬೂಬಕ್ಕರ್ ಅಡ್ಕಾರ್, ಕಾಂಗ್ರೆಸ್ ಮುಖಂಡ ಕೃಷ್ಣಪ್ಪ, ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ನ್ಯಾಯವಾದಿ ವಿ ವೆಂಕಪ್ಪ ಗೌಡ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಪಾಲ್ಗೊಳ್ಳಲಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಮಡಿಕೇರಿ | ಭೂಮಿ ಹಾಗೂ ನಿವೇಶನಕ್ಕಾಗಿ ಬೃಹತ್ ರ್ಯಾಲಿ; ಪ್ರಗತಿಪರ ಸಂಘಟನೆಗಳ ಬೆಂಬಲ

“ಸಂಜೆ 5 ಗಂಟೆಗೆ ಮೌಲೂದ್ ಪಾರಾಯಣ ನಡೆಯಲಿದ್ದು, ರಾತ್ರಿ 9 ಗಂಟೆಯಿಂದ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ದುಗ್ಗಲಡ್ಕ ಸಯ್ಯಿದ್ ಝೈನುಲ್ ಆಬಿದೀನ್ ತಂಙಳ್ ದುಃಆ ನೇತೃತ್ವ ವಹಿಸಲಿದ್ದು, ಬಹು ಶಮೀರ್ ದಾರಿಮಿ ಕೊಲ್ಲಂ ಧಾರ್ಮಿಕ ಪ್ರಭಾಷಣ ಮಾಡಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಉಲಮಾ, ಉಮರಾ ಹಾಗೂ ಸಾಮಾಜಿಕ, ರಾಜಕೀಯ, ನೇತರಾರರು ಪಾಲಗೊಳ್ಳಲಿದ್ದಾರೆ” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X