ಸಂಸತ್ತಿನ ಸ್ಥಾಯಿ ಸಮಿತಿಯನ್ನು ನಿಯಂತ್ರಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ಕಾಂಗ್ರೆಸ್ ಆರೋಪ

Date:

Advertisements

ಬಿಜೆಪಿ ಸಂಸತ್ತಿನ ಸ್ಥಾಯಿ ಸಮಿತಿಯನ್ನು ನಿಯಂತ್ರಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಎರಡು ಸಮಿತಿಯಲ್ಲಿ ಬಿಜೆಪಿಯ ಒಟ್ಟು 26 ಸಂಸದರು ಇದ್ದಾರೆ. ಇದು ‘ಓರ್ವ ಸಂಸದ, ಒಂದು ಸ್ಥಾಯಿ ಸಮಿತಿ’ ಎಂಬ ಸಾಂಪ್ರಾದಾಯಿಕ ನಿಯಮಕ್ಕೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “1990ರ ನಡುವೆ ಸಂಸತ್ತಿನ ಸ್ಥಾಯಿ ಸಮಿತಿಯನ್ನು ಸ್ಥಾಪನೆ ಮಾಡಿದಾಗಿನಿಂದ ‘ಓರ್ವ ಸಂಸದ, ಒಂದು ಸ್ಥಾಯಿ ಸಮಿತಿ’ ಎಂಬ ನಿಯಮವನ್ನು ಪಾಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್ ಅಧಿವೇಶನ | ವಕ್ಫ್‌ ಸೇರಿ ಒಟ್ಟು 16 ಮಸೂದೆ ಮಂಡನೆ ಸಾಧ್ಯತೆ

Advertisements

“ಆದರೆ ಈಗ ಸುಮಾರು 26 ಬಿಜೆಪಿ ಸಂಸದರು ಎರಡೂ ಸಂಸತ್ತಿನ ಸ್ಥಾಯಿ ಸಮಿತಿಯಲ್ಲಿಯೂ ಇದ್ದಾರೆ. ಇದರಿಂದಾಗಿ ಬಿಜೆಪಿ ಹೇಗೆ ಎರಡೂ ಸ್ಥಾಯಿ ಸಮಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ ಎಂಬುದು ತಿಳಿದುಬರುತ್ತಿದೆ” ಎಂದು ಕಾಂಗ್ರೆಸ್ ನಾಯಕ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ ಎರಡು ಸ್ಥಾಯಿ ಸಮಿತಿಗಳನ್ನು ಸ್ಥಾಪಿಸಲಾಗಿದೆ. ಬಿಜೆಪಿಯ ಭರ್ತುಹರಿ ಮಹ್ತಾಬ್ ಹಣಕಾಸು ಸಮಿತಿಯ ಮುಖ್ಯಸ್ಥರಾಗಿದ್ದರೆ, ಕಾಂಗ್ರೆಸ್ ಸಂಸದ ಶಶಿ ತರೂರ್ ವಿದೇಶಾಂಗ ವಹಿವಾಟು ಸ್ಥಾಯಿ ಸಮಿತಿಯ ಮುಖ್ಯಸ್ಥರಾಗಿದ್ದಾರೆ.

ಸ್ಥಾಯಿ ಸಮಿತಿಯ ಒಟ್ಟು 24 ಇಲಾಖೆಗಳಿದ್ದು, ಈ ಪೈಕಿ 11ರ ಅಧ್ಯಕ್ಷತೆಯನ್ನು ಬಿಜೆಪಿ ವಹಿಸಿಕೊಂಡಿದೆ, ನಾಲ್ಕರ ಅಧ್ಯಕ್ಷತೆ ಬಿಜೆಪಿ ಮಿತ್ರ ಪಕ್ಷದ್ದಾಗಿದೆ.

ಉಳಿದ ಹತ್ತು ಇಲಾಖೆ ಅಧ್ಯಕ್ಷತೆ ವಿಪಕ್ಷ ನಾಯಕರ ಕೈಯಲ್ಲಿದೆ. ಈ ಪೈಕಿ ಕಾಂಗ್ರೆಸ್ ನಾಯಕರು ನಾಲ್ಕು, ಡಿಎಂಕೆ ಮತ್ತು ತೃಣಮೂಲ ಕಾಂಗ್ರೆಸ್ ಸಂಸದರು ತಲಾ ಎರಡು, ಮತ್ತು ಸಮಾಜವಾದಿ ಪಕ್ಷ ಒಂದು ಇಲಾಖೆಯ ಅಧ್ಯಕ್ಷತೆಯನ್ನು ಹೊಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

Download Eedina App Android / iOS

X