ಕಾಡುಹಂದಿ ಬೇಟೆಗೆ ಹೊಂಚು ಹಾಕಿದ್ದ ಮೂವರನ್ನು ಬಂಧಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಮೇಲಾಜಿಪುರ ಸಮೀಪ ನಡೆದಿದೆ.
ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಗ್ರಾಮದ ಕುಮಾರ್, ಹಾಸನದ ಚಂದನ್ ಹಾಗೂ ಚನ್ನಪಟ್ಟಣದ ವಿವೇಕ್ ಬಂಧಿತರು. ಕಾರಿನಲ್ಲಿ ಹೊಂಚು ಹಾಕಿ ಕುಳಿತಿದ್ದ ಇವರನ್ನು ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಕಾಮಿನಿ ಕಾರ್ಖಾನೆಯಲ್ಲಿ ಅನಿಲ ಸೋರಿಕೆ; ಉತ್ಪಾದನೆ ಕೆಲಸ ಸ್ಥಗಿತಕ್ಕೆ ಸೂಚನೆ
ಬಂಧಿತರಿಂದ ಎರಡು ನಾಡ ಬಂದೂಕು, ಆರು ಸಜೀವ ಕಾಟ್ರೇಜ್ಗಳು, ಕಬ್ಬಿಣದ ಬಾಲ್ಸ್, ಕಾರು ಮತ್ತು ಬೈಕ್ ವಶಕ್ಕೆ ಪಡೆದಿದ್ದು, ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.