ಕಾಂತರಾಜ ವರದಿ ಬರಲಿ, ಹೇಗೆ ಬರೆಸಿಕೊಂಡಿದ್ದಾರೆ ನೋಡೋಣ: ಎಚ್‌ಡಿ ಕುಮಾರಸ್ವಾಮಿ

Date:

Advertisements
  • ನಾವು ಕಾಂಗ್ರೆಸ್ ಜೊತೆ ರಾಜಕೀಯದಲ್ಲಿ ಭಾಗಿಯಾಗಲು ಆಗುತ್ತಾ?
  • ಕಾಂಗ್ರೆಸ್ ನಮ್ಮನ್ನು ಲೆಕ್ಕಕ್ಕೂ ಇಟ್ಟಿಲ್ಲ. ಅವರು ಆಕಾಶದಲ್ಲಿದ್ದಾರೆ

ಕಾಂತರಾಜ ಆಯೋಗ ವರದಿ ಮಂಡನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಆ ವರದಿಯಲ್ಲಿ ಏನು ಗುಮ್ಮ ಇದೆ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಭೇಟಿಯಾಗಲು ಬಂದಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಡಾ. ಫಾರೂಖ್ ಅಬ್ದುಲ್ಲಾ ಅವರನ್ನು ಬೀಳ್ಕೊಟ್ಟ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಾಂತರಾಜ ವರದಿಯನ್ನು ಸ್ವೀಕಾರ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

ಕಾಂತರಾಜ ವರದಿ ಬರಲಿ, ಆ ವರದಿಯನ್ನು ಯಾವ ರೀತಿ ಬರೆಸಿಕೊಂಡಿದ್ದಾರೆ, ಹೇಗೆ ಬರೆಸಿದ್ದಾರೆ ಎಂಬುದನ್ನು ನೋಡೋಣ. ವಾಸ್ತವಾಂಶ ಏನಿದೆ ಗಮನಿಸೋಣ, ವರದಿ ಮಂಡನೆಗೆ ನಮ್ಮ ಸ್ವಾಗತ ಇದೆ ಎಂದಿದ್ದಾರೆ.

Advertisements

ಎಲ್ಲರೂ ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆಯೇ ಮಾತನಾಡುತ್ತಿದ್ದಾರೆ. ಎಲ್ಲಿಗೆ ಬರುತ್ತೆ ಎಂದು ನೋಡೋಣ. ನಾವು ಕಾಂಗ್ರೆಸ್ ಜೊತೆ ರಾಜಕೀಯದಲ್ಲಿ ಭಾಗಿಯಾಗಲು ಆಗುತ್ತಾ? ಕಾಂಗ್ರೆಸ್ ನವರು ನಮ್ಮನ್ನು ಲೆಕ್ಕಕ್ಕೂ ಇಟ್ಟಿಲ್ಲ. ಕಾಂಗ್ರೆಸ್‌ ನವರು ಆಕಾಶದಲ್ಲಿದ್ದಾರೆ, ನಾವು ಭೂಮಿ ಮೇಲೆ ಇದ್ದೇವೆ. ಅಂತಹವರ ಜೊತೆ ನಾವು ಚರ್ಚೆ ಮಾಡಲು ಆಗುತ್ತಾ? ಎಂದಿದ್ದಾರೆ.

ಜನ ಅವರಿಗೆ ಸಂಪೂರ್ಣ ಆಶೀರ್ವಾದ ಮಾಡಿದ್ದಾರೆ. ಅವರನ್ನು ಮತ್ತೆ ಜನ ಆಕಾಶದಿಂದ ಕೆಳಗೆ ಇಳಿಸಬೇಕು ಅಲ್ವಾ? ಅವರು ಭೂಮಿಗೆ ಬರುವ ತನಕ ನಾವು ಕಾಯಬೇಕು ತಾನೇ. ನಾವು ಆಕಾಶಕ್ಕೆ ಏರಲು ಆಗುತ್ತಾ..? ಭೂಮಿಯಲ್ಲಿ ಇದ್ದೇವೆ. ನೋಡೋಣ ಕಾಯೋಣ ಎಂದು ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದ್ದಾರೆ.

ಗ್ಯಾರಂಟಿಗಳ ಅಸಲಿ ಬಣ್ಣ ಬಯಲಾಗುತ್ತದೆ

ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಸಚಿವ ಚಲುವರಾಯಸ್ವಾಮಿ ಅವರ ವಿಡಿಯೋ ವೈರಲ್ ಆಗಿರುವ ಬಗ್ಗೆ ಗಮನ ಸೆಳೆದಾಗ, ಚುನಾವಣೆಗಾಗಿ ಜನರ ಮತ ಪಡೆಯಲು ಅಂತಹ ಸಂದರ್ಭದಲ್ಲಿ ಚೀಪ್ ಗಿಮಿಕ್ ಸರ್ವೆ ಸಾಮಾನ್ಯ ಎಂದು ಅವರು ಹೇಳಿದ್ದಾರೆ. ಆ ವಿಡಿಯೋ ನಾನು ನೋಡಿದ್ದೇನೆ, ಕೇಳಿಸಿಕೊಂಡಿದ್ದೇನೆ. ಸತ್ಯಾಂಶಗಳು ಒಂದೊಂದೇ ಹೊರಗೆ ಬರುತ್ತಿವೆ. ವೋಟ್ ಪಡೆಯಲು ನಾಡಿನ ಜನತೆಯನ್ನು ಯಾವ ರೀತಿ ದಾರಿ ತಪ್ಪಿಸಿದ್ದೇವೆ ಎಂದು ಅವರೇ ಹೇಳಿಕೊಂಡಿದ್ದಾರೆ. ಕೊನೆಪಕ್ಷ ಹೀಗೆ ಸತ್ಯ ಒಪ್ಪಿಕೊಳ್ಳುವ ಮೂಲಕ ತಮ್ಮ ಅಸಲಿ ಸಾಚಾತನ ತೋರಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕುಟುಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರಿಂದಲೇ ಗ್ಯಾರಂಟಿ ಯೋಜನೆಗೆ ಚಾಲನೆ; ಸಿಎಂ ಸಿದ್ದರಾಮಯ್ಯ

ರಾಜ್ಯದ ಪರಿಸ್ಥಿತಿ ಹೇಗಿದೆ ಎಂಬುದನ್ನು ಉಪ ಮುಖ್ಯಮಂತ್ರಿ ಅವರು ಕಣ್ಣಿಗೆ ಕಟ್ಟಿದಂತೆ ಹೇಳಿದ್ದಾರೆ. ಜಲಮಂಡಳಿ ನೌಕರರಿಗೆ ಸಂಬಳ ನೀಡುವಷ್ಟು ಹಣ ಇಲ್ಲ, ಖಜಾನೆ ಖಾಲಿಯಾಗಿದೆ ಎಂದು ಹೇಳಿದ್ದಾರೆ. ಈಗಾಗಲೇ ವಿದ್ಯುತ್ ದರ ಹೆಚ್ಚಿಸಿದ್ದಾರೆ. ನೀರಿನ ದರವನ್ನೂ ಹೆಚ್ಚಳ ಮಾಡುವುದಕ್ಕೆ ಅವರು ಪರೋಕ್ಷ ಸುಳಿವು ನೀಡಿದ್ದಾರೆ. ಅಲ್ಲಿಗೆ ಈ ಸರ್ಕಾರದ ನಿಜ ಬಣ್ಣ ಏನು ಎನ್ನುವುದು ಜನರಿಗೆ ಅರ್ಥವಾಗುತ್ತಿದೆ. ಒಂದು ಕೈಯ್ಯಲ್ಲಿ ಕೊಡೋದು, ಎರಡು ಕೈಯ್ಯಲ್ಲಿ ಕಿತ್ತುಕೊಳ್ಳೋದು. ಇದು ಈ ಸರ್ಕಾರದ ಸಾಮಾಜಿಕ ನ್ಯಾಯ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಒಂದು ಕಡೆ ಗ್ಯಾರಂಟಿ ಎನ್ನುವುದು ಎಲ್ಲರಿಗೂ ಉಚಿತ ಖಚಿತ ಎಂದು ಹೇಳುತ್ತಿದ್ದರು. ಈಗ ಅದರ ಜತೆಗೆ ದರ ಏರಿಕೆಯೂ ಖಚಿತ ಆಗಿದೆ. ಈಗ ಬೆಲೆ ಏರಿಕೆಯೂ ನಿಶ್ಚಿತ ಎಂದು ಹೇಳುತ್ತಿದ್ದಾರೆ. ಬೆಲೆ ಏರಿಕೆ ಗ್ಯಾರಂಟಿಯೇ ಜನರಿಗೆ ಗಟ್ಟಿ. ಜನರಿಗೆ ಇನ್ನು ಯಾವ ಯಾವ ಕೊಡುಗೆ ಕೊಡುತ್ತಾರೆ ಎಂದು ಸ್ವಲ್ಪ ದಿನ ಕಾದು ನೋಡೋಣ ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X