ಗುಬ್ಬಿ | ಕಡಬ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವಕ್ಕೆ ಚಾಲನೆ

Date:

Advertisements

 ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಸಮಯ ಪಾಲನೆ ಮಾಡಿದಾಗ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಐಟಿ ಉದ್ಯೋಗಿ, ನಿರ್ದೇಶ್ ಸ್ವಯಂ ಸೇವಕ ತಂಡದ ಮುಖ್ಯಸ್ಥೆ ವೀಣಾ ತಿಳಿಸಿದರು.

ಗುಬ್ಬಿ  ತಾಲೂಕಿನ  ಕಡಬ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ಶಾಲಾ ವಿಭಾಗದಿಂದ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು,  ಪೋಷಕರು ಮೊದಲು ತಮ್ಮ ಜೀವನದಲ್ಲಿ ಶಿಸ್ತು ಮತ್ತು ಸಮಯದ ಬಗ್ಗೆ ಬದ್ಧತೆ ಬೆಳೆಸಿಕೊಂಡಾಗ ತಂದೆ ತಾಯಿಗಳನ್ನು ನೋಡಿ ಮಕ್ಕಳು ಕಲಿಯುತ್ತಾರೆ. ಪೋಷಕರು ಮೊದಲು ಶಿಸ್ತು ಬೆಳೆಸಿಕೊಂಡು ಮಕ್ಕಳಿಗೆ ಮಾದರಿಯಾಗಿ ಇರಬೇಕೆಂದು ಸಲಹೆ ನೀಡಿದರು.

1000976739

ಪ್ರಾಂಶುಪಾಲ ಪಾಲಾಕ್ಷ ಆರ್ ಹಾಗಲವಾಡಿ ಮಾತನಾಡಿ ಸರ್ಕಾರಿ ಶಾಲೆಗಳು ಉಳಿಯಬೇಕಾದರೆ ಗ್ರಾಮಸ್ಥರ ಪಾತ್ರ ಪ್ರಮುಖವಾಗಿರುತ್ತದೆ. ಸರ್ಕಾರಿ ಶಾಲೆಗಳ ಉಳಿವಿಗೆ ಶಿಕ್ಷಕರ ಜೊತೆಗೆ ಪೋಷಕರು ಕೈಜೋಡಿಸಿದಾಗ ಶಾಲೆಗಳ ಅಭಿವೃದ್ಧಿ ಸಾಧ್ಯವಾಗುತ್ತದೆ. ಬಂಡವಾಳ ಶಾಹಿಗಳ ವ್ಯವಸ್ಥೆಯಲ್ಲಿ ಬಡವರ ಮಕ್ಕಳ ಶಿಕ್ಷಣ ತೊಂದರೆಗೆ ಸಿಲುಕುತ್ತದೆ. ಸರ್ಕಾರಿ ಶಾಲೆಯಲ್ಲಿ ಓದಿ ಸಾಧನೆ ಮಾಡಿದ ಮಹನೀಯರ ಹಲವಾರು ನಿದರ್ಶನಗಳು ನಮ್ಮ ಕಣ್ಣು ಮುಂದೆ ಇವೆ. ಅದಕ್ಕೆ ಕಾರಣ ಬಡತನ, ನೋವು, ನಲಿವುಗಳನ್ನು ಅವರು ಕಂಡಿರುತ್ತಾರೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಾರಣರಾಗಬೇಕು ಎಂದು ತಿಳಿಸಿದರು.

Advertisements
1000976738

ಎಸ್ ಡಿ ಎಂ ಸಿ ಅಧ್ಯಕ್ಷ ಶಿವಕುಮಾರ್ ಮಾತನಾಡಿ ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ, ಪೋಷಕರು ತಮ್ಮ ಮನೆಯಲ್ಲಿ ಮಕ್ಕಳಿಗೆ ಕಲಿಕೆಯ ಆಸಕ್ತಿಯನ್ನು ಬೆಳೆಸಬೇಕು. ಆಗ ತಮ್ಮ ಮಕ್ಕಳು ಸಮಾಜದಲ್ಲಿ ಉನ್ನತ ಮಟ್ಟದ ಹುದ್ದೆಯನ್ನು ಅಲಂಕರಿಸುತ್ತಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಇಂದಿರಾ, ನಿರ್ದೇಶ್ ಸ್ವಯಂ ಸೇವಕ ತಂಡದ ಸದಸ್ಯರಾದ ಗೀತಾ, ರೇಣು, ರೇಷ್ಮಾ, ಇಸ್ಮಾಯಿಲ್, ನಾಗರಾಜು , ಮುಕ್ಕಣ್ಣಪ್ಪ, ಸಿದ್ದಣ್ಣ ವಸಿಮ್ ಮಾಜಿ ಗ್ರಾಪಂ ಸದಸ್ಯ ಚನ್ನಬಸವಣ್ಣ ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X