ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಿಂದ ಹಿಂದಿರುಗುತ್ತಿದ್ದ ಬೆಳಗಾವಿಯ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಗುರುವಾರ ನಿಧನರಾಗಿರುವ ಘಟನೆ ನಡೆದಿದೆ.
ಬೆಳಗಾವಿಯ ದೇಶಪಾಂಡೆ ಗಲ್ಲಿಯ ರವಿ ಜಾತರ್(62) ಮೃತ ದುರ್ದೈವಿ. ಇವರು ಪ್ರಯಾಗ್‌ರಾಜ್‌ನಿಂದ ತಮ್ಮ ಸಂಬಂಧಿಕರು ಮತ್ತು ಸ್ನೇಹಿತರೊಂದಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಪುಣೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಿಜಯನಗರ | ಐಐಎಸ್‌ಸಿಯಲ್ಲಿ ದಲಿತ ಪ್ರಾಧ್ಯಾಪಕರಿಗೆ ನಿಂದನೆ; ತಪ್ಪಿತಸ್ಥ ಜಾತಿವಾದಿಗಳ ವಿರುದ್ಧ ಕ್ರಮಕ್ಕೆ ಡಿ ಬಸವರಾಜ್ ಆಗ್ರಹ
ಕುಂಭಮೇಳದ ಕಾಲ್ತುಳಿತದಲ್ಲಿ ಈಗಾಗಲೇ ಜ್ಯೋತಿ ಹತ್ತರವಾಠ, ಮೇಘಾ ಹತ್ತರವಾಠ, ಮಹಾದೇವಿ ಬಾವನೂರ, ಅರುಣ್ ಕೋಪರ್ಡೆ ಮೃತಪಟ್ಟಿದ್ದು, ಸರೋಜಿನಿ ನಡುವಿನಹಳ್ಳಿ, ಕಾಂಚನ್ ಕೋರ್ಪಡೆ ಸೇರಿದಂತೆ ಇತರ ಇಬ್ಬರು ಗಾಯಗೊಂಡಿದ್ದಾರೆ.