ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ನಿವಾಸಿ ರಫೀಕ್ ಬಾಬುಸಾಬ ತಿಗಡಿ (38) ಸಾಲಗಾರರ ಕಾಟ ತಾಲಲಾರದೆ ಬುಲೇರೋ ಗೂಡ್ಸ್ ವಾಹನಕ್ಕೆ ನೇಣು ಬಿಗಿದುಕೊಂಡು ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಖಾಸಗಿ ವ್ಯಕ್ತಿಗಳ ಬಳಿ ₹6 ಲಕ್ಷಕ್ಕೂ ಅಧಿಕ ಸಾಲ ಪಡೆಕೊಂಡಿದ್ದರು. ಸಾಲಗಾರರು ಪದೇಪದೆ ಮನೆಗೆ ಬಂದು ಕಿರುಕುಳ ನೀಡಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.