ಶಿಕ್ಷಕರು, ಉಪನ್ಯಾಸರ ನೇಮಕಾತಿ ವಯೋಮಿತಿ ಎರಡು ವರ್ಷ ಸಡಿಲಿಕೆ

Date:

Advertisements

ಸರ್ಕಾರಿ ಮತ್ತು ಅನುದಾನಿತ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ಎರಡು ವರ್ಷ ಸಡಿಲಿಕೆ ಮಾಡಲಾಗಿದೆ.

ಕೋವಿಡ್ ಕಾರಣದಿಂದ ಆರ್ಥಿಕ ಮಿತವ್ಯಯದ ನಿರ್ಬಂಧ ವಿಧಿಸಲಾಗಿತ್ತು. ಹಾಗಾಗಿ, ನೇಮಕಾತಿಗಳು ವಿಳಂಬವಾಗಿದ್ದವು. ಅನುದಾನಿತ ಸಂಸ್ಥೆಗಳಲ್ಲಿ ಅನುದಾನರಹಿತ ಹುದ್ದೆಗಳನ್ನು ವೇತನಾನುದಾನಕ್ಕೆ ಒಳಪಡಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ಹಲವು ಆಕಾಂಕ್ಷಿಗಳ ವಯೋಮಿತಿ ಮೀರುತ್ತಿದೆ. ಈ ಎಲ್ಲ ಕಾರಣಗಳಿಂದ ವಯೋಮಿತಿಯ ಸಡಿಲಿಕೆ ನೀಡಲಾಗಿದೆ.

ಈ ನಿಯಮ ಪದವಿಪೂರ್ವ ಕಾಲೇಜಿನಲ್ಲಿ ಖಾಲಿ ಇರುವ 788 ನಾನಾ ವಿಷಯಗಳ ಉಪನ್ಯಾಸಕರ ಹುದ್ದೆಗಳ ಭರ್ತಿಗೂ ಅನ್ವಯಿಸುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶದಲ್ಲಿ ವಿವರಿಸಿದೆ.

Advertisements

ವಯೋಮಿತಿ ಸಡಿಲಿಕೆಯ ಅವಕಾಶವನ್ನು 2022ರ ಜೂನ್ 23ರಿಂದ ಒಂದು ವರ್ಷದ ಅವಧಿಗೆ ಅನ್ವಯಿಸಿ ಮಿತಿಗೊಳಿಸಿರುವುದರಿಂದ ಇನ್ನು 15 ದಿನಗಳ ಒಳಗೆ ಅಧಿಸೂಚನೆ ಹೊರಡಿಸುವ ನೇಮಕಾತಿಗಳಿಗೆ ಮಾತ್ರ ಅನ್ವಯವಾಗುತ್ತದೆ. ಹೆಚ್ಚಿನ ಪ್ರಯೋಜನವಾಗುವುದಿಲ್ಲ ಎಂದು ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಎಡಿಜಿಪಿ ಅಲೋಕ್‌ ಕುಮಾರ್‌ ಸೇರಿ ನಾಲ್ವರು ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X