ವಿಜಯಪುರ | ಕಾಲುವೆಗೆ ಈಜಲು ಹೋಗಿದ್ದ ಯುವಕ ಶವವಾಗಿ ಪತ್ತೆ

Date:

Advertisements

ನಿನ್ನೆ(ಜ.30) ಸಂಜೆ ಸ್ನೇಹಿತರೊಂದಿಗೆ ಕಾಲುವೆಗೆ ಈಜಲು ಹೋಗಿದ್ದ ಯುವಕನೊಬ್ಬ ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ಹೊರವಲಯದ ಹಡಲಗೇರಿಯಲ್ಲಿ ನಡೆದಿದೆ.

ಮೃತನನ್ನು ಯುವಕನನ್ನು ಪಟ್ಟಣದ ವಿದ್ಯಾನಗರ ನಿವಾಸಿ ಕಾರ್ತಿಕ್ ಚೆನ್ನಯ್ಯ ಹಿರೇಮಠ(18) ಎಂದು ಗುರುತಿಸಲಾಗಿದೆ. ಕಾರ್ತಿಕ್ ಪಟ್ಟಣದ ಖಾಸಗಿ ಟ್ರಾವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಕೌದಿ ಭಾರತದ ಬಹುಸಂಸ್ಕೃತಿಯನ್ನು ಪ್ರತಿಬಿಂಬಿಸುವ ಬಟ್ಟೆ: ರಂಗಕಲಾವಿದೆ ಬಿ ಜಯಶ್ರೀ

Advertisements

ಗುರುವಾರ ಸಂಜೆ ಅಗ್ನಿಶಾಮಕ ದಳ ಶವಕ್ಕಾಗಿ ಹುಡುಕಾಡಿದ್ದರೂ ಪತ್ತೆಯಾಗಿರಲಿಲ್ಲ. ಕಾಲುವೆಯಲ್ಲಿ ನೀರು ಹರಿಯುವಿಕೆ ನಿಲ್ಲಿಸಿದ ಮೇಲೆ ಶವ ಪತ್ತೆಯಾಗಿದೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ತಿಕ್‌ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಆತ್ಮಹತ್ಯೆಯೋ, ಹತ್ಯೆಯೋ ಅಥವಾ ಆಕಸ್ಮಿಕ ಸಾವೋ ಎನ್ನುವ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X