ಬಿಪರ್‌ಜಾಯ್ ಚಂಡಮಾರುತ | ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Date:

Advertisements
  • ಈ ಚಂಡಮಾರುತಕ್ಕೆ ಬಿಪರ್‌ಜಾಯ್ ಎಂಬ ಹೆಸರು ಕೊಟ್ಟಿದ್ದು ಬಾಂಗ್ಲಾದೇಶ
  • ಕಡಲ ತೀರದಲ್ಲಿ 2.3 ರಿಂದ 3.2 ಮೀ ಎತ್ತರದ ಅಲೆಗಳು ಅಪ್ಪಳಿಸುವ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್ ಚಂಡಮಾರುತ ಪ್ರಭಾವ ಹೆಚ್ಚಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಜೂ.11 ಮತ್ತು 12ರಂದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಹಾಗೂ ಚಿತ್ರದುರ್ಗ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿಯೂ ಮಳೆಯ ಸೂಚನೆ ಇದ್ದು ಎಲ್ಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್‌’ ಘೋಷಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲೂ ಮಳೆಯ ಅಬ್ಬರ ಇರಲಿದೆ.

Advertisements

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಬಾಗಲಕೋಟೆ, ಧಾರವಾಡ, ಹಾವೇರಿಯಲ್ಲಿ ಒಣಹವೆ ಇರಲಿದೆ. ವಿಜಯನಗರ, ದಾವಣಗೆರೆಯಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ.

ಸಂಜೆ ಅಥವಾ ರಾತ್ರಿ ವೇಳೆ ಬೆಂಗಳೂರಿನಲ್ಲಿ ಮಳೆ

ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಮೀನುಗಾರರಿಗೆ ಎಚ್ಚರಿಕೆ

ರಾಜ್ಯದ ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಂಗಳೂರಿನಿಂದ ಕಾರವಾರದವರೆಗೆ ಕಡಲ ತೀರದಲ್ಲಿ 2.3 ರಿಂದ 3.2 ಮೀ. ಎತ್ತರದ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ.

ಸಾರ್ವಜನಿಕರಿಗೆ ಸೂಚನೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆ, ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಜೂ.11 ರವರೆಗೆ ಸಾರ್ವಜನಿಕರು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರಿಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದೆ. ಪ್ರವಾಸಿಗರು, ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ.

ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ಬಿಪರ್‌ಜಾಯ್ ಚಂಡಮಾರುತದ ಪರಿಣಾಮವಾಗಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿದ್ದು, ಜೂನ್‌ 9 ರಂದು ಮುಂಗಾರು ಕೇರಳ ಪ್ರವೇಶ ಮಾಡುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಪರ್‌ಜಾಯ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡು ಪಾಕಿಸ್ತಾನದ ಕಡೆಗೆ ಸಾಗುತ್ತಿದೆ. ಇನ್ನೆರಡು ದಿನಗಳು ಗುಜರಾತ್‌ ಹಾಗೂ ಮಹಾರಾಷ್ಟ್ರದ ಕರಾವಳಿ ತೀರಗಳಲ್ಲಿ ಚಂಡಮಾರುತದ ಪರಿಣಾಮವಾಗಿ ಮಳೆ ಬೀಳಬಹುದು. ಕರ್ನಾಟಕ ಕರಾವಳಿಗೂ ಕೂಡ ಮಳೆ ಆಗಬಹುದು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು

ಬಿಪರ್‌ಜಾಯ್‌ ಚಂಡಮಾರುತದ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಹವಾಮಾನ ಇಲಾಖೆ ತಜ್ಞ ಪ್ರಸಾದ್ ಡಿ, “ಈ ಚಂಡಮಾರುತಕ್ಕೆ ಬಿಪರ್‌ಜಾಯ್ ಎಂಬ ಹೆಸರು ಕೊಟ್ಟಿದ್ದು ಬಾಂಗ್ಲಾದೇಶ. ಕನ್ನಡದಲ್ಲಿ ಇದಕ್ಕೆ ದುರಂತ, ವಿಪತ್ತು, ಹಾನಿ ಎಂಬ ಅರ್ಥ ಬರುತ್ತದೆ. ಪ್ರಸ್ತುತ ಈ ಚಂಡಮಾರುತ ಅರಬ್ಬಿ ಸಮುದ್ರದಲ್ಲಿ ಇದೆ. ಇದರ ಪ್ರಭಾವ ಕರ್ನಾಟಕಕ್ಕೆ ಮೇಲೆ ಬೀರುವುದಿಲ್ಲ. ಉತ್ತರ ದಿಕ್ಕಿನಿಂದ, ವಾಯವ್ಯ ದಿಕ್ಕಿನೆಡೆಗೆ ಹಾದು ಕರಾಚಿ ಅಥವಾ ಗಲ್ಫ್ ದೇಶಗಳಿಗೆ ತಲುಪುತ್ತದೆ. ಉತ್ತರ ದಿಕ್ಕಿಗೆ ಬರುವ ಹಿನ್ನೆಲೆ, ಕರಾವಳಿಯ ಭಾಗದಲ್ಲಿ ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ” ಎಂದರು.

“ಈ ತಿಂಗಳು ಈ ಚಂಡಮಾರುತದ ತೀವ್ರತೆ ಹೆಚ್ಚಾಗಿರುತ್ತದೆ. ಬಿರುಗಾಳಿ ಇವತ್ತು ಮತ್ತು ನಾಳೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುವ ಹೆಚ್ಚಾಗಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ” ಎಂದು ತಿಳಿಸಿದರು.

“ಬೆಂಗಳೂರಿಗೆ ಮುಂದಿನ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂಗಾರು ಇನ್ನೂ ಕೇರಳ ಪ್ರವೇಶಿಸಿಲ್ಲ. ಇವತ್ತು ಮತ್ತು ನಾಳೆ ಮುಂಗಾರು ಪ್ರವೇಶಿಸಬಹುದು. ಬಳಿಕ ಕರ್ನಾಟಕಕ್ಕೆ ಪ್ರವೇಶಿಸಲಿದೆ. ಈ ಮುಂಗಾರು ಮಳೆ ಬೆಳಗ್ಗೆ ಮತ್ತು ರಾತ್ರಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X