ಭಾರತ ಶೀಘ್ರವೇ 3ನೇ ಅರ್ಥವ್ಯವಸ್ಥೆ ಆಗಲಿದೆ: ರಾಷ್ಟ್ರಪತಿ ಮುರ್ಮು

Date:

Advertisements

ಭಾರತದಲ್ಲಿನ ಮಧ್ಯಮವರ್ಗದ ಜನರು ಹೊಂದಿರುವ ಸ್ವಂತ ಸೂರು ಕಟ್ಟಿಕೊಳ್ಳಬೇಕೆಂಬ ಕನಸನ್ನು ಸಾಕಾರಗೊಳಿಸಲು ಸರ್ಕಾರ ಬದ್ದವಾಗಿದೆ. ದೇಶದಲ್ಲಿ ಮೆಟ್ರೋ ಜಾಲವು 1,000 ಕಿ.ಮೀ.ಗಳನ್ನು ದಾಟಿದೆ. ಶೀಘ್ರದಲ್ಲಿ ಭಾರತವು ವಿಶ್ವದ 3ನೇ ದೊಡ್ಡ ಆರ್ಥಿಕತೆಯನ್ನು ಹೊಂದಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಹೇಳಿದರು.

ಸಂಸತ್ತಿನಲ್ಲಿ ಆರಂಭವಾಗಿರುವ ಕೇಂದ್ರ ಬಜೆಟ್‌ ಅಧಿವೇಶನದ ಮೊದಲ ದಿನ ಸಂಸತ್‌ನ ಉಭಯ ಸದನಗಳನ್ನು ಉದ್ದೇಶಿಸಿ ಮುರ್ಮು ಮಾತನಾಡಿದರು. “ದೇಶದ ವಾಯುಯಾನ ವಲಯವು ಪ್ರಗತಿ ಸಾಧಿಸುತ್ತಿದೆ. ವಿಮಾನಯಾನ ಸೇವೆ ಒದಗಿಸುವ ಕಂಪನಿಗಳು ಸುಮಾರು 1,700 ಹೊಸ ವಿಮಾನಗಳ ಖರೀದಿಗೆ ಮುಂದಾಗಿವೆ. ರೈಲ್ವೇ ಜಾಲವೂ ವಿಸ್ತರಿಸುತ್ತಿದೆ” ಎಂದರು.

“ಭಾರತದಲ್ಲಿರುವ 70 ವರ್ಷ ಮೇಲ್ಪಟ್ಟ ಆರು ಕೋಟಿ ಜನರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಆರೋಗ್ಯ ವಿಮೆ ನೀಡಲಾಗುತ್ತಿದೆ. ಮಹಿಳೆಯರ ಸಬಲೀಕರಣಕ್ಕೆ ಒತ್ತುಕೊಡಲಾಗಿದೆ. ಗ್ರಾಮೀಣಾಭಿವೃದ್ಧಿ ಯೋಜನೆಯಡಿ 91 ಲಕ್ಷ ಸ್ವಸಹಾಯ ಗುಂಪುಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ” ಎಂದು ತಿಳಿಸಿದರು.

Advertisements

“ಹೊಸ ಶಿಕ್ಷಣ ನೀತಿಯಿಂದಾಗಿ ಯುವ ಸಮುದಾಯಕ್ಕೆ ಉತ್ತಮ ಶಿಕ್ಷಣ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಜನರನ್ನು ಆರ್ಥಿಕ ವ್ಯವಸ್ಥೆಯೊಳಗೆ ತರುವ ಕೆಲಸಗಳು ವೇಗವಾಗಿ ನಡೆದಿವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ನಾನಾ ಯೋಜನೆಗಳನ್ನು ಸರ್ಕಾರ ಅನುಷ್ಠಾನಗೊಳಿಸಿದೆ” ಎಂದರು.

“ವಕ್ಫ್‌ ಆಸ್ತಿ, ಒಂದು ದೇಶ – ಒಂದು ಚುನಾವಣೆ ವಿಷಯಗಳಲ್ಲಿ ಸರ್ಕಾರವು ದೃಢ ನಿರ್ಧಾರ ತೆಗೆದುಕೊಂಡಿದೆ. ವಿಶೇಷ ಸ್ಥಾನಮಾನ ರದ್ದತಿಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಬದಲಾಗಿದೆ. ಈಶಾನ್ಯ ರಾಜ್ಯಗಳ ಅಭಿವೃದ್ದಿಗೆ ಹೆಚ್ಚು ಒತ್ತುಕೊಡಲಾಗಿದೆ” ಎಂದು ವಿವರಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X