ಆರ್‌ಬಿಐ ಹಣಕಾಸು ನೀತಿ ಸಭೆ ಮುಕ್ತಾಯ; ರೆಪೊ ದರ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧಾರ

Date:

Advertisements

ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿರುವುದಾಗಿ ಆರ್‌ಬಿಐ ಗವರ್ನ್‌ರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.

“ಜೂನ್ 6ರಿಂದ ಜೂನ್ 8ರವರೆಗೆ ನಡೆದ ಹಣಕಾಸು ನೀತಿ ಸಮಿತಿಯ ಅಂತಿಮ ದಿನದಲ್ಲಿ ಸದ್ಯದ ರೆಪೊ ದರ ಶೇಕಡ 6.5ರಷ್ಟಿರುವುದನ್ನು ಯಥಾಸ್ಥಿತಿ ಕಾಯ್ದುಕೊಳ್ಳುವುದಾಗಿ ನಿರ್ಧರಿಸಲಾಗಿದೆ. ಹಣದುಬ್ಬರ ಶೇಕಡ 5.1ರಷ್ಟಿದೆ. ದೇಶದಲ್ಲಿ ಈ ವರ್ಷದ ಮಾರ್ಚ್ -ಏಪ್ರಿಲ್ ಅವಧಿಯಲ್ಲಿ ಗ್ರಾಹಕ ಬೆಲೆ ಹಣದುಬ್ಬರವು ಕಡಿಮೆಯಾಗಿದ್ದು, ಸಹಿಷ್ಣುತೆಯ ಹಂತಕ್ಕೆ ತಲುಪಿದೆ. ಸ್ಥಾಯಿ ಠೇವಣಿ ಸೌಲಭ್ಯ (ಎಸ್‌ಡಿಎಫ್) ಶೇಕಡ 6.25ರಲ್ಲೇ ಉಳಿದಿದ್ದು ಕನಿಷ್ಠ ಸ್ಥಾಯಿ ಸೌಲಭ್ಯ (ಎಂಎಫ್‌ಪಿ) ಮತ್ತು ಬ್ಯಾಂಕ್‌ ದರಗಳು ಶೇ.6.75 ರಷ್ಟಿವೆ. ದೇಶೀಯ ಬೇಡಿಕೆಯ ಸ್ಥಿತಿಯು ಬೆಳವಣಿಗೆಗೆ ಬೆಂಬಲವಾಗಿ ಉಳಿದಿದೆ. ಗ್ರಾಮೀಣ ಪ್ರದೇಶದ ಬೇಡಿಕೆ ಪುನಶ್ಚೇತನದ ಹಾದಿಯಲ್ಲಿದೆ” ಎಂದು ತಿಳಿಸಿದ್ದಾರೆ.

ಮುಂದಿನ ಅವಧಿಯಲ್ಲೂ ಪರಿಸ್ಥಿತಿಗೆ ಅನುಗುಣವಾಗಿ ನೀತಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ. ಸಣ್ಣ ಹಣಕಾಸು ಬ್ಯಾಂಕ್‌ಗಳನ್ನು ಹೊರತುಪಡಿಸಿ ವಾಣಿಜ್ಯ ಬ್ಯಾಂಕ್‌ಗಳು ಸಾಲ ಕ್ರೋಡೀಕರಣಕ್ಕೆ ಸಂಬಂಧಿಸಿದಂತೆ ತಮ್ಮದೇ ಆದ ಮಿತಿಗಳನ್ನು ವಿಧಿಸಬಹುದು ಎಂದು ಆರ್‌ಬಿಐ ಬಹಿರಂಗಪಡಿಸಿದೆ.

Advertisements

ರೆಪೋ ದರ ಎಂದರೇನು?

ರೆಪೋ ದರ ಎಂದರೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಕೊಡುವ ಸಾಲದ ಮೇಲಿನ ಬಡ್ಡಿ ದರವಾಗಿದೆ. ವಾಣಿಜ್ಯ ಬ್ಯಾಂಕುಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತವೆ. ಈ ಹಣಕ್ಕೆ ಬಡ್ಡಿ ನೀಡುವ ದರ ಇದಾಗಿದೆ.

ರೆಪೋ ದರವನ್ನು ಹೇಗೆ ವಿಧಿಸಲಾಗುತ್ತದೆ?

ತಾತ್ಕಾಲಿಕ ಅವಧಿಯ ಅಗತ್ಯ ಪೂರೈಸಲು ಭಾರತೀಯ ರಿಸರ್ವ್ ಬ್ಯಾಂಕಿನಿಂದ ಬ್ಯಾಂಕುಗಳು ಫಂಡ್ ಪಡೆಯುತ್ತವೆ. ಬ್ಯಾಂಕುಗಳು ಪಡೆದ ಸಾಲದ ಮೇಲೆ ಆರ್‌ಬಿಐ ಕೊಂಚ ಬಡ್ಡಿದರ ವಿಧಿಸುತ್ತದೆ. ಈ ಬಡ್ಡಿದರವೇ ರೆಪೊ ದರವಾಗಿದೆ. ಬ್ಯಾಂಕುಗಳಿಗೆ ಸಾಲ ಪಡೆಯುವುದು ಹೆಚ್ಚು ಕಠಿಣಗೊಳಿಸಲು ಆರ್‌ಬಿಐ ನಿರ್ಧರಿಸಿದರೆ ರೆಪೊ ದರಗಳನ್ನು ಹೆಚ್ಚಿಸಲಾಗುತ್ತದೆ. ರೆಪೊ ದರ ತಗ್ಗಿಸಿದರೆ ಬ್ಯಾಂಕುಗಳು ಆರ್‌ಬಿಐನಿಂದ ಕಡಿಮೆ ಬಡ್ಡಿದರಕ್ಕೆ ಸಾಲ ಪಡೆಯಬಹುದಾಗಿದೆ.

ರೆಪೋ ದರದ ಇಳಿಕೆಯಿಂದ ಲಾಭವೇನು?

ಹಣದ ಬಿಕ್ಕಟ್ಟು ಅಂದರೆ ಮಾರುಕಟ್ಟೆಯಲ್ಲಿ ಹಣದ ಕೊರತೆ ಎದುರಾದಾಗ ರಿಸರ್ವ್‌ ಬ್ಯಾಂಕ್‌, ರೆಪೋ ದರವನ್ನು ಇಳಿಸುವ ಕ್ರಮ ಕೈಗೊಳ್ಳುತ್ತದೆ. ಆರ್‌ಬಿಐನಿಂದ ಕಡಿಮೆ ಬಡ್ಡಿಗೆ ಹಣ ಸಿಗುವುದರಿಂದ ಅದರ ಲಾಭವನ್ನು ಬ್ಯಾಂಕುಗಳು ತನ್ನ ಗ್ರಾಹಕರಿಗೂ ವರ್ಗಾಯಿಸಬಹುದು. ಇದರಿಂದ ಬ್ಯಾಂಕ್ ಗ್ರಾಹಕರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲಗಳು ಲಭ್ಯವಾಗುತ್ತದೆ. ಮಾರುಕಟ್ಟೆಗೆ ಹೆಚ್ಚು ಹಣ ಹರಿಯುತ್ತದೆ. ಇದು ಆರ್ಥಿಕತೆಗೆ ಬಲ ನೀಡುವ ನಿರೀಕ್ಷೆ ಇದೆ. ಜೊತೆಗೆ ಬ್ಯಾಂಕ್‌ಗಳಲ್ಲಿನ ಸಾಲದ ಬಡ್ಡಿ ದರವು ಇಳಿಕೆಯಾಗುತ್ತದೆ.

ರಿವರ್ಸ್ ರೆಪೊ ದರ ಎಂದರೇನು?

ಬ್ಯಾಂಕುಗಳಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) ಹಣ ಸಾಲ ಪಡೆದರೆ, ಅದರ ಮೇಲೆ ವಿಧಿಸುವ ಬಡ್ಡಿದರವನ್ನು ರಿವರ್ಸ್ ರೆಪೊ ದರ ಎನ್ನಲಾಗುತ್ತದೆ. ಹೀಗಾಗಿ ಇದು ರೆಪೊ ದರಕ್ಕಿಂತ ಸಂಪೂರ್ಣ ವಿಭಿನ್ನ. ಬ್ಯಾಂಕಿಂಗ್ ವಲಯದಲ್ಲಿ ಸಮತೋಲನ ಸಾಧಿಸಲು ರಿವರ್ಸ್ ರೆಪೋ ದರ ಪ್ರಮುಖ ಪಾತ್ರ ವಹಿಸುತ್ತದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶದಲ್ಲಿ ಮತ್ತೆ ಶೂಟೌಟ್: ಕೋರ್ಟ್‌ ಆವರಣದಲ್ಲಿ ವಕೀಲನ ವೇಷದಲ್ಲಿ ಬಂದು ಹಂತಕನ ಹತ್ಯೆ

ರಿವರ್ಸ್ ರೆಪೊ ದರ ಹೇಗೆ ವಿಧಿಸಲಾಗುತ್ತದೆ?

ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಅತ್ಯಧಿಕ ಹಣವು ಚಲಾವಣೆಯಾಗುತ್ತಿದೆ ಎಂದು ಅನಿಸಿದರೆ ಆರ್‌ಬಿಐ ರಿವರ್ಸ್ ರೆಪೊ ಎಂಬ ಅಸ್ತ್ರವನ್ನು ಬಳಸುತ್ತದೆ. ಎಲ್ಲದರಲ್ಲೂ ರಿವರ್ಸ್ ರೆಪೊ ದರ ಹೆಚ್ಚಾಗಿದೆಯೆಂದರೆ ಆರ್‌ಬಿಐ ಬ್ಯಾಂಕುಗಳಿಂದ ಆಕರ್ಷಕ ಬಡ್ಡಿದರಕ್ಕೆ ಹಣ ಸಾಲ ಪಡೆಯುತ್ತಿದೆ ಎಂದರ್ಥ.

ಬ್ಯಾಂಕುಗಳು ಕೂಡ ಆರ್‌ಬಿಐಗೆ ಸಂಪೂರ್ಣ ಖುಷಿಯಿಂದಲೇ ಸಾಲ ನೀಡುತ್ತವೆ. ಯಾಕೆಂದರೆ ಸುರಕ್ಷಿತ ಕೈಗೆ ಸಾಲ ಹಸ್ತಾಂತರಿಸಲಾಗಿದೆ ಎಂಬ ಸಂತೃಪ್ತಿ ಒಂದೆಡೆ ಮತ್ತು ಸಮರ್ಪಕ ಬಡ್ಡಿದರ ದೊರಕುತ್ತದೆ ಎನ್ನುವ ತೃಪ್ತಿ ಇನ್ನೊಂದೆಡೆ ಬ್ಯಾಂಕುಗಳಿಗಿರುತ್ತವೆ. ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಹಣದ ಹರಿವು ಸಮರ್ಪಕವಾಗಿರಲು ಆರ್‌ಬಿಐ ರೆಪೊ ಮತ್ತು ರಿವರ್ಸ್ ರೆಪೊ ಎಂಬ ಹರಿಗೋಲು ಬಳಕೆ ಮಾಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X