‘ಮರಣ ಇಚ್ಛೆಯ ಉಯಿಲು’ ರಾಜ್ಯದಲ್ಲಿ ಕಾರ್ಯಗತ, ದಯಾಮರಣ ಹಕ್ಕು ನೀಡಿ ಸರ್ಕಾರ ಆದೇಶ

Date:

Advertisements

ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ರೋಗಿಯ ಘನತೆಯಿಂದ ಸಾಯುವ ಹಕ್ಕಿಗಾಗಿ ಸುಪ್ರೀಂ ಕೋರ್ಟ್‌ ನೀಡಿರುವ ನಿರ್ದೇಶನವನ್ನು ಜಾರಿಗೆ ತರಲು ರಾಜ್ಯ ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಆದೇಶ ಪ್ರತಿ ಹಂಚಿಕೊಂಡಿದ್ದಾರೆ.

ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ಮಾರಕ ರೋಗದಿಂದ ಬಳಲುತ್ತಿರುವವರಿಗೆ ಘನತೆಯಿಂದ ಸಾಯುವ ಹಕ್ಕನ್ನು ನೀಡುವ ಮೂಲಕ ಸುಪ್ರೀಂ ಕೋರ್ಟ್​​ ನಿರ್ದೇಶನವನ್ನು ಸರ್ಕಾರ ಜಾರಿ ಮಾಡಿದಂತಾಗಿದೆ.

Advertisements

“ನಮ್ಮ ರಾಜ್ಯದ ಆರೋಗ್ಯ ಇಲಾಖೆಯು ರೋಗಿಯ ಘನತೆಯಿಂದ ಸಾಯುವ ಹಕ್ಕಿಗಾಗಿ ಸುಪ್ರೀಂ ಕೋರ್ಟ್‌ನ ನಿರ್ದೇಶನವನ್ನು ಜಾರಿಗೆ ತಂದಿದೆ. ಮರಣ ಇಚ್ಛೆಯ ಉಯಿಲು ಅಥವಾ ಲಿವಿಂಗ್ ವಿಲ್ ಸಹ ಹೊರತಂದಿದೆ. ಇದರಲ್ಲಿ ರೋಗಿಯು ಭವಿಷ್ಯದಲ್ಲಿ ತಮ್ಮ ವೈದ್ಯಕೀಯ ಚಿಕಿತ್ಸೆಯ ಬಗ್ಗೆ ತಮ್ಮ ಇಚ್ಛೆಯನ್ನು ದಾಖಲಿಸಬಹುದು” ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ದೌರ್ಜನ್ಯ ಪ್ರಕರಣ: ಶಿಕ್ಷೆಯ ಪ್ರಮಾಣ ಕುಸಿತ; ದಲಿತ ಕಳಕಳಿಯ ವಕೀಲರ ನೇಮಕವಾಗಲಿ  

“ಚಿಕಿತ್ಸೆಯ ಸಂದರ್ಭದಲ್ಲಿ ಚೇತರಿಕೆ ಸಾಧ್ಯವಿಲ್ಲದ ಸ್ಥಿತಿಗೆ ತಲುಪಿದರೆ ಆ ಸ್ಥಿತಿಯಲ್ಲಿ ಬದುಕಲು ಇಷ್ಟ ಇಲ್ಲದವರು ತಾವು ಚಿಕಿತ್ಸೆಗೆ ಒಳಪಡುವ ಮೊದಲೇ ಈ ರೀತಿಯ ಉಯಿಲು ಬರೆಯಬಹುದು. ಇಂತಹ ಉಯಿಲು ಇದ್ದರೆ ಅದನ್ನು ಜಾರಿಮಾಡುವುದು ವೈದ್ಯರು ಹಾಗೂ ಬಂಧುಗಳ ಕರ್ತವ್ಯವಾಗುತ್ತದೆ. ರೋಗಿಯ ಕೃತಕ ಉಸಿರಾಟ ಅಥವಾ ಜೀವರಕ್ಷಕ ವೈದ್ಯಕೀಯ ಚಿಕಿತ್ಸೆಗೆ ತಡೆ ನೀಡಲು ಇದರಿಂದ ವೈದ್ಯರಿಗೆ ಅವಕಾಶ ಇರುತ್ತದೆ. ಬದುಕುವುದಿಲ್ಲ ಎಂದು ಗೊತ್ತಿದ್ದೂ ಅನಗತ್ಯವಾದ ದುಬಾರಿ ವೆಚ್ಚದ ಚಿಕಿತ್ಸೆ ನೀಡುವುದನ್ನು ತಪ್ಪಿಸಲು ಇದರಿಂದ ಸಾಧ್ಯವಾಗುತ್ತದೆ” ಎಂದು ಸಚಿವರು ತಿಳಿಸಿದ್ದಾರೆ.

“ಕರ್ನಾಟಕವು ಪ್ರಗತಿಪರ ರಾಜ್ಯವಾಗಿದೆ. ನ್ಯಾಯಯುತ ಸಮಾಜಕ್ಕಾಗಿ ಉದಾರ ಮತ್ತು ಸಮಾನ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ನಾವು ಯಾವಾಗಲೂ ಮುಂಚೂಣಿಯಲ್ಲಿದ್ದೇವೆ” ಎಂದು ಹೇಳಿದ್ದಾರೆ.

ಮಾರಣಾಂತಿಕ ರೋಗದಿಂದ ಬಳಲುತ್ತಿರುವ ವ್ಯಕ್ತಿಗೆ ಅಳವಡಿಸಿರುವ ಜೀವ ರಕ್ಷಕ ಸಾಧನ ತೆಗೆಯುವುದಕ್ಕೆ ಸಂಬಂಧಿಸಿದ ‘ಮರಣ ಇಚ್ಛೆಯ ಉಯಿಲಿಗೆ ಸಮ್ಮತಿ ನೀಡಿದ ದೇಶದ ಮೊದಲ ರಾಜ್ಯ ಗೋವಾ ಆಗಿದೆ. ಬಾಂಬೆ ಹೈಕೋರ್ಟ್‌ ಗೋವಾ ಪೀಠವು ವ್ಯಕ್ತಿಯೊಬ್ಬರ ‘ಮರಣ ಇಚ್ಛೆಯ ಉಯಿಲು’ (ಲಿವಿಂಗ್ ವಿಲ್‌) ಕಾರ್ಯಗತಗೊಳಿಸಲು 2024 ಜೂನ್‌ 1ರಂದು ಅನುಮತಿ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X