ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹೊಸೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಫೆ.2ರ ಭಾನುವಾರದಂದು ಪದ್ಮಭೂಷಣ ಡಾ.ಎಚ್.ನರಸಿಂಹಯ್ಯ ಅವರ ಜನ್ಮಶತಮಾನೋತ್ಸವ ಮತ್ತು ಶಾಲಾ ಶತಮಾನೋತ್ಸವ ಸಮಾರಂಭವನ್ನು ಆಯೋಜಿಸಲಾಗಿದೆ.
ಭಾನುವಾರ ಬೆಳಗ್ಗೆ 10.30ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಕೆ ಎಚ್ ಪುಟ್ಟಸ್ವಾಮಿ ಗೌಡ ಸಮಾರಂಭದ ಅಧ್ಯಕ್ಷತೆವಹಿಸಲಿದ್ದು, ನಾಡೋಜ ಹಂಪ ನಾಗರಾಜಯ್ಯ ಮುಖ್ಯ ಭಾಷಣ ಮಾಡಲಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ಡಾ.ಕೆ.ಸುಧಾಕರ್, ವಿಪ ಸದಸ್ಯರಾದ ಅನಿಲ್ ಕುಮಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ್ ಗೌಡ ಎಂ, ಗೀತಾ ನಾಗರಾಜ್, ಹೆಚ್‌ವಿ ತಿಮ್ಮಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ : ಗೌರಿಬಿದನೂರು | ಜೋಡಿ ಶತಮಾನೋತ್ಸವಕ್ಕೆ ಸಜ್ಜಾದ ಹೊಸೂರು ಗ್ರಾಮ
ಬೆಂಗಳೂರಿನ ಎನ್‌ಇಎಸ್ ಸಂಸ್ಥೆಯ ಅಧ್ಯಕ್ಷರಾದ ಡಾ.ಎಚ್.ಎನ್.ಸುಬ್ರಹ್ಮಣ್ಯ, ನಿವೃತ್ತ ಮಹಾಲೇಖಪಾಲರಾದ ಡಿ.ಎನ್.ಆನಂದ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ತಾಲೂಕಿನ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸರಕಾರಿ ನೌಕರರ ಸಂಘ, ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲೆಯ ಹಿರಿಯ ವಿದ್ಯಾರ್ಥಿಗಳು ಸೇರಿದಂತೆ 10 ಸಾವಿರ ಜನ ಭಾಗವಹಿಸಲಿದ್ದಾರೆ ಎಂದು ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಚ್.ವಿ.ಮಂಜುನಾಥ್ ತಿಳಿಸಿದ್ದಾರೆ.