ಬಜೆಟ್ 2025 | ಬಿಹಾರಕ್ಕೆ ಭರಪೂರ ಕೊಡುಗೆ, ಚುನಾವಣೆಗಾಗಿ ಎಂದ ವಿರೋಧ ಪಕ್ಷಗಳು, ಆಕ್ರೋಶ

Date:

Advertisements

2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬಿಹಾರ ರಾಜ್ಯಕ್ಕೆ ಭರಪೂರ ಕೊಡುಗೆಗಳನ್ನು ಘೋಷಿಸಿದ್ದಾರೆ. ಆ ಮೂಲಕ ವಿರೋಧ ಪಕ್ಷಗಳ ಇತರ ರಾಜ್ಯಗಳ ಸಂಸದರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

ಬಿಹಾರಕ್ಕೆ ಗ್ರೀನ್‌ ಫೀಲ್ಡ್ ವಿಮಾನ ನಿಲ್ದಾಣ ಮಂಜೂರು, ಪಟ್ನಾ ಐಐಟಿ ವಿಸ್ತರಣೆಗೆ ಅನುದಾನ, 500 ಹೆಕ್ಟೇರ್ ಜಮೀನಿಗೆ ನೀರಾವರಿ ಯೋಜನೆಗಳನ್ನು ಘೋಷಿಸುವ ಮೂಲಕ ಬಿಹಾರಕ್ಕೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಿರುವುದು ಕಂಡು ಬಂದಿದೆ.

ಬಿಹಾರದಲ್ಲಿ ರಾಷ್ಟ್ರೀಯ ಆಹಾರ ತಂತ್ರಜ್ಞಾನ ಸಂಸ್ಥೆ ಸ್ಥಾಪನೆ ಮಾಡಲಾಗುವುದು. ಇದು ಪೂರ್ವ ಭಾರತದಲ್ಲಿ ಆಹಾರ ಸಂಸ್ಕರಣೆಯನ್ನು ಉತ್ತೇಜಿಸುತ್ತದೆ. ಇದರಿಂದ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ?: ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಪರಿಚಯ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಎನ್‌ಡಿಎ ಪ್ರಮುಖ ಪಾಲುದಾರ ಪಕ್ಷವಾಗಿರುವ ಸಂಯುಕ್ತ ಜನತಾದಳ ಬಿಹಾರದ ಪ್ರಗತಿ ನಿಟ್ಟಿನಲ್ಲಿ ಹಲವು ಬೇಡಿಕೆಗಳನ್ನು ಮಂಡಿಸಿದ್ದು, ಅದರಂತೆಯೇ ಬಜೆಟ್‌ನಲ್ಲಿ ಆದ್ಯತೆಯನ್ನು ನೀಡಿದಂತೆ ಕಾಣುತ್ತಿದೆ. ಬಿಹಾರ ರಾಜ್ಯ ಮೂಲದ ಮಧುಬನಿ ಕಲೆಯ ಹಿನ್ನೆಲೆ ಹೊಂದಿರುವ ವಿಶೇಷ ಸೀರೆಯನ್ನು ಉಟ್ಟು ಬಜೆಟ್ ಮಂಡನೆಗೆ ಆಗಮಿಸಿದ ನಿರ್ಮಲಾ ಅವರ ಪ್ರತಿ ವಿಷಯಗಳ ಮಂಡನೆಯಲ್ಲಿ ಬಿಹಾರದ ಹೆಸರು ಉಲ್ಲೇಖವಾಗುತ್ತಿರುವುದು ಕಂಡು ಬಂದಿತು.

ಈ ವರ್ಷದ ಕೊನೆಯಲ್ಲಿ, ಅಕ್ಟೋಬರ್ ಅಥವಾ ನವೆಂಬರ್‍‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರಕ್ಕೆ ಕೇಂದ್ರ ಬಜೆಟ್‌ನಲ್ಲಿ ಆದ್ಯತೆ ನೀಡಿ ಹಲವಾರು ಯೋಜನೆಗಳನ್ನು ಘೋಷಿಸಲಾಗಿದೆ. ಇದರ ಹಿಂದೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಳ್ಳಲಾಗಿದೆ, ಮತದಾರರನ್ನು ಓಲೈಕೆ ಮಾಡುವುದಾಗಿದೆ ಎಂದು ವಿರೋಧ ಪಕ್ಷಗಳ ಸಂಸದರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X