ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ನಾಲ್ವರ ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸುವಲ್ಲಿ ಜಿಲ್ಲಾಡಳಿತ ಕೈಗೊಂಡ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಇಬ್ಬರು ನೋಡಲ್ ಅಧಿಕಾರಿಗಳನ್ನು ಘಟನೆ ನಡೆದ ಸ್ಥಳಕ್ಕೆ ಕಳುಹಿಸಿಕೊಟ್ಟರು ಹಾಗೂ ನಂತರ
ಕೈಕಟ್ಟಿಕೊಂಡು ಕುಳಿತುಕೊಳ್ಳಲಿಲ್ಲ. ಬದಲಾಗಿ ಅಲ್ಲಿನ ಅಧಿಕಾರಿಗಳನ್ನು ಸಂಪರ್ಕಿಸಿ ಸತತ ಪ್ರಯತ್ನ ನಡೆಸಿದ್ದರು. ಹೀಗಾಗಿ ಅಂತಹ ದಟ್ಟನೆ ನಡುವೆಯೂ ಪಾರ್ಥಿವ ಶರೀರವನ್ನು ದೆಹಲಿಗೆ ದೆಹಲಿಗೆ ಕರೆತರಲು ಅನುಕೂಲವಾಯಿತು.
ಮತ್ತೊಂದು ಕಡೆಗೆ ದೆಹಲಿಯಲ್ಲಿ ವಿಮಾನ ಮೂಲಕ ಮೃತದೇಹಗಳನ್ನು ಸಾಗಿಸುವ ನಿಟ್ಟಿನಲ್ಲಿ ಕೂಡ ಪ್ರಯತ್ನಪಟ್ಟರು. ಇನ್ನು ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಮೃತದೇಹಗಳನ್ನು ಸಂಬಂಧಿಸಿದವರಿಗೆ ಹಸ್ತಾಂತರಿಸುವವರೆಗೆ ನಿರಂತರ ಕೆಲಸವನ್ನು ಅವರು ಮಾಡಿದರು. ಜಿಲ್ಲಾಧಿಕಾರಿಗಳ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬೆಳಗಾವಿಯಲ್ಲಿ ನಡೆದ ಈದ್ ಮಿಲಾದ್ ಮತ್ತು ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಕೈಗೊಡ ನಿರ್ಧಾರವು ಭಾವಕ್ಯತೆ ಮೂಡಿಸಲು ಕಾರಣವಾಗಿತ್ತು.