ಆಗಸ್ಟ್‌ 1 ರಂದು ಗೃಹಜ್ಯೋತಿ, ಆಗಸ್ಟ್‌ 17-18 ರಂದು ಗೃಹಲಕ್ಷ್ಮಿ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ

Date:

Advertisements
  • ಯೋಜನೆಗಳ ಅನುಷ್ಠಾನ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
  • ಅರ್ಜಿ ಸಲ್ಲಿಕೆ ಮತ್ತು ಅನುಮೋದನೆ ಪ್ರಕ್ರಿಯೆ ಅತ್ಯಂತ ಸರಳವಾಗಿರಲಿ: ಅಧಿಕಾರಿಗಳಿಗೆ ಸೂಚನೆ

ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗುರುವಾರ ತಮ್ಮ ನಿವಾಸದಲ್ಲಿ ಗೃಹಜ್ಯೋತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿ ಚರ್ಚಿಸಿದರು.

“ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ” ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

Advertisements

ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಇದೇ ವೇಳೆ ಸೂಚಿಸಿದರು.

ಗೃಹಜ್ಯೋತಿ ಯೋಜನೆ

ಗೃಹಜ್ಯೋತಿ ಯೋಜನೆಯನ್ನು ಆಗಸ್ಟ್‌ 1ರಂದು ಕಲಬುರಗಿಯಲ್ಲಿ ಚಾಲನೆ ನೀಡುವ ಕುರಿತು ಯೋಚಿಸುತ್ತಿದ್ದೇವೆ. ಈ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ನಾಗರಿಕರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

“ಗೃಹಜ್ಯೋತಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್‌ ಮೂಲಕ ನೋಂದಾಯಿಸಲು ಅವಕಾಶವಿದೆ. ಇದಲ್ಲದೆ, ಎಸ್ಕಾಂಗಳ ಎಲ್ಲ ಕಚೇರಿಗಳಲ್ಲಿ ಹೆಲ್ಪ್‌ ಡೆಸ್ಕ್‌ ಸ್ಥಾಪಿಸಲಾಗುವುದು. ಜೂನ್‌ 15 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಕೇಂದ್ರಗಳ ಮೂಲಕ ಹಾಗೂ ಮನೆಯಲ್ಲಿಯೇ ಕಂಪ್ಯೂಟರ್‌ ಮೂಲಕ ಅಥವಾ ಮೊಬೈಲ್‌ ಆಪ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು” ಎಂದರು.

“ಹೊಸ ಮನೆ, ಹೊಸ ಬಾಡಿಗೆದಾರರಿಗೆ ರಾಜ್ಯದ ವಿದ್ಯುತ್‌ ಬಳಕೆಯ ಸರಾಸರಿ ಆಧಾರದಲ್ಲಿ ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು. ಒಂದು ವರ್ಷದ ಸರಾಸರಿ ಲಭ್ಯವಾದ ನಂತರ, ಈ ದತ್ತಾಂಶವನ್ನು ಆಧರಿಸಿ, ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಬಿಎಂಪಿ ಚುನಾವಣೆ; ಸಿದ್ದರಾಮಯ್ಯ ಸರ್ಕಾರದ ಮುಂದಿವೆ ಹಲವು ಸವಾಲು

ಮತದಾರರ ಗುರುತು ಚೀಟಿ ಕಡ್ಡಾಯ

ಹಳೆ ವಿದ್ಯುತ್‌ ಬಿಲ್‌ ಬಾಕಿ ಪಾವತಿಗೆ ಸೆಪ್ಟೆಂಬರ್‌ 30 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಗೆ ಆಧಾರ್‌, ಆರ್. ಆರ್. ಸಂಖ್ಯೆ, ಬಾಡಿಗೆದಾರರು ಕರಾರು ಪತ್ರ ಹಾಗೂ ಅದೇ ವಿಳಾಸದ ಮತದಾರರ ಗುರುತು ಚೀಟಿ ಮಾಹಿತಿ ಸಲ್ಲಿಸಿ, ಸೌಲಭ್ಯ ಪಡೆಯಬಹುದಾಗಿದೆ.

ಜಿಎಸ್‌ಟಿ ನೋಂದಣಿ ಮಾಡಿಕೊಂಡವರಿಗಿಲ್ಲ ಗೃಹಲಕ್ಷ್ಮಿ

“ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ” ಎಂದರು.

ಗೃಹಲಕ್ಷ್ಮಿ ಯೋಜನೆ

ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್‌ 17 ಅಥವಾ 18 ರಂದು ಬೆಳಗಾವಿಯಲ್ಲಿ ಚಾಲನೆ ನೀಡುವ ಕುರಿತು ಚರ್ಚಿಸಲಾಯಿತು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್‌ 15 ರಿಂದ ಪ್ರಾರಂಭವಾಗಲಿದೆ.

ಈ ಯೋಜನೆಗೆ ಆನ್‌ಲೈನ್‌ ನಲ್ಲಿ ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಂತೆಯೇ ನಾಡಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪಿಸಲು ತೀರ್ಮಾನಿಸಲಾಯಿತು.

“ಅರ್ಜಿದಾರರು ರೇಷನ್‌ ಕಾರ್ಡ್‌ ಸಂಖ್ಯೆ, ಯಜಮಾನಿಯ ಹಾಗೂ ಪತಿಯ ಆಧಾರ್‌ ಕಾರ್ಡ್‌ ಸಂಖ್ಯೆ, ಆಧಾರ್‌ ಸಂಯೋಜನೆಯಾಗಿರುವ ಬ್ಯಾಂಕ್‌ ಖಾತೆಯ ವಿವರವನ್ನು ಒದಗಿಸಬೇಕು. ಈ ದಾಖಲೆಗಳ ಪ್ರತಿಗಳನ್ನು ಆಫ್‌ಲೈನ್‌ ಅರ್ಜಿಗಳೊಂದಿಗೂ ಸಲ್ಲಿಸಬಹುದು” ಎಂದರು.

ಎಪಿಎಲ್‌ ಕಾರ್ಡುದಾರರಿಗೂ ಗೃಹಲಕ್ಷ್ಮಿ ಯೋಜನೆ

“ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್‌ ಖಾತೆಗೆ ನೆರವಿನ ಮೊತ್ತ ಜಮೆ ಆಗಲಿದೆ.
ಈ ಯೋಜನೆಯು ರಾಜ್ಯದ ಶೇ. 85 ಕ್ಕೂ ಹೆಚ್ಚು ಕುಟುಂಬಗಳನ್ನು ತಲುಪಲಿದೆ ಎಂದು ಅಂದಾಜಿಸಲಾಗಿದೆ. ತೆರಿಗೆ ಪಾವತಿದಾರರಲ್ಲದ ಎಪಿಎಲ್‌ ಕಾರ್ಡುದಾರರಿಗೂ ಈ ಸೌಲಭ್ಯ ದೊರೆಯಲಿದೆ” ಎಂದು ಹೇಳಿದರು.

ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X