ಮೈಕ್ರೋ ಫೈನಾನ್ಸ್‌ ಕಿರುಕುಳ | ಸಾಲದ ಇಡೀ ಪ್ರಕ್ರಿಯೆ ನಿಭಾಯಿಸಲು ಆನ್‌ಲೈನ್‌ ಪೋರ್ಟಲ್‌ ಸ್ಥಾಪನೆಗೆ ಒಲವು

Date:

Advertisements

ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ರೂಪಿಸುವ ನಿಟ್ಟಿನಲ್ಲಿ ಶನಿವಾರ ಮಹತ್ವದ ಸಭೆ ನಡೆಯಿತು. ಕಾನೂನು ಸಚಿವ ಹೆಚ್‌ ಕೆ ಪಾಟೀಲ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸಭೆಯಲ್ಲಿ ಭಾಗಿಯಾಗಿದ್ದರು.

ಸಭೆಯಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್‌ಲೈನ್‌ ಪೋರ್ಟಲ್ ಮಾಡಿ ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡುವ ವ್ಯವಸ್ಥೆ ರೂಪಿಸಲು ಚಿಂತನೆ ನಡೆಯಿತು.

ಸಾಲಕ್ಕಾಗಿ ಅರ್ಜಿ ಸಲ್ಲಿಕೆ ಹಾಗೂ ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕವೇ ನಿಭಾಯಿಸಬೇಕು. ಸಾಲಕ್ಕೆ ವಿಧಿಸುವ ಬಡ್ಡಿ ದರದ ಪ್ರಮಾಣ ಪಾರದರ್ಶಕ ಹಾಗೂ RBI ನೀತಿಗೆ ಅನುಗುಣವಾಗಿರಬೇಕು. ಮೈಕ್ರೋ ಫೈನಾನ್ಸ್ ಕಂಪೆನಿಗಳು ಕಡ್ಡಾಯವಾಗಿ ರಾಜ್ಯದಲ್ಲಿ ನೋಂದಣಿಯಾಗಿರಬೇಕು” ಎಂದು ನಿರ್ಧರಿಸಲಾಯಿತು.ʼ

Advertisements

ಈ ಸುದ್ದಿ ಓದಿದ್ದೀರಾ? ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್‌ ಬ್ಯಾನ್‌? Micro Finanace Harassment

ಯಾವುದೇ ಸಂದರ್ಭದಲ್ಲಿ ಈ ನೋಂದಣಿಯನ್ನ ಸರ್ಕಾರ ತಿರಸ್ಕರಿಸಬದುದು. ಮೈಕ್ರೋ ಫೈನಾನ್ಸ್ ಕಂಪೆನಿಗಳ ವ್ಯವಹಾರ ವಿಚಾರಣೆಗೆ ಪ್ರತಿ ಜಿಲ್ಲೆಯಲ್ಲಿ ADC-AC ಒಳಗೊಂಡ ಬೋರ್ಡ್‌ ನೇಮಕ ಮಾಡಬೇಕು. ಈ ಕಂಪೆನಿಗಳು ಸಾಲದ ಹೆಸರಲ್ಲಿ ಜನರಿಂದ ಯಾವ ವಸ್ತುಗಳು-ಆಸ್ತಿಗಳನ್ನ ಅಡಮಾನ ಇಡಿಸಿಕೊಳ್ಳುವಂತಿಲ್ಲ. ಸಾಲ ಮರುಪಾವತಿ ಮಾಡದವರ ವಿರುದ್ಧ ಮಧ್ಯವರ್ತಿಗಳ ಮೂಲಕ ದಬ್ಬಾಳಿಕೆ ಮಾಡುವಂತಿಲ್ಲ ಎಂಬುದೂ ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ಕಾನೂನಿನ ಚೌಕಟ್ಟಿನೊಳಗೆ ತರುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಈಗಾಗಲೇ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆ ನಡೆದಿದೆ. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲು ನಿರ್ಧಾರ. ಈ ಕುರಿತು ಕಾನೂನು ಇಲಾಖೆ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದಿನ ಸಭೆ ಮಹತ್ವ ಪಡೆದಿತ್ತು.

    eedina
    ಈ ದಿನ ಡೆಸ್ಕ್‌
    Website |  + posts

    ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

    ಪೋಸ್ಟ್ ಹಂಚಿಕೊಳ್ಳಿ:

    LEAVE A REPLY

    Please enter your comment!
    Please enter your name here

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

    ""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

    ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

    ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

    ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

    ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

    ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

    ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

    Download Eedina App Android / iOS

    X