ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿ ನೋವಿನ ಕಾರಣ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ. ಹೀಗಾಗಿ, ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ.
ಚಿಕ್ಕಬಳ್ಳಾಪುರದ ಹೊಸೂರು ಗ್ರಾಮಕ್ಕೆ ಇಂದು ಸಿದ್ದರಾಮಯ್ಯ ಭೇಟಿ ನೀಡಬೇಕಿತ್ತು. ಹೀಗಾಗಿ ಬಿಗಿ ಭದ್ರತೆ ಕೂಡ ಮಾಡಲಾಗಿತ್ತು. ಆದರೆ ಇದೀಗ ದಿಢೀರ್ ಆಗಿ ಸಿದ್ದರಾಮಯ್ಯ ಭೇಟಿ ರದ್ದಾಗಿದೆ.
ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.
ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ಮುಖ್ಯವಾಹಿನಿಗೆ ಕುಂದಾಪುರ ಮೂಲದ ನಕ್ಸಲ್ ಹೋರಾಟಗಾರ್ತಿ?
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹೊಸೂರು ಗ್ರಾಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಾರೆ ಎಂದು ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
500 ಜನ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳಿಂದ ಬಂದೋಬಸ್ತ್ ಮಾಡಲಾಗಿತ್ತು. ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ನೇತೃತ್ವದಲ್ಲಿ 1 ಎಸ್ಪಿ, 1 ಎಎಸ್ಪಿ, 4 ಡಿ.ವೈ.ಎಸ್ಪಿ, 20 ಸಿ.ಪಿ.ಐ, 2 ಕೆ.ಎಸ್.ಆರ್.ಪಿ ಸೇರಿದಂತೆ 500 ಜನ ಪೊಲೀಸರಿಂದ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಆದರೆ, ಇದೀಗ ಸಿಎಂ ಭೇಟಿ ದಿಢೀರಾಗಿ ರದ್ದಾಗಿದೆ.