ಕೇರಳ ಪ್ರವೇಶಿಸಿದ ಮುಂಗಾರು; ಕೃಷಿ ಚಟುವಟಿಕೆಗಳು ಆರಂಭ

Date:

Advertisements

ಭಾರತದ ಅರ್ಥವ್ಯವಸ್ಥೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅತ್ಯಂತ ಪ್ರಮುಖವಾದ ನೈರುತ್ಯ ಮುಂಗಾರು ಗುರುವಾರ ಕೇರಳ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಸಾಮಾನ್ಯವಾಗಿ ಜೂನ್ 1ರಂದು ಮುಂಗಾರು ಕೇರಳ ಪ್ರವೇಶಿಸುವುದು ವಾಡಿಕೆ. ಆದರೆ ಈ ಬಾರಿ ಒಂದು ವಾರ ತಡವಾಗಿದೆ. ಜೂನ್ 4ರಂದು ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಕಳೆದ ತಿಂಗಳು ಭಾರತೀಯ ಹವಾಮಾನ ಇಲಾಖೆ ಹೇಳಿತ್ತು. ಜೂನ್ 7ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ವಬ್‌ಸೈಟ್ ಸ್ಕೈಮೆಟ್ ತಿಳಿಸಿತ್ತು.

ಕಮೋರಿನ್, ಮನ್ನಾರ್‌ನ ಕೊಲ್ಲಿ ಪ್ರದೇಶಗಳಲ್ಲಿ, ನೈರುತ್ಯ, ಕೇಂದ್ರ ಹಾಗೂ ಈಶಾನ್ಯದ ಬಂಗಾಳ ಕೊಲ್ಲಿ ಭಾಗಗಳಲ್ಲಿ ಮುಂಗಾರು ಚುರುಕುಗೊಂಡಿದೆ. ’ಬಿಪೋರ್ಜಾಯ್’ ಚಂಡಮಾರುತವು ನೈರುತ್ಯ ಮುಂಗಾರಿನ ಮೇಲೆ ಪ್ರಭಾವ ಬೀರಿದ್ದು, ಕೇರಳದಲ್ಲಿ ಇದರ ಪ್ರಭಾವ ಸೌಮ್ಯವಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Advertisements

ಮುಂದಿನ 24 ಗಂಟೆಗಳಲ್ಲಿ ಬಿಪೋರ್ಜಾಯ್ ಚಂಡಮಾರುತ ಉತ್ತರದ ಕಡೆಗೆ ಚಲಿಸುವ ನಿರೀಕ್ಷೆಯಿದ್ದು, ತೀವ್ರ ಚಂಡಮಾರುತವಾಗಿ ತೀವ್ರಗೊಳ್ಳುತ್ತದೆ. ನಂತರದ ಮೂರು ದಿನಗಳಲ್ಲಿ ಉತ್ತರ – ವಾಯವ್ಯ – ಪಶ್ಚಿಮ ದಿಕ್ಕಿನಲ್ಲಿ ಚಲಿಸುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ 150 ವರ್ಷಗಳಿಂದ ಕೇರಳಕ್ಕೆ ಮುಂಗಾರು ಪ್ರವೇಶದಲ್ಲಿನ ದಿನಗಳಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. 1918ರಲ್ಲಿ ಮೇ 11ಕ್ಕೆ ಮುಂಗಾರು ಪ್ರವೇಶಿಸಿತ್ತು. ಹಾಗೆಯೇ 1972ರಲ್ಲಿ ಜೂನ್ 18ರಂದು ಪ್ರವೇಶಿಸಿತ್ತು. 2022ರಲ್ಲಿ ಮೇ 29ರಂದು, 2021ರಲ್ಲಿ ಜೂನ್ 3 ರಂದು, 2020ರಲ್ಲಿ ಜೂನ್ 1 ರಂದು, 2019ರಲ್ಲಿ ಜೂನ್ 8ರಂದು ಹಾಗೂ 2018ರಲ್ಲಿ ಮೇ 29ರಂದು ಮುಂಗಾರು ಪ್ರವೇಶಿಸಿದೆ. ಎಲ್‌ಇನೊ ಪರಿಸ್ಥಿತಿಯ ನಡುವೆಯೂ ಈ ಬಾರಿ ಮುಂಗಾರು ಸಾಮಾನ್ಯವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೇರಳಕ್ಕೆ ಮುಂಗಾರು ಪ್ರವೇಶ ವಿಳಂಬವಾಗಿರುವುದರಿಂದ ದೇಶದ ಇತರ ಭಾಗಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಕಡಿಮೆ. ವಾಯವ್ಯ ಭಾಗದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆ, ಪೂರ್ವ, ಈಶಾನ್ಯ, ಕೇಂದ್ರ ಭಾಗದಲ್ಲಿ ಶೇ 94ರಿಂದ 106ರಷ್ಟು ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಭಾರತಕ್ಕೆ ಮುಂಗಾರುಮಳೆ ಅತ್ಯಂತ ಪ್ರಮುಖವಾದುದು. ಭಾರತದ ಬಹಳಷ್ಟು ಬೆಳೆ, ನೀರಾವರಿ ವ್ಯವಸ್ಥೆ, ಕುಡಿಯುವ ನೀರಿನ ಪೂರೈಕೆಗೆ ಅರಬ್ಬಿ ಸಮುದ್ರದಿಂದ ಹುಟ್ಟಿ ಬರುವ ನೈರುತ್ಯ ವಾಣಿಜ್ಯ ಮಾರುತಗಳು ತರುವ ಮುಂಗಾರು ಮಳೆ ಭಾರತದ ಜಲಸಂಪನ್ಮೂಲಕ್ಕೆ ಜೀವನಾಧಾರ.

ಈ ಸುದ್ದಿ ಓದಿದ್ದೀರಾ? ಕೆನಡಾದಲ್ಲಿ ಇಂದಿರಾ ಗಾಂಧಿ ಹತ್ಯೆಯ ಸ್ತಬ್ಧಚಿತ್ರ ಮೆರವಣಿಗೆ; ವಿದೇಶಾಂಗ ಸಚಿವ ಜೈಶಂಕರ್‌ ಆಕ್ರೋಶ

ಪಶ್ಚಿಮ ದೇಶಗಳಲ್ಲಿ ಋತುಗಳನ್ನು ಸ್ಪ್ರಿಂಗ್, ಸಮ್ಮರ್, ಆಟಮ್, ವಿಂಟರ್, ಎಂದು ನಾಲ್ಕು ವಿಭಾಗ ಮಾಡಿದ್ದಾರೆ. ಆದರೆ ಭಾರತದಲ್ಲಿ ಹವಾಮಾನಕ್ಕೆ ಅನುಗುಣವಾಗಿ ಮೂರೇ ಕಾಲ ಹೇಳಲಾಗುತ್ತದೆ. ಅವು ಬೇಸಿಗೆ ಕಾಲ, ಮಳೆಗಾಲ, ಚಳಿಗಾಲ. ಆದರೆ ಪ್ರಾಚೀನರು ಭಾರತ ಕಾಲಗಣನೆಯಲ್ಲಿ, ವಸಂತ, ಗ್ರೀಷ್ಮ, ವರ್ಷ, ಶರತ್, ಹೇಮಂತ, ಶಿಶಿರ ಎಂದು ಆರು ಋತು ಅಥವಾ ಕಾಲವನ್ನಾಗಿ ವಿಭಾಗಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X