ಸಮುದಾಯ ಶಾಲೆಗೆ ಹತ್ತಿರವಿದ್ದಾಗ ಸರ್ಕಾರಿ ಶಾಲೆಗಳು ಉತ್ತುಂಗದ ಶಿಖರಕ್ಕೆ ಏರುತ್ತವೆ ಎಂದು ಮುಖ್ಯೋಪಾಧ್ಯಾಯರಾದ ಭಾರತಿ ತಿಳಿಸಿದರು.
ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಬ್ಯಾಡಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಂಸ್ಕೃತಿ ಸೌರಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು
ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಹಾಗೂ ಮನೋಜ್ಞ ಜ್ಞಾನವನ್ನು ಹೊರ ಹಾಕಲು ವಾರ್ಷಿಕೋತ್ಸವ ಹಾಗೂ ಸಂಸ್ಕೃತಿ ಸೌರಭದಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಮೊಬೈಲ್ ಗಿಳಿಯಿಂದ ಹೊರ ಬಂದು ಶ್ರದ್ಧೆಯಿಂದ ಓದಿ ಜ್ಞಾನವನ್ನು ಹೆಚ್ಚಿಸಿಕೊಳ್ಳುವ ಮೂಲಕ ತಮ್ಮ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ. ಇನ್ನೂ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವ ಮೂಲಕ ಜ್ಞಾನಾರ್ಜನೆ ಹೆಚ್ಚಿಸಿಕೊಂಡಾಗ ಆ ಜ್ಞಾನವನ್ನು ನೋಡಿ ಶತ್ರುಗಳು ಎದುರುತ್ತಾರೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ವರದರಾಜ್ ಮಾತನಾಡಿ ಮಕ್ಕಳು ಚೆನ್ನಾಗಿ ಓದುವ ಮೂಲಕ ತಮ್ಮ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು. ಹಾಗೂ ತಮ್ಮ ಬೌದ್ಧಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದ ಅವರು ಶಾಲೆಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಗ್ರಾಮ ಪಂಚಾಯಿತಿಯಿಂದ ಒದಗಿಸಲಾಗುವುದು ಎಂದು ತಿಳಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷ ಜಯರಾಮ್ ಮಾತನಾಡಿ ಮಕ್ಕಳು ಉತ್ತಮ ಶಿಕ್ಷಣ ಪಡೆಯುವುದರೊಂದಿಗೆ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷೆ ನಂಜಮ್ಮ, ಗ್ರಾಪಂ ಸದಸ್ಯ ಶಿವಕುಮಾರ್ ಸ್ವಾಮಿ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ದೀಪಾ, ನದಸ್ಯರು, ಗ್ರಾಮ ಸಹಾಯಕ ಅಭಿಷೇಕ್. ಹನುಮಂತಯ್ಯ, ಸುನಂದಮ್ಮ, ಪರಮೇಶ್ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.