ಹೊರ ರಾಜ್ಯಗಳಿಂದ ಬಂದಿರುವ ವ್ಯಾಪಾರಿಗಳಿಂದ ಶಿವಮೊಗ್ಗ ನಗರದ ಸ್ಥಳೀಯ ವ್ಯಾಪಾರಿಗಳಿಗೆ ಸಮಸ್ಯೆಯಾಗುತ್ತಿದ್ದು, ಸಾರ್ವಜನಿಕರು ಓಡಾಡಲೂ ಜಾಗವಿಲ್ಲದಂತಾಗಿದೆ. ಪಾಲಿಕೆ ಅಧಿಕಾರಿಗಳು ಇದನ್ನು ಪರಿಶೀಲಿಸಿ ಸ್ಥಳೀಯ ವ್ಯಾಪಾರಿಗಳ ರಕ್ಷಣೆಗೆ ಮುಂದಾಗಬೇಕು ಎಂದು ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಆಗ್ರಹಿಸಿದರು.
ಶಿವಮೊಗ್ಗ ನಗರದ ಮೇನ್ ಮಿಡ್ಲ್ ಸ್ಕೂಲ್ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘದಿಂದ ಭಾನುವಾರ ಬೆಳಿಗ್ಗೆ ನಡೆದ ಮಾಸಿಕ ಸಭೆಯಲ್ಲಿ ಚರ್ಚಿಸಿದರು.
“ಶಿವಮೊಗ್ಗ ಪಾಲಿಕೆಯಿಂದ ಯಾವುದೇ ಅನುಮತಿ ಪಡೆಯದೆ ನಗರದ ವಿವಿಧ ಕಡೆ ವ್ಯಾಪಾರಿಗಳು ದಿಢೀರನೆ ಪ್ರತ್ಯಕ್ಷರಾಗುತ್ತಿದ್ದು, ಇವರು ಪಾಲಿಕೆ ನಿಯಮಗಳನ್ನು ಪಾಲಿಸದೇ ಇರುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಇವರ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರೂ ಕೂಡಾ ಅವರು ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ. ಈಗಲಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ರಸ್ತೆ ಅಪಘಾತ ಹೆಚ್ಚಳ; ಸಂಚಾರಿ ಪೊಲೀಸರಿಂದ ಜಾಗೃತಿ ಕಾರ್ಯಕ್ರಮ
ಈ ವೇಳೆ ಚನ್ನವೀರಪ್ಪ ಗಾಮನಗಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದು, ಸಂಘಟನೆಯ ಪ್ರಮುಖರಾದ ಜೆ ಸಿ ನಾಗರಾಜ್, ಸತ್ಯಮೂರ್ತಿ, ಕಿರಣ್, ಶಿಲ್ಪ, ಕುಸುಮ ಸಂತೋಷ, ಅನ್ವರ್ ಸೇರಿದಂತೆ ಬಹುತೇಕರು ಇದ್ದರು.