ಉಡುಪಿ ಜಿಲ್ಲೆಯ ಮಲ್ಪೆ ಬಂದರಿನ ಟಿ ಎಸ್ ಎಫ್ ಪಾರ್ಟಿ ಬಳಿ ಅಂದಾಜು 55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಮಲಗಿದ ಸ್ಥಿತಿಯಲ್ಲಿ ಸಾವನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಕೆಲ ಸ್ಥಳೀಯರು ಮೃತಪಟ್ಟ ವ್ಯಕ್ತಿ ಶಿವಮೊಗ್ಗ ಮೂಲದವನಾಗಿರಬಹುದೆಂದು ಶಂಕಿಸಿದ್ದು, ಈವರೆಗೆ ಈತನ ಬಗ್ಗೆ ನಿಖರವಾದ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ

ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಈಶ್ವರ್ ಮಲ್ಪೆ ಆಂಬುಲೆನ್ಸ್ ಮೂಲಕ ಸಾಗಿಸಲಾಗಿದ್ದು , ಈತನ ಸಂಬಂಧಿಕರು ಅಥವಾ ಪರಿಚಯಸ್ಥರು ಯಾರಾದರೂ ಇದ್ದಲ್ಲಿ ತಕ್ಷಣವೇ ಈಶ್ವರ ಮಲ್ಪೆ 9663434415 ಅಥವಾ ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬೇಕಾಗಿ ತಿಳಿಸಿದ್ದಾರೆ.
