ಮೈಕ್ರೋ ಫೈನಾನ್ಸ್ ಬ್ಯಾಂಕುಗಳ ಕಿರುಕುಳ ಹೆಚ್ಚಾಗಿದ್ದು, ಅಮಾಯಕರು ಆತ್ಮಹತ್ಯೆ ದಾರಿಹಿಡಿಯುತ್ತಿದ್ದಾರೆ. ಹಾಗಾಗಿ ಫೈನಾನ್ಸ್ ಕಂಪನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ವಿಜಯಪುರ ಜಿಲ್ಲಾಧಿಕಾರಿಳಿಗೆ ಮನವಿ ಸಲ್ಲಿಸಿತು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಬ್ಯಾಂಕುಗಳು ತೀವ್ರತರದಲ್ಲಿ ಬಡ್ಡಿ, ಚಕ್ರ ಬಡ್ಡಿಯನ್ನು ವಿಧಿಸುವುದರ ಮೂಲಕ ಸಾಲ ಪಡೆದ ಬಡ ಕೂಲಿ ಕಾರ್ಮಿಕರಿಗೆ, ವ್ಯಾಪಾರಸ್ಥರಿಗೆ ಗ್ರಾಮೀಣ ಭಾಗದ ಜನತೆಗೆ ಆರ್‌ಬಿಐ ನಿಯಮಾವಳಿಗಳನ್ನೂ ಮೀರಿ ಕಿರುಕುಳ ನೀಡುವುದರ ಮೂಲಕ ಜಿಲ್ಲೆಯ ಜನತೆ ಗುಳೆ ಹೋಗುವಂತೆ ಮಾಡುತ್ತಿದೆ. ಅದು ಅಲ್ಲದೆ ಮೈಕ್ರೋ ಫೈನಾನ್ಸ್ ವಸೂಲಿಗಾರರ ಕಿರುಕುಳದಿಂದಾಗಿ ಬಹುತೇಕ ಬಡ ಹೆಣ್ಣು ಮಕ್ಕಳು, ರೈತಾಪಿ ವರ್ಗ, ಕಾರ್ಮಿಕರು ಪ್ರಾಣ ಕಳೆದುಕೊಳ್ಳಲು ಮುಂದಾಗುತ್ತಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದರು.
“ಮೈಕ್ರೋ ಫೈನಾನ್ಸ್ ಬ್ಯಾಂಕಿನ ಸಿಬ್ಬಂದಿಗಳು ಒಡ್ಡುವ ದಬ್ಬಾಳಿಕೆ, ಜೀವ ಬೆದರಿಕೆ, ಮನೆ ಜಪ್ತಿ ಮಾಡುವುದು, ಸಾರ್ವಜನಿಕವಾಗಿ ನಿಂದಿಸುವ ಮತ್ತು ಮಾನಹಾನಿ ಮಾಡಿ ಆತ್ಮಹತ್ಯೆಗೆ ಪ್ರಚೋದಿಸುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಆದ್ದರಿಂದಾಗಿ ಇಂತಹ ಫೈನಾನ್ಸ್ ಕಂಪನಿಗಳನ್ನು ಶಾಶ್ವತವಾಗಿ ಕಪ್ಪುಪಟ್ಟಿಗೆ ಸೇರಿಸಿ ರದ್ದುಗೊಳಿಸಿ ಜಿಲ್ಲೆಯ ಜನತೆಯ ರಕ್ಷಣೆಗೆ ಸೂಕ್ತ ಕಾನೂನು ಜಾರಿಗೊಳಿಸಬೇಕು” ಎಂದು ಮನವಿ ಮಾಡಿತು.
ಈ ಸುದ್ದಿ ಓದಿದ್ದೀರಾ?: ವಿಜಯಪುರ | ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಸಬಲಾ ಸಂಸ್ಥೆ
ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ವಿಕ್ರಮ ವಾಘಮೋರೆ ಸೀನು ಹಿಪ್ಪರಗಿ, ರಾಕೇಶ ಇಂಗಳಗಿ, ತಿಪ್ಪಣ್ಣ ಹೆಬ್ಬಾಳ, ಹಮಿದ ಇನಾಮದಾರ ಇತರರು ಇದ್ದರು.
