ಕೇರಳ | ಆರು ವರ್ಷದ ಮಗಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ತಂದೆ

Date:

Advertisements

ಆರು ವರ್ಷದ ಬಾಲಕಿಯನ್ನು ಸ್ವತಃ ತಂದೆಯೇ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಕೇರಳದ ಅಲಪ್ಪುಝ ಜಿಲ್ಲೆಯ ಮಾವೇಲಿಕ್ಕರ ಎಂಬಲ್ಲಿ ನಡೆದಿದೆ.

ಆರೋಪಿ  ಶ್ರೀಮಹೇಶ್ (38) ಎಂಬಾತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬುಧವಾರ ರಾತ್ರಿ ಮದ್ಯಪಾನ ಮಾಡಿ ಮನೆಗೆ ಆಗಮಿಸಿದ್ದ ಶ್ರೀಮಹೇಶ್‌, ಪುತ್ರಿ ನಕ್ಷತ್ರಾಳನ್ನು ಅಮಾನುಷವಾಗಿ ಕೊಲೆ ಮಾಡಿದ್ದಾನೆ. ಈ ವೇಳೆ ಬಾಲಕಿಯ ಚೀರಾಟ ಕೇಳಿ ನೆರವಿಗೆ ಧಾವಿಸಿದ್ದ ತನ್ನ ತಾಯಿ ಸುನಂದಾ (62) ಅವರ ಮೇಲೂ ಶ್ರೀಮಹೇಶ್‌ ಹಲ್ಲೆ ನಡೆಸಿದ್ದು, ಆಕೆಯ ಕೈಗಮತ್ತು ಕತ್ತಿನ ಭಾಗದಲ್ಲಿ ಗಾಯಗಳಾಗಿವೆ.

ʻತಾಯಿಯ ಮನೆಗೆ ಹೋಗಬೇಕೆಂದು ಮಗಳು ಹಠ ಹಿಡಿದ ಕಾರಣ ಅವಳನ್ನು ಕೊಲೆ ಮಾಡಿದೆʼ ಎಂದು ಆರೋಪಿ ಪೊಲೀಸ್‌ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ. ಎರಡು ವರ್ಷಗಳ ಹಿಂದೆ ಮೃತ ಬಾಲಕಿಯ ತಾಯಿ ವಿದ್ಯಾ ಆತ್ಮಹತ್ಯೆಗೆ ಶರಣಾಗಿದ್ದರು.

Advertisements

ಪೊಲೀಸ್‌ ಅಧಿಕಾರಿಯೊಬ್ಬರ ಜೊತೆ ಆರೋಪಿ  ಶ್ರೀಮಹೇಶ್‌ಗೆ ವಿವಾಹ ನಿಶ್ಚಯವಾಗಿತ್ತು. ಆದರೆ ಕಾರಣಾಂತರಗಳಿಂದ ಆ ಮದುವೆ ಇತ್ತೀಚೆಗೆ ರದ್ದಾಗಿತ್ತು.

ವಿಚಾರಣೆ ವೇಳೆ ಆತ್ಮಹತ್ಯೆಗೆ ಯತ್ನ

ತನ್ನ ಆರು ವರ್ಷದ ಮಗಳನ್ನು ಕೊಂದ ಆರೋಪ ಹೊತ್ತಿರುವ ಶ್ರೀಮಹೇಶ್‌, ಪೊಲೀಸ್‌ ವಿಚಾರಣೆ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ.  ಪೊಲೀಸ್ ಕಸ್ಟಡಿಯಲ್ಲಿದ್ದ ವೇಳೆ ಕತ್ತು ಸೀಳಲು ಪ್ರಯತ್ನಿಸಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X