ದಕ್ಷಿಣ ಕನ್ನಡ | ಫೆ.5ರಂದು ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸಾಮೂಹಿಕ ಧರಣಿ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳನ್ನು ಬಗೆಹರಿಸಬೇಕು, ಬ್ರಹ್ಮರ ಕೂಟ್ಲು ಟೋಲ್ ಗೇಟ್ ತೆರವುಗೊಳಿಸಬೇಕು, ಹೊಸ ಟೋಲ್‌ಗೇಟ್‌ಗಳನ್ನು ಅಳವಡಿಸುವ ಸಂದರ್ಭ ಅಂತರದ ನಿಯಮಗಳನ್ನು ಪಾಲಿಸಬೇಕು, ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಫೆಬ್ರವರಿ 5ರ ಬುಧವಾರದಂದು ಬೆಳಗ್ಗೆ 10 ಗಂಟೆಗೆ ನಂತೂರು ಜಂಕ್ಷನ್ ಸಮೀಪ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ, ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಸಾಮೂಹಿಕ ಧರಣಿ ಹಮ್ಮಿಕೊಂಡಿದೆ ಎಂದು ಹೋರಾಟ ಸಮಿತಿಯ ಸಂಚಾಲಯ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

ಮೇಲ್ದರ್ಜೆಗೆ ಏರುತ್ತಿರುವ ಬಿ ಸಿ ರೋಡ್ – ಗುಂಡ್ಯ, ಪೂಂಜಾಲಕಟ್ಟೆ – ಚಾರ್ಮಾಡಿ, ನಂತೂರು – ಮೂಡಬಿದ್ರೆ – ಕಾರ್ಕಳ ಹೆದ್ದಾರಿ ಕಾಮಗಾರಿಗಳನ್ನು ವೇಗವಾಗಿ ಪೂರ್ಣಗೊಳಿಸಬೇಕು, ಪೂರ್ತಿ ಹದಗೆಟ್ಟಿರುವ ಸುರತ್ಕಲ್ – ನಂತೂರು ಹೆದ್ದಾರಿಯನ್ನು ಪೂರ್ಣ ಪ್ರಮಾಣದಲ್ಲಿ ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಸ್ಥಗಿತಗೊಂಡಿರುವ ನಂತೂರು ಮೇಲ್ಸೇತುವೆ, ಕೂಳೂರು ನೂತನ ಸೇತುವೆ ಕಾಮಗಾರಿಗಳನ್ನು ಆದ್ಯತೆಯಲ್ಲಿ ನಡೆಸಿ ಕಾಲಮಿತಿಯ ಒಳಗಡೆ ಪೂರ್ಣಗೊಳಿಸಬೇಕು ಮುಂತಾದ ಅತ್ಯಂತ ಪ್ರಮುಖ ಬೇಡಿಕೆಗಳ ಮೇಲೆ ಸಾಮೂಹಿಕ ಧರಣಿ ನಡೆಯುತ್ತಿದ್ದು, ಸಮಸ್ಯೆಗಳು ಬಗೆ ಹರಿಯುವವರೆಗೆ ಹಲವು ಹಂತಗಳಲ್ಲಿ ಹೋರಾಟವನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ಹೋರಾಟ ಸಮಿತಿ ತಿಳಿಸಿದೆ.

Advertisements

ಇದನ್ನು ಓದಿದ್ದೀರಾ? ಯಮುನಾ ನದಿಯ ನೀರನ್ನು ಕುಡಿದು ತೋರಿಸಿ: ಅರವಿಂದ್‌ ಕೇಜ್ರಿವಾಲ್‌ಗೆ ಸವಾಲೆಸೆದ ರಾಹುಲ್ ಗಾಂಧಿ

ಜಿಲ್ಲೆಯ ಮಾಜಿ ಸಚಿವರು, ಶಾಸಕರುಗಳು, ವಿವಿಧ ಜನಪರ ಸಂಘಟನೆಗಳ ಪ್ರಮುಖರು, ಸಾಮಾಜಿಕ ಕಾರ್ಯಕರ್ತರುಗಳು ಧರಣಿಯಲ್ಲಿ ಭಾಗಿಯಾಗಲಿದ್ದಾರೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X