ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ನಿರೀಕ್ಷೆ: ಡಿ ಕೆ ಶಿವಕುಮಾರ್

Date:

Advertisements

‘ಇನ್ವೆಸ್ಟ್ ಕರ್ನಾಟಕ 2025’ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ರಾಜ್ಯದಲ್ಲಿ ಸುಮಾರು ₹10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ. ಇಲ್ಲಿಯವರೆಗೂ ಸುಮಾರು ₹7 ಲಕ್ಷ ಕೋಟಿ ಬಂಡವಾಳದ ಹರಿವನ್ನು ದೃಢೀಕರಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಫೆ. 11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ “ಇನ್ವೆಸ್ಟ್ ಕರ್ನಾಟಕ 2025” ಕುರಿತು ವಿಧಾನಸೌಧದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಿದ್ಧತೆ ಪರಿಶೀಲನೆ ಸಭೆ ನಂತರ ಮಾಧ್ಯಮದವರನ್ನುದ್ದೇಶಿಸಿ ಅವರು ಮಾತನಾಡಿದರು.

“60ಕ್ಕೂ ಹೆಚ್ಚು ಗಣ್ಯ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇವರು ನಾನಾ ವಿಚಾರಗಳನ್ನು ಹಂಚಿಕೊಳ್ಳಲಿದ್ದು, 2 ಸಾವಿರದಷ್ಟು ಹೂಡಿಕೆದಾರರು ಸಮಾವೇಶದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದಾರೆ. 18 ರಾಷ್ಟ್ರಗಳು ಸಮಾವೇಶದಲ್ಲಿ ಭಾಗವಹಿಸಲಿದ್ದು, 9 ದೇಶಗಳು ತಮ್ಮ ಪೆವಿಲಿಯನ್‌ಗಳನ್ನು ತೆರೆಯಲು ಮುಂದೆ ಬಂದಿದ್ದಾರೆ. 10 ದೇಶಗಳ ಉನ್ನತ ಮಟ್ಟದ ಕೈಗಾರಿಕಾ ವಲಯದ ನಾಯಕರು ತಾಂತ್ರಿಕ ವಲಯದ ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ” ಎಂದು ಮಾಹಿತಿ ನೀಡಿದರು.

Advertisements

“ಕರ್ನಾಟಕ ರಾಜ್ಯ ನೂತನ ಕೈಗಾರಿಕಾ ನೀತಿ 2025-30 ಅನ್ನು ಈ ಸಮಾವೇಶದಲ್ಲಿ ಘೋಷಣೆ ಮಾಡಲಾಗುವುದು. ದೇಶದ ಅನೇಕ ರಾಜ್ಯಗಳ ನೀತಿಗಳನ್ನು ಅಧ್ಯಯನ ಮಾಡಲಾಗಿದ್ದು ಎಲ್ಲದಕ್ಕಿಂತ ಉತ್ತಮವಾದ, ಆಕರ್ಷಣೀಯವಾದ ನೀತಿಯನ್ನು ಪರಿಚಯಿಸಲಾಗುವುದು. ಜೊತೆಗೆ, ಕ್ಲೀನ್ ಮೊಬಿಲಿಟಿ ನೀತಿ 2025-30 ಅನ್ನು ಅನಾವರಣ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಏಕಗವಾಕ್ಷಿ ಅನುಕೂಲತೆಯನ್ನು ತರಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೂಡಿಕೆದಾರರು ಮತ್ತು ಖರೀದಿದಾರರ ನಡುವೆ ಹೊಂದಾಣಿಕೆ ಏರ್ಪಡಿಸುವ ಕೆಲಸ ಮಾಡಲಾಗುವುದು. 4 ಸಾವಿರ ಎಸ್‌ಎಂಇಗಳಿಗೆ ಇಲಾಖೆ ವತಿಯಿಂದ ತರಬೇತಿ ನೀಡಿ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮೂರು ಲಕ್ಷ ಡಾಲರ್ ಮೊತ್ತದ ಬಹುಮಾನ ವಿತರಣೆ

“ಅನೇಕ ಹೂಡಿಕೆದಾರರು ಬೆಂಗಳೂರು ಸೇರಿದಂತೆ ಹೊರಗಿನ ಜಿಲ್ಲೆಗಳಲ್ಲಿ ಸಾಕಷ್ಟು ಉದ್ಯೋಗ ಸೃಷ್ಟಿಗೆ ಒತ್ತನ್ನು ನೀಡಿದ್ದಾರೆ. ಇವರಿಗೆ ಮೂರು ಲಕ್ಷ ಡಾಲರ್ ಮೊತ್ತದ ಬಹುಮಾನ ನೀಡಲಾಗುವುದು. ನವೋದ್ಯಮಗಳ ಪ್ರತಿ ವಿಭಾಗಕ್ಕೆ ಒಟ್ಟು 1 ಲಕ್ಷ ಡಾಲರ್ ಬಹುಮಾನ ಮೊತ್ತ ನಿಗದಿ ಮಾಡಲಾಗಿದೆ” ಎಂದು ಹೇಳಿದರು.

“ಸುಮಾರು 30ಕ್ಕೂ ಹೆಚ್ಚು ನವನವೀನ ರೀತಿಯ ಆಲೋಚನೆ ಹೊಂದಿರುವ ನವೋದ್ಯಮಗಳು ಕರ್ನಾಟಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಭಾಗವಹಿಸುತ್ತಿವೆ. ಸುಮಾರು 1 ಸಾವಿರಕ್ಕೂ ಹೆಚ್ಚು ನವೋದ್ಯಮಗಳಿಂದ ಪ್ರದರ್ಶನಕ್ಕೆ ಅರ್ಜಿಗಳು ಬಂದಿದ್ದವು. ಇವರಲ್ಲಿ ವಿನೂತನ ಚಿಂತನೆಗಳನ್ನು ಹೊಂದಿರುವ 45 ನವೋದ್ಯಮಗಳಿಗೆ ಅವಕಾಶ ಕಲ್ಪಿಸಲಾಗಿದೆ” ಎಂದರು.

“ಒಟ್ಟು 85 ಮಳಿಗೆಗಳು ಇರಲಿದ್ದು ಇಲ್ಲಿ ವಸ್ತು ಪ್ರದರ್ಶನಕ್ಕೆ, ಮಾಹಿತಿ ಸಂವಹನಕ್ಕೆ ಅವಕಾಶ ಕಲ್ಪಿಸಲಾಗುವುದು. ತಾಂತ್ರಿಕ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಸರ್ಕಾರ ಬೆಂಗಳೂರಿಗಿಂತ ಇತರೇ ಜಿಲ್ಲೆಗಳಲ್ಲಿ ಹೆಚ್ಚು ಬಂಡವಾಳ ಹೂಡಿಕೆಗೆ ಪ್ರೋತ್ಸಾಹ ನೀಡುತ್ತಿದೆ. ಬೆಂಗಳೂರಿಗಿಂತ ಹೊರಗಿನ ಜಿಲ್ಲೆಗಳಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿ ಮಾಡಬೇಕು ಎಂದು ಎಲ್ಲ ಹೂಡಿಕೆದಾರರಿಗೆ ಮನವಿ ಮಾಡಲಾಗಿದೆ” ಎಂದು ತಿಳಿಸಿದರು.

“ಇದೇ ಫೆ. 11 ರಿಂದ 14 ನೇ ತಾರೀಕಿನ ತನಕ ನಡೆಯುವ ಸಮಾವೇಶದ ಯಶಸ್ಸಿಗೆ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರ ನೇತೃತ್ವದ ತಂಡ ಸುಮಾರು 16 ದೇಶಗಳಿಗೆ ಭೇಟಿ ಮಾಡಿ ಅನೇಕರಿಗೆ ಆಹ್ವಾನ ನೀಡಿ ನಮ್ಮ ಕರ್ನಾಟಕದಲ್ಲಿರುವ ಮಾನವ ಸಂಪನ್ಮೂಲ, ಸಂಪತ್ತು ಸರ್ಕಾರದ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಫೆ.11 ರಂದು ಉದ್ಘಾಟನೆಯಾದ ನಂತರ ಒಂದಷ್ಟು ಒಡಂಬಡಿಕೆಗಳಿಗೆ ಸಹಿ ಹಾಕುವ ಕಾರ್ಯಕ್ರಮವಿರಲಿದೆ” ಎಂದರು.

“ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಮುನ್ನುಡಿ ಬರೆದಿದ್ದೇ ಕರ್ನಾಟಕ. ಮೊದಲನೇ ಬಾರಿ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಇದನ್ನು ನಡೆಸಲಾಗಿತ್ತು. ಇದನ್ನು ಗಮನಿಸಿದ ಅನೇಕ ರಾಜ್ಯಗಳು ಇದನ್ನು ಅನುಕರಣೆ ಮಾಡಿದ್ದವು. ಕರ್ನಾಟಕ ಸರ್ಕಾರದ ಮೇಲೆ ನಂಬಿಕೆಯನ್ನಿಟ್ಟು ಬರುತ್ತಿರುವ ಎಲ್ಲ ಹೂಡಿಕೆದಾರರಿಗೆ ಅಭಿನಂದನೆಗಳು. ಎಲ್ಲ ರೀತಿಯಲ್ಲಿಯೂ ಕರ್ನಾಟಕ ಪ್ರಜ್ವಲಿಸಲಿದೆ. ಉದ್ಯೋಗ ಸೃಷ್ಟಿ ಸೇರಿದಂತೆ ಉತ್ಪಾದನೆಗೆ ಅನುಕೂಲಕರ ವಾತಾವರಣ ಉಂಟಾಗಲಿದೆ ಎಂಬುದು ನಮ್ಮ ನಂಬಿಕೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ ಗ್ರೇಸ್ ಅಂಕ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಸುದ್ದಿಗೋಷ್ಠಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಎಂ ಬಿ ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕೃಷಿ ಸಚಿವ ಚಲುವರಾಯಸ್ವಾಮಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X