ತಾಯಿ ಮಾಡಿದ ಸಾಲಕ್ಕೆ ಹೆದರಿ ಯುವರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಟಗುಪ್ಪ ತಾಲೂಕಿನ ರಾಂಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ರಾಂಪುರ ಗ್ರಾಮದ ಗಣೇಶ (25) ಮೃತ ಯುವಕ. ಮೃತ ಯುವಕನ ತಾಯಿ ಕೃಷಿಗಾಗಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ₹5 ಲಕ್ಷ ಸಾಲ ಮಾಡಿದ್ದರು. ಅದನ್ನು ತೀರಿಸಲು ಸಾಧ್ಯವಾಗದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.