ಗ್ಯಾರಂಟಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಜಿಲ್ಲಾಡಳಿತ ಭವನದ ಕಚೇರಿ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಗ್ಯಾರೆಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಯಲುವಹಳ್ಳಿ ಎನ್.ರಮೇಶ್ ತಿಳಿಸಿದರು.
ಚಿಕ್ಕಬಳ್ಳಾಪುರ ನಗರ ಹೊರವಲಯದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ನೆಲ ಮಹಡಿಯಲ್ಲಿ ಹಮ್ಮಿಕೊಂಡಿದ್ದ ನೂತನ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ಸಂದರ್ಭದಲ್ಲಿ ಸುಮಾರು ವಾರ್ಷಿಕ 58 ಸಾವಿರ ಕೋಟಿ ರೂಪಾಯಿಗಳನ್ನು ಬಜೆಟ್‌ನಲ್ಲಿ ತೆಗೆದಿಟ್ಟು ಕರ್ನಾಟಕ ಜನತೆಗೆ ಪಂಚ ಗ್ಯಾರಂಟಿಗಳ ಫಲಾನುಭವಿಗಳಿಗೆ ವಿತರಿಸಲಾಗಿದೆ. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಯೋಜನೆಗಳ ಸೌಲಭ್ಯಗಳನ್ನು ಸಾಕಷ್ಟು ಜನರು ಪಡೆದಿದ್ದಾರೆ. ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕಿದೆ ಎಂದು ಹೇಳಿದರು.

ಇಂದಿನಿಂದ ನಾನು ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ಪಡೆದಿದ್ದೇನೆ. ಇನ್ನೂ ನನಗೆ ಸಂಪೂರ್ಣ ಮಾಹಿತಿ ದೊರೆತಿಲ್ಲ. ಐದು ಇಲಾಖೆಗಳು ನಮ್ಮ ಅಡಿಯಲ್ಲಿ ಕೆಲಸ ಮಾಡುತ್ತಿವೆ. ಈ ಐದು ಇಲಾಖೆಗಳಲ್ಲಿ ನಮ್ಮ ಅಧಿಕಾರಿಗಳಿದ್ದರೆ ಅವರಿಗೆಲ್ಲಾ ಪೂರ್ಣ ಮಾಹಿತಿಯನ್ನು ಸಂಗ್ರಹಣೆ ಮಾಡುವಂತೆ ಸೂಚಿಸಿದ್ದೇನೆ. ಆ ಎಲ್ಲಾ ಮಾಹಿತಿಯನ್ನು ಸಂಗ್ರಹಣೆ ಮಾಡಿಕೊಂಡು ಎಷ್ಟು ಫಲಾನುಭವಿಗಳಿಗೆ ಈ ಪಂಚ ಗ್ಯಾರಂಟಿ ಯೋಜನೆಗಳು ತಲುಪಿಲ್ಲವೆಂದು ಪರಿಗಣಿಸಿ ನಿಜವಾದ ಫಲಾನುಭವಿಗಳಿಗೆ ಪಂಚ ಗ್ಯಾರೆಂಟಿ ಯೋಜನೆಗಳನ್ನು ತಲುಪಿಸುವ ವ್ಯವಸ್ಥೆಯನ್ನು ಪ್ರತಿ ತಾಲೂಕಿನಲ್ಲೂ ಅಧ್ಯಕ್ಷರು, ಉಪಾಧ್ಯಕ್ಷರ ಗ್ಯಾರಂಟಿ ಯೋಜನೆಗಳ ಸಮಿತಿಗಳಿವೆ. ಜಿಲ್ಲಾ ಸಮಿತಿ ಇದೆ ಇವರಿಂದ ಪೂರ್ಣ ಅಂಕಿ ಅಂಶ ಪಡೆದು ಸಭೆಯನ್ನು ಆಯೋಜಿಸಿ ಪೂರ್ತಿ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದರು.
ಈ ಹುದ್ದೆ ತುಂಬಾ ಪ್ರಮುಖವಾದ ಹುದ್ದೆ. ಪಂಚ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿರುವವರನ್ನು ಗುರುತಿಸಿ ನಿಜವಾದ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವ ಜವಾಬ್ದಾರಿ ನನ್ನದು. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಉಪಯೋಗಿಸಿಕೊಂಡು ಕೆಲಸ ಮಾಡುತ್ತೇನೆ ಎಂದರು.
ಇದನ್ನೂ ಓದಿ : ಈ ದಿನ ಸಂಪಾದಕೀಯ | ಅಯೋಧ್ಯೆ ಅತ್ಯಾಚಾರ ಪ್ರಕರಣ; ಶೋಷಿತ ಸಮುದಾಯಕ್ಕೆ ಸಿಗದ ರಕ್ಷಣೆ
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಜಿಲ್ಲಾ ಉದ್ಯೋಗಾಧಿಕಾರಿ ಎಂ.ಪ್ರಸಾದ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.