ವಿಚಾರ | ಸರ್ಕಾರಿ ಶಾಲೆ, ಮಾದರಿ ಶಾಲೆ ಆಗದೇಕೆ?

Date:

Advertisements
ಮೊದಲು ರಾಜಕಾರಣಿಗಳು ಹಾಗೂ ಸರ್ಕಾರಿ ನೌಕರರ ಮಕ್ಕಳಿಗೆ ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿಯೇ ಶಿಕ್ಷಣ ಕೊಡಿಸಬೇಕೆಂಬ ಕಾನೂನು ಜಾರಿಯಾಗಬೇಕು.

ಆಧುನಿಕ ದಿನಮಾನಗಳಲ್ಲಿ ರಾಜಕಾರಣಿಗಳು, ಹೆಸರಾಂತ ವ್ಯಕ್ತಿಗಳು, ಹೋರಾಟಗಾರರು ಸರ್ಕಾರಿ ಶಾಲೆಗಳನ್ನು ಉಳಿಸಿ, ಸರ್ಕಾರಿ ಶಾಲೆಗಳನ್ನು ಬೆಳೆಸಿ ಎಂಬ ಮಾತುಗಳನ್ನಾಡುವುದನ್ನು ನಾವು ಕೇಳಿದ್ದೇವೆ. ಆದರೆ, ಇವರುಗಳು ಮಾಡುತ್ತಿರುವುದಾದರೂ ಏನು? ಶಾಲೆಗಳ ಅಭಿವೃದ್ಧಿಯನ್ನು ಯಾರು ಮಾಡಬೇಕು? ಹೇಗೆ ಮಾಡಬೇಕು? ಸರ್ಕಾರಿ ಶಾಲೆಗಳ ಅಭಿವೃದ್ಧಿ ಕೆಲಸಗಳಲ್ಲಿ ನಮ್ಮ ಪಾತ್ರ ಹೇಗಿರಬೇಕು ಎಂಬ ಅರಿವೇ ಇಲ್ಲದೆ ಸರ್ಕಾರಿ ಶಾಲೆಗಳ ಪ್ರಗತಿಯ ಕುರಿತು ಮಾತನಾಡುತ್ತಿದ್ದಾರೆ.

ಭೂತದ ಬಾಯಲ್ಲಿ ಭಗವದ್ಗೀತೆ ಎಂಬಂತೆ ಸರ್ಕಾರಿ ಶಾಲೆಯ ಒಳಿತನ್ನು ಬಯಸುತ್ತಿದ್ದೇವೆ ಎಂದು ನಟಿಸುವ ಇವರುಗಳು, ಅವರ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿಯೇ ಶಿಕ್ಷಣ ಕೊಡಿಸುತ್ತಿದ್ದಾರೆಯೇ?, ಇಲ್ಲ. ಸರ್ಕಾರಿ ಕೆಲಸ ಬೇಕು, ಸರ್ಕಾರದ ಸೌಲಭ್ಯ ಬೇಕು, ತಮ್ಮ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಬೇಡ. ಇದಕ್ಕೆ ಕಾರಣ ಸರ್ಕಾರಿ ಶಾಲೆಗಳಲ್ಲಿನ ಅವ್ಯವಸ್ಥೆ ಮತ್ತು ದೋಷಪೂರಿತ ಶಿಕ್ಷಣದ ಕುರಿತು ಇವರುಗಳು ಈಗಾಗಲೇ ಅರಿತಿರುವುದು.

ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜಕಾರಣಿಗಳು ತಮ್ಮದೇ ಆದ ಖಾಸಗಿ ಶಾಲೆಗಳಿಗೆ ಒತ್ತು ನೀಡುತ್ತಿರುವುದಷ್ಟೇ ಅಲ್ಲದೆ, ಮೂಲಭೂತ ಸೌಕರ್ಯಗಳು, ಉತ್ತಮ ಶಿಕ್ಷಣವನ್ನು ನೀಡುವುದರ ಮೂಲಕ ಹಣದ ಲೂಟಿಯಲ್ಲಿ ಆಸಕ್ತರಾಗಿದ್ದಾರೆ. ವೈಯಕ್ತಿಕ ಬೆಳವಣಿಗೆಯತ್ತ ಮುಖ ಮಾಡಿದ್ದಾರೆ.

Advertisements

ಸರ್ಕಾರಿ ಶಾಲೆಗಳ ಅಭಿವೃದ್ದಿ ಕುರಿತು ಮಾತನಾಡುವ ಇಂತಹವರು ತಮ್ಮ ಮಕ್ಕಳನ್ನು ಅದೇ ಸರ್ಕಾರಿ ಶಾಲೆಗಳಲ್ಲಿ ಓದಿಸುವ ಮನಸ್ಸು ಮಾಡಬೇಕು. ಖಾಲಿ ಮಾತುಗಳನ್ನಾಡುವ ಹಣವಂತರು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ದುಸ್ಥಿತಿಯಲ್ಲಿರುವ ಶಾಲೆಗಳ ದುರಸ್ತಿಗೊಳಿಸುವತ್ತ ಗಮನಹರಿಸಿ ಮೂಲಭೂತ ಸೌಕರ್ಯಗಳು, ಉತ್ತಮ ಕುರ್ಚಿಗಳು, ಬೆಂಚುಗಳ ವ್ಯವಸ್ಥೆ, ಆಧುನಿಕ ಶಿಕ್ಷಣ ವ್ಯವಸ್ಥೆ, ಉತ್ತಮ ರೀತಿಯಲ್ಲಿ ಶಿಕ್ಷಕರಿಗೆ ತರಬೇತಿ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾರ್ಪಾಡು ಮಾಡಬಹುದಲ್ಲವೇ?.

ಇತ್ತೀಚೆಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿರುವ ರಾಜಕಾರಣಿಯೊಬ್ಬರು ತಮಗೆ ಬರುವ ವೇತನವನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನ ಮಾಡುತ್ತಿದ್ದಾರೆ. ಹುಟ್ಟೂರಲ್ಲಿ ಸುಸಜ್ಜಿತ ಸರ್ಕಾರಿ ಶಾಲೆಯನ್ನು ಕಟ್ಟಿಸುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ತಮ್ಮ ಹುಟ್ಟು ಹಬ್ಬಕ್ಕೊಂದು ಸರ್ಕಾರಿ ಶಾಲೆಗೆ ಮರುಹುಟ್ಟು ನೀಡುವ, ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವಂತ ಕೆಲಸಕ್ಕೆ ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ. ಇವರ ಮಾದರಿಯಲ್ಲಿ ಪ್ರತಿಯೊಬ್ಬರೂ ನಡೆದಾಗ ಸರ್ಕಾರಿ ಶಾಲೆ, ಮಾದರಿ ಶಾಲೆ ಆಗುವುದರಲ್ಲಿ ಯಾವ ಸಂಶಯವೂ ಇಲ್ಲ.

ಇದರ ಜತೆಗೆ ನಮ್ಮ ರಾಜ್ಯದಲ್ಲಿ ಮೊದಲು ರಾಜಕಾರಣಿಗಳು ಹಾಗೂ ಸರ್ಕಾರಿ ನೌಕರರ ಮಕ್ಕಳಿಗೆ ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿಯೇ ಶಿಕ್ಷಣ ಕೊಡಿಸಬೇಕೆಂಬ ಕಾನೂನು ಜಾರಿಯಾಗಬೇಕು. ಆಳುವ ವರ್ಗದವರಿಂದ ಬದಲಾವಣೆಗಳು ಮೊದಲು ಆರಂಭವಾದರೆ ಪ್ರಜೆಗಳು ಇದನ್ನು ಅನುಕರಣೆ ಮಾಡುವುದು ನಿಸ್ಸಂದೇಹ.

ಬರಹ : ಮೇಘನಾ ಯು ಶಂಕರಘಟ್ಟ, ಪತ್ರಿಕೋದ್ಯಮ ವಿದ್ಯಾರ್ಥಿನಿ, ಕುವೆಂಪು ವಿವಿ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಾಹಿತಿ ದೇವನೂರ ಮಹಾದೇವ ಬಹಿರಂಗ ಪತ್ರ

ಜಸ್ಟಿಸ್‌ ದಾಸ್ ಆಯೋಗವು ಒಳಮೀಸಲಾತಿ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ...

ಮತದಾರ ಪಟ್ಟಿ ಅಳಿಸಿ ತಪ್ಪಿಸಿಕೊಳ್ಳುತ್ತಿರುವ ಆಯೋಗ: ದೇಶದ ಪ್ರತಿಯೊಬ್ಬರೂ ಕೂಡ ಪ್ರಶ್ನೆಗೆ ಅರ್ಹರು

ದೇಶದ ಜನತೆ ಜಾಗೃತರಾಗಿ, ಈ ಅಸಮರ್ಪಕತೆಗಳ ವಿರುದ್ಧ ಧ್ವನಿ ಎತ್ತಿದರೆ ಮಾತ್ರ...

ಪೆಟ್ರೋಲ್‌ಗೆ ಇಥೆನಾಲ್ ಮಿಶ್ರಣ: ಪರಿಸರಕ್ಕೆ ಚೂರು ಲಾಭ, ವಾಹನಗಳಿಗೆ ಹೆಚ್ಚು ಅಪಾಯಕಾರಿ

ಇ20 ಮಿಶ್ರಣವು ಪರಿಸರಕ್ಕೆ ಒಂಚೂರು ಲಾಭದಾಯಕವಾದರೂ, ವಾಹನಗಳಿಗೆ ಅದರಲ್ಲೂ ಹಳೆಯ ಮಾದರಿ...

ಹೊಸ ಆದಾಯ ತೆರಿಗೆ ಮಸೂದೆ 2025: ಬದಲಾವಣೆಗಳು – ಅನಾನುಕೂಲಗಳು ಏನೇನು?

ನೂತನ ಮಸೂದೆಯು ಹಳೆಯ ಕಾಯ್ದೆಯನ್ನು ಸಂಪೂರ್ಣವಾಗಿ ಬದಲಿಸುವ ಗುರಿ ಹೊಂದಿದ್ದು, ತೆರಿಗೆ...

Download Eedina App Android / iOS

X