ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಮತ್ತೊಂದು ಗೂಡ್ಸ್ ರೈಲು ಡಿಕ್ಕಿ ಹೊಡೆದುಕೊಂಡು ಅಪಘಾತವಾಗಿರುವ ಘಟನೆ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ ಪಂಭಿಪುರದಲ್ಲಿ ನಡೆದಿದೆ. ಘಟನೆಯಲ್ಲಿ ಚಲಿಸುತ್ತಿದ್ದ ಗೂಡ್ಸ್ ರೈಲಿನ ಗಾರ್ಡ್ ಕೋಚ್ ಮತ್ತು ಇಬ್ಬರು ರೈಲ್ವೆ ಅಧಿಕಾರಿಗಳಿಗೆ ಗಾಯಗಳಾಗಿವೆ. ರೈಲಿನ ಎಂಜಿನ್ ಹಳಿ ತಪ್ಪಿದೆ.
ಪಂಭಿಪುರ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲೊಂದು ನಿಂತಿತ್ತು. ಆ ರೈಲು ನಿಂತಿದ್ದ ಹಳಿಯಲ್ಲಿಯೇ ಮತ್ತೊಂದು ರೈಲು ಬಂದಿದ್ದು, ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ, ಪಂಭಿಪುರ ರೈಲ್ವೆ ಮಾರ್ಗದಲ್ಲಿ ರೈಲುಗಳ ಸಂಚಾರಕ್ಕೆ ಅಡಚಣೆಯಾಗಿದೆ.