ಕೊಲ್ಲಾಪುರ ಹಿಂಸಾಚಾರ: ಬೆಳಗಾವಿ ಜಿಲ್ಲೆಯಲ್ಲಿ ಕಟ್ಟೆಚ್ಚರ

Date:

Advertisements

ಟಿಪ್ಪು ಸುಲ್ತಾನ್ ಮತ್ತು ಮೊಘಲ್ ಚಕ್ರವರ್ತಿ ಔರಂಗಜೇಬ್ ಅವರನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದನ್ನು ಖಂಡಿಸಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿತ್ತು. ಕರ್ನಾಟಕದ ಗಡಿಯಿಂದ ಕೇವಲ 23 ಕಿ.ಮೀ ದೂರದಲ್ಲಿರುವ ಕೊಲ್ಲಾಪುರದಲ್ಲಿ ನಡೆದ ಹಿಂಸಾಚಾರವು ಬೆಳಗಾವಿಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದ್ದು, ಬೆಳಗಾವಿ ಪೊಲೀಸರು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.

ಜಿಲ್ಲೆಯ ಯಾರೂ ಕೂಡ ಕೋಮು ಭಾವನೆಗಳಿಗೆ ಧಕ್ಕೆ ತರುವ ಮತ್ತು ಕೋಮುಗಲಭೆಗೆ ಕಾರಣವಾಗುವಂತಹ ಯಾವುದೇ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಬಾರದೆಂದು ಜಿಲ್ಲೆಯ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಅಂತಹ ಪೋಸ್ಟ್‌ಗಳನ್ನು ಹಂಚಿಕೊಳ್ಳುವವರ ವಿರುದ್ಧ ಐಪಿಸಿ ಸೆಕ್ಷನ್ 153 ಎ, 295 ಮತ್ತು 295 ಎ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕೊಲ್ಲಾಪುರ ಹಿಂಸಾಚಾರದ ಹಿನ್ನಲೆಯಲ್ಲಿ ಬೆಳಗಾವಿ ನಗರದ ಎಲ್ಲಾ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತು ಜಿಲ್ಲೆಯಾದ್ಯಂತ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡಿದ ಆರೋಪದಲ್ಲಿ ನಿಪ್ಪಾಣಿ ಪಟ್ಟಣದ ಇಬ್ಬರು ಬಾಲಾಪರಾಧಿಗಳ ವಿರುದ್ಧ ಪೊಲೀಸರು ಗುರುವಾರ ಕ್ರಮ ಕೈಗೊಂಡಿದ್ದಾರೆ. ಆ ಇಬ್ಬರು ಬಾಲಕರು ಮರಾಠ ರಾಜ ಛತ್ರಪತಿ ಶಿವಾಜಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿರದ್ದರು ಎಂದು ಆರೋಪಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ?: ಜೂನ್​​ 30ರೊಳಗೆ ಎಲ್ಲ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸಲು ಲೋಕಾಯುಕ್ತ ಗಡುವು

ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಮುದಾಯಗಳ ಮುಖಂಡರೊಂದಿಗೆ ಶಾಂತಿ ಸಮಿತಿ ಸಭೆ ನಡೆಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೂಕ್ಷ್ಮ ವಿಷಯಗಳನ್ನು ಪೋಸ್ಟ್ ಮಾಡದಂತೆ ಎಸ್‌ಪಿ ಸಂಜೀವ್ ಪಾಟೀಲ್ ಸೂಚನೆ ನೀಡಿದ್ದಾರೆ.

“ನಾವು ಜನರನ್ನು, ವಿಶೇಷವಾಗಿ ಯುವಜನರು ಕೋಮು ಸೂಕ್ಷ್ಮ ವಿಷಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳದಂತೆ ಮತ್ತು ಕೋಮು ದ್ವೇಷವನ್ನು ಹರಡದಂತೆ ವಿನಂತಿಸುತ್ತಿದ್ದೇವೆ. ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನಾವು ಎಲ್ಲ ಸೂಕ್ಷ್ಮ ಪ್ರದೇಶಗಳಲ್ಲಿ ‘ಮಾರ್ಚ್ ಪಾಸ್ಟ್’ ನಡೆಸುತ್ತಿದ್ದೇವೆ” ಎಂದು ಸಂಜೀವ್ ಪಾಟೀಲ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯನ್ನು ಸೋಲಿಸಬೇಕು; ಸಿಎಂ ಜೊತೆ ‘ಎದ್ದೇಳು ಕರ್ನಾಟಕ’ ನಿಯೋಗ ಚರ್ಚೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X