ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹1.23 ಕೋಟಿ ಮೌಲ್ಯದ ಗಾಂಜಾ ಹುಮನಾಬಾದ್ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಜಪ್ತಿ ಮಾಡಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ತೆಲಂಗಾಣದ ಹೈದರಾಬಾದ್ ಕಡೆಯಿಂದ ಹುಮನಾಬಾದ್ ಮಾರ್ಗವಾಗಿ ಮಹಾರಾಷ್ಟ್ರ ಕಡೆಗೆ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಸವಕಲ್ಯಾಣ ಠಾಣೆ ಪಿಎಸ್ಐ ನಾಗೇಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಅಕ್ರಮವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 59 ಗಾಂಜಾದ ಪೊಟ್ಟಣಗಳು ಪತ್ತೆಯಾಗಿವೆ, ಒಟ್ಟು ₹1.23 ಕೋಟಿ ಮೌಲ್ಯದ 123 ಕೆ.ಜಿ. ಗಾಂಜಾ ಹಾಗೂ ₹2 ಲಕ್ಷ ಮೌಲ್ಯದ ಒಂದು ಕಾರು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಠ್ಠಲ, ಬಲವಂತರೆಡ್ಡಿ, ದೇವಿಂದ್ರ, ವಿಶ್ವನಾಥ, ಮಾರುತಿ ಹಾಗೂ ಬಸವರಾಜ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಈ ಕುರಿತು ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.