ರಾಜ್ಯ ಮಾಹಿತಿ ಆಯುಕ್ತರ ಆಯ್ಕೆ ಪಟ್ಟಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ನಿಂದ ನೋಟಿಸ್

Date:

Advertisements

ರಾಜ್ಯ ಮಾಹಿತಿ ಆಯುಕ್ತರ ಆಯ್ಕೆ ಪಟ್ಟಿಯ ವಿರುದ್ಧ ನೈಜ ಹೋರಾಟಗಾರರ ವೇದಿಕೆಯು ಹೈಕೋರ್ಟ್‌ ಮೆಟ್ಟಿಲೇರಿದ್ದು, ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಆರ್‌ ದೇವದಾಸ್‌ ಅವರ ಏಕಸದಸ್ಯ ಪೀಠವು, ರಾಜ್ಯ ಸರ್ಕಾರ ಮತ್ತು ಎಲ್ಲ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದ್ದು, ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿದೆ.

ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಅರ್ಜಿದಾರರು ಮಧ್ಯಂತರ ಆದೇಶ ಕೋರಿರುವುದನ್ನು ಪರಿಗಣಿಸಬಾರದು ಎಂದೇನಿಲ್ಲ. ರಾಜ್ಯ ಸರ್ಕಾರವು ದಾಖಲೆಗಳನ್ನು ಸಲ್ಲಿಸಿದ ಬಳಿಕ ನ್ಯಾಯಾಲಯವು ಸೂಕ್ತ ಆದೇಶ ಮಾಡಲಿದೆ ಎಂದು ಕರ್ನಾಟಕ ಹೈಕೋರ್ಟ್‌ ಮಂಗಳವಾರ ಆದೇಶಿಸಿದೆ.

ಶೋಧನಾ ಸಮಿತಿ ರಚಿಸದೇ ರಾಜ್ಯ ಮುಖ್ಯ ಮಾಹಿತಿ ಆಯುಕ್ತರ ಹುದ್ದೆಗೆ ನಿವೃತ್ತ ಐಎಎಸ್‌ ಅಧಿಕಾರಿ ಆತಿಶ್‌ ಮೋಹನ್‌ ಪ್ರಸಾದ್‌ ಮತ್ತು ಮಾಹಿತಿ ಆಯುಕ್ತರನ್ನಾಗಿ ಕೆ‌ ರಾಮನ್, ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ‌.ಚನ್ನಾಳ, ಎಸ್.ರಾಜಶೇಖರ, ಕೆ ಬದ್ರುದ್ದೀನ್ & ಬಿ ಆರ್ ಮಮತಾ ನೇಮಕ ಮಾಡಿರುವುದಕ್ಕೆ ಮಧ್ಯಂತರ ಪರಿಹಾರದ ಭಾಗವಾಗಿ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಬೆಂಗಳೂರಿನ ನೈಜ ಹೋರಾಟಗಾರರ ವೇದಿಕೆಯ ಮಲ್ಲಿಕಾರ್ಜುನ ರಾಜು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಆರ್‌ ದೇವದಾಸ್‌ ಅವರ ಏಕಸದಸ್ಯ ಪೀಠ ನಡೆಸಿತು.

Advertisements

ವಾದ-ಪ್ರತಿವಾದ ಆಲಿಸಿದ ಪೀಠವು, “ರಾಜ್ಯ ಸರ್ಕಾರ ಮತ್ತು ಆತಿಶ್‌ ಮೋಹನ್‌ ಪ್ರಸಾದ್‌, ಕೆ‌ ರಾಮನ್, ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ‌.ಚನ್ನಾಳ, ಎಸ್.ರಾಜಶೇಖರ, ಕೆ ಬದ್ರುದ್ದೀನ್ & ಬಿ ಆರ್ ಮಮತಾ ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಮಧ್ಯಂತರ ಆದೇಶ ಕೋರಿರುವುದನ್ನು ಪರಿಗಣಿಸಬಾರದು ಎಂದೇನಿಲ್ಲ ಎಂದು ಸರ್ಕಾರ ಮತ್ತು ಪ್ರತಿವಾದಿಗಳಿಗೆ ತಿಳಿಸಲಾಗುತ್ತಿದೆ. ರಾಜ್ಯ ಸರ್ಕಾರವು ದಾಖಲೆಗಳನ್ನು ಸಲ್ಲಿಸಿದ ಬಳಿಕ ನ್ಯಾಯಾಲಯವು ಸೂಕ್ತ ಆದೇಶ ಮಾಡಲಿದೆ. ನೇಮಕಾತಿಯು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ” ಎಂದು ಆದೇಶಿಸಿದೆ.

ಮಾಹಿತಿ

ರಾಜ್ಯ ಸರ್ಕಾರ ಮತ್ತು ಎಲ್ಲ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿರುವ ನ್ಯಾಯಾಲಯವು ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿದೆ. ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲ ಅಶೋಕ್‌ ಪಾಟೀಲ್‌ ಅವರು, “ಮಾಹಿತಿ ಹಕ್ಕು ಕಾಯಿದೆ ಸೆಕ್ಷನ್‌ 15(3)ರ ಅನ್ವಯ ಮುಖ್ಯಮಂತ್ರಿ, ವಿಪಕ್ಷ ನಾಯಕ ಹಾಗೂ ಒಬ್ಬ ಸಂಪುಟ ದರ್ಜೆಯ ಸಚಿವರ ನೇತೃತ್ವದ ಸಮಿತಿಯು ನಾಮನಿರ್ದೇಶನ ಮಾಡಿದವರನ್ನು ರಾಜ್ಯಪಾಲರು ನೇಮಕ ಮಾಡುತ್ತಾರೆ. ಹುದ್ದೆಗೆ ನೂರಾರು ಅರ್ಜಿಗಳು ಬರುವುದರಿಂದ ಸಿಎಂ ನೇತೃತ್ವದ ಸಮಿತಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗದು. ಅದಕ್ಕಾಗಿ ಶೋಧನಾ ಸಮಿತಿಯನ್ನು ರಚಿಸಬೇಕು. ಪ್ರತಿಯೊಬ್ಬ ಅರ್ಜಿದಾರರ ಅರ್ಹತೆ ಆಧರಿಸಿ ಶೋಧನಾ ಸಮಿತಿಯು ಹೆಸರುಗಳನ್ನು ಅಂತಿಮಗೊಳಿಸುತ್ತದೆ. ಇದು ರಾಜ್ಯದಲ್ಲಿ ನಡೆದಿಲ್ಲ. ಅಂಜಲಿ ಭಾರದ್ವಾಜ್‌ ವರ್ಸಸ್‌ ಭಾರತ ಸರ್ಕಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶಗಳ ಪ್ರಕಾರ ಪ್ರತಿಯೊಂದು ರಾಜ್ಯವೂ ಶೋಧನಾ ಸಮಿತಿ ರಚಿಸಬೇಕು. ಸಲ್ಲಿಕೆಯಾಗುವ ಅರ್ಜಿಗಳನ್ನು ಶೋಧನಾ ಸಮಿತಿಯು ಪರಿಶೀಲಿಸಿ, ಶಿಫಾರಸ್ಸು ಮಾಡಬೇಕು. ಇದನ್ನು ಪಾಲಿಸಲಾಗಿಲ್ಲ” ಎಂದರು.

ಮುಂದುವರಿದು, “ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕವಾಗಿರುವ ಆಶಿತ್‌ ಮೋಹನ್‌ ಪ್ರಸಾದ್‌ ಅವರು ಆ ಹುದ್ದೆಗೆ ಅರ್ಜಿಯನ್ನೇ ಹಾಕಿರಲಿಲ್ಲ. ರಾಜ್ಯ ಮಾಹಿತಿ ಆಯುಕ್ತರ ಹುದ್ದೆಗೆ ಅರ್ಜಿ ಹಾಕಿದ್ದರು. ಇದನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ವಾದ ಮಂಡಿಸಿ, “ಶೋಧನಾ ಸಮಿತಿ/ಆಯ್ಕೆ ಸಮಿತಿ ದಾಖಲೆಗಳನ್ನು ಪರಿಶೀಲಿಸಿ, ಪ್ರತಿವಾದಿಗಳ ಹೆಸರುಗಳನ್ನು ಮುಖ್ಯಮಂತ್ರಿ ನೇತೃತ್ವದ ಸಮಿತಿಯು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದೆ. ಈ ಬಳಿಕ ನೇಮಕಾತಿ ಪ್ರಕ್ರಿಯೆ ನಡೆದಿದೆ. ರಾಜಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಆಯೋಜಿಸಲಾಗಿದೆ. 2025ರ ಜನವರಿ 7ರಂದು ಸುಪ್ರೀಂ ಕೋರ್ಟ್‌ ತನ್ನ ನಿರ್ದೇಶನಗಳನ್ನು ರಾಜ್ಯ ಸರ್ಕಾರಗಳು ಪಾಲಿಸದಿರುವ ಕುರಿತಾದ ಅಹವಾಲುಗಳನ್ನು ಮುಂದಿನ ವಿಚಾರಣೆಯಲ್ಲಿ ಆಲಿಸುವುದಾಗಿ ತಿಳಿಸಿದೆ. ಈ ನೆಲೆಯಲ್ಲಿ ಅರ್ಜಿದಾರರನ್ನು ಸುಪ್ರೀಂ ಕೋರ್ಟ್‌ಗೆ ಸಂಪರ್ಕಿಸಲು ಆದೇಶಿಸಬೇಕು” ಎಂದು ಕೋರಿದರು.

rajyapala 3
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದ್ದ ನೈಜ ಹೋರಾಟಗಾರರ ವೇದಿಕೆ

ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡಿರುವ ಆತಿಶ್‌ ಮೋಹನ್‌ ಪ್ರಸಾದ್‌ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ ಹಾಜರಿದ್ದರು.

ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತ ರ ಮತ್ತು ಮಾಹಿತಿ ಆಯುಕ್ತರನ್ನು ಆಯ್ಕೆ ಮಾಡಿ ಕಳೆದ ಜ.30ರಂದು ಆದೇಶ ಹೊರಡಿಸಿತ್ತು. ಈ ಆದೇಶವು ಭಾರತದ ಸರ್ವೋಚ್ಚ ನ್ಯಾಯಾಲಯದ ಆದೇಶದ ಅನುಷ್ಠಾನ ಮತ್ತುಮಾರ್ಗ ಸೂಚಿಗಳನ್ನು ಪಾಲನೆ ಮಾಡದೆ, ನ್ಯಾಯಾಲಯದ ಆದೇಶದ ಉಲ್ಲಂಘನೆ ಮಾಡಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ; ಸ್ಕೂಟರ್‌ಗೆ 1.61 ಲಕ್ಷ ರೂ. ದಂಡ

ಈ ಬಗ್ಗೆ ಕಳೆದ ಜ.30ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನೈಜ ಹೋರಾಟಗಾರರ ವೇದಿಕೆಯ ಮೂವರು ಸದಸ್ಯ ನಿಯೋಗವು ಮನವಿ ಸಲ್ಲಿಸಿತ್ತು. ಆದರೆ ತ್ರಿಸದಸ್ಯ ನಿಯೋಗವು ಭೇಟಿಯಾಗುವ ಮೊದಲೇ ಆಯ್ಕೆ ಪಟ್ಟಿಯನ್ನು ಅನುಮೋದಿಸಿ ಸರ್ಕಾರಕ್ಕೆ ಕಳುಹಿಸಿರುವುದಾಗಿ ರಾಜ್ಯಪಾಲರು ಹೇಳಿದ್ದರು. ಈ ಕಾರಣ ಸದರಿ ಆಯ್ಕೆಯಲ್ಲಿ ಆಗಿರುವ ನ್ಯೂನತೆಗಳ ಬಗ್ಗೆ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ನೈಜ ಹೋರಾಟ ವೇದಿಕೆಯ ಕೆ.ಮಲ್ಲಿಕಾರ್ಜುನ್ ರಾಜು ರವರ ಮುಖಾಂತರ ಹೈಕೋರ್ಟಿಗೆ ಅರ್ಜಿಯನ್ನು ಸಲ್ಲಿಸಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X