ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಉಡುಪಿ ಘಟಕದ ಜಿಲ್ಲಾಧ್ಯಕ್ಷರಾಗಿ ಇದ್ರೀಸ್ ಹೂಡೆ, ಜಿಲ್ಲಾ ಉಪಾಧ್ಯಕ್ಷರಾಗಿ ವಿಜಯ್ ಪಡುಕುದ್ರು, ಅಬ್ದುಲ್ ಅಝೀಜ್ ಉದ್ಯಾವರ, ಸಯ್ಯದ್ ಫರೀದ್ ಅವರನ್ನು ಆಯ್ಕೆ ಮಾಡಲಾಯಿತು.
ಉಡುಪಿ ಹೂಡೆಯ ಆದರ್ಶ್ ಇಸ್ಲಾಮಿಕ್ ಸೆಂಟರ್‌ನಲ್ಲಿ ನಡೆದ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಡ್ವಕೇಟ್ ತಾಹೀರ್ ಹುಸೇನ್ ಅವರ ನೇತೃತ್ವದಲ್ಲಿ ನಡೆದ ಜಿಲ್ಲಾ ಸಮಿತಿ ಸದಸ್ಯರ ಸಭೆಯಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.
ಪ್ರಧಾನ ಕಾರ್ಯದರ್ಶಿಯಾಗಿ ಯಾಸೀನ್, ಉಪಾಧ್ಯಕ್ಷರಾಗಿ ವಿಜಯ ಪಡುಕುದ್ರು, ಅಬ್ದುಲ್ ಅಝೀಝ್ ಉದ್ಯಾವರ, ಸಯ್ಯದ್ ಫರೀದ್ ಆಯ್ಕೆಗೊಂಡರು. ಕಾರ್ಯದರ್ಶಿಯಾಗಿ ಶಾಹಜಹಾನ್ ತೋನ್ಸೆ, ಮಮ್ತಾಝ್ ಬೇಗಮ್, ಖಜಾಂಚಿಯಾಗಿ ಆಸೀಫ್ ಜಿಡಿಯವರನ್ನು ಆಯ್ಕೆ ಮಾಡಲಾಯಿತು.
ಇದನ್ನು ಓದಿದ್ದೀರಾ? ಬಂಟ್ವಾಳ | ಆತ್ಮರಕ್ಷಣೆಯ ರಿವಾಲ್ವರ್‌ನಿಂದ ಮಿಸ್‌ಫೈರ್: ಜಿಲ್ಲಾ ಕಾಂಗ್ರೆಸ್ ಮುಖಂಡನಿಗೆ ಗಾಯ, ಆಸ್ಪತ್ರೆಗೆ ದಾಖಲು
ತೆರವುಗೊಂಡಿದ್ದ ಹೂಡೆ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಅಫ್ವಾನ್ ಹೂಡೆ, ಸಂಘಟನಾ ಕಾರ್ಯದರ್ಶಿ ಸ್ಥಾನಕ್ಕೆ ಝೈನುಲ್ಲಾ ಹೂಡೆ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳಾದ ಕೆಟಿ ಬಶೀರ್, ರಿಝ್ವಾನ್ ಹುಮ್ನಾಬಾದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
