ಗುಬ್ಬಿ | ಸಮಾಜ ಸೇವೆಯಲ್ಲಿ ದೈವ ಕಾಣಬೇಕು : ಶಾಸಕ ಎಸ್.ಆರ್.ಶ್ರೀನಿವಾಸ್.

Date:

Advertisements

ಮನಸ್ಸಿಗೆ ಶಾಂತಿ ತರುವ ಕೇಂದ್ರ ದೇವಸ್ಥಾನವಾಗಿದೆ. ಪರಂಪರೆ ಸಂಸ್ಕೃತಿ ದೇವಾಲಯದಲ್ಲಿ ಕಾಣುವವರು ಇದ್ದಾರೆ. ಆದರೆ ನಾನು ಜನ ಸೇವೆಯಲ್ಲಿ ದೇವರನ್ನು ಕಾಣುತ್ತೇನೆ. ಬಡವರ ಪರ ಕೆಲಸ ದಾನದಲ್ಲಿ ಧರ್ಮ ಹಾಗೂ ದೈವ ಕಾಣುವುದು ಸೂಕ್ತವೆನಿಸಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.

ಗುಬ್ಬಿ ಪಟ್ಟಣದ ಸುಭಾಷ್ ನಗರ ಬಡಾವಣೆಯ ಶ್ರೀ ಕೊಲ್ಲಾಪುರದಮ್ಮ ದೇವಿ ನೂತನ ದೇವಾಲಯ ಪ್ರಾರಂಭೋತ್ಸವ, ಸಂಪ್ರೋಕ್ಷಣೆ ಮತ್ತು ಚರಮೂರ್ತಿ ಪ್ರತಿಷ್ಠಾಪನಾ, ಪುನರ್ ಪ್ರಾಣ ಪ್ರತಿಷ್ಠಾಪನೆ, ವಿಮಾನ ಗೋಪುರ ಕಳಸ ಸ್ಥಾಪನೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು ತಂದೆ ತಾಯಿಗೆ ಸಾಕದೆ ಬೀದಿಗೆ ಬಿಟ್ಟು ದೇವಾಲಯದಲ್ಲಿ ಪೂಜೆ ಪುನಸ್ಕಾರ ಮಾಡಿದರೆ ಹೇಗೆ ಒಳ್ಳೆಯದಾಗುತ್ತೆ ಎಂಬುದು ಚಿಂತೆ ಮಾಡಬೇಕು ಎಂದರು.

ರಾಜಕೀಯದಲ್ಲಿ ಗುರುತಿಸಿಕೊಂಡು ಅಧಿಕಾರಕ್ಕೆ ಬಂದ ಮೇಲೆ ದೇವಾಲಯಗಳ ಅಭಿವೃದ್ಧಿಗೆ ಅನುದಾನ ನೀಡುತ್ತಿದ್ದೇನೆ. ಆದರೆ ಶಾಲೆಗಳನ್ನು ಅಭಿವೃದ್ದಿ ಮಾಡಿ ಶಾಲೆಯನ್ನು ದೇವಾಲಯವಾಗಿಸುವ ಕೆಲಸ ನಿರಂತರ ಮಾಡಿದ್ದೇನೆ ಎಂದ ಅವರು ಆತ್ಮವಿಮರ್ಶೆ ಮಾಡಿಕೊಂಡು ಜನರ ಸೇವೆಯಲ್ಲಿ ದೈವ ಕಾಣುವ ಕೆಲಸ ಮಾಡಿ. ಕೃಷಿ ಆಧಾರಿತ ತಿಗಳ ಜನಾಂಗದವರು ಸಾಮಾಜಿಕವಾಗಿ ಆರ್ಥಿಕವಾಗಿ ಬೆಳೆದು ಶೈಕ್ಷಣಿಕ ಹಾಗೂ ರಾಜಕೀಯ ಶಕ್ತಿ ಪಡೆಯಬೇಕಿದೆ ಎಂದರು.

Advertisements

ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ ಅಲ್ಪಸ್ವಲ್ಪ ಜಮೀನು ಮೂಲಕ ಕಷ್ಟ ಜೀವಿಗಳಾದ ತಿಗಳ ಜನಾಂಗ ಮುಖ್ಯವಾಹಿನಿಗೆ ಬರಬೇಕಿದೆ. ಶಿಕ್ಷಣ ಮೂಲಕ ಸಮಾಜವನ್ನು ಸಂಘಟಿತರಾಗಿ ಬೆಳೆಸಿ ರಾಜಕೀಯ ಶಕ್ತಿ ಪಡೆಯುವ ಕೆಲಸ ಮಾಡಿ ಎಂದು ಆಶಿಸಿದರು.

ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ಮಾತನಾಡಿ ರಾಜ್ಯದ 40 ವಿಧಾನಸಭಾ ಕ್ಷೇತ್ರದಲ್ಲಿ ಪ್ರಮುಖ ನಿರ್ಣಾಯಕ ಪಾತ್ರ ವಹಿಸುವ ತಿಗಳ ಜನಾಂಗದವರಿಗೆ ರಾಜಕೀಯ ಶಕ್ತಿ ಬೆಳೆದಿಲ್ಲ. ಈ ನಿಟ್ಟಿನಲ್ಲಿ ಸಂಘಟನೆ ಮೊದಲು ಬೆಳೆಸಿದರೆ ಶಕ್ತಿ ತಾನಾಗಿಯೇ ಬರುತ್ತದೆ. ಈ ಜೊತೆಗೆ ಸ್ಪರ್ಧೆ ಇಲ್ಲದ ಶೈಕ್ಷಣಿಕ ಕ್ಷೇತ್ರದಲ್ಲಿ ಮುಂದಿನ ಪೀಳಿಗೆ ಬೆಳೆಸಿದರೆ ಸಮಾಜ ಎಲ್ಲಾ ರಂಗದಲ್ಲೂ ಗುರುತಿಸಿಕೊಳ್ಳುತ್ತದೆ ಎಂದರು.

ಶಿವಗಂಗೆ ಶ್ರೀ ಮಹಾಲಕ್ಷ್ಮಿ ಮಹಾಸಂಸ್ಥಾನ ಪೀಠಾಧ್ಯಕ್ಷ ಶ್ರೀ ಜ್ಞಾನಾನಂದ ಪುರಿ ಸ್ವಾಮೀಜಿ ಮಾತನಾಡಿ ಕೃಷಿ ಕ್ಷೇತ್ರ ನಂಬಿ ಗ್ರಾಮೀಣ ಭಾಗದಲ್ಲಿ ಬದುಕು ಕಟ್ಟಿಕೊಂಡ ನಮ್ಮ ತಿಗಳ ಸಮಾಜ ಒಗ್ಗೂಡಿ ಸಾಗುವ ಸಂಘಟನಾ ಶಕ್ತಿಯಾಗಿ ಬೆಳೆಯಬೇಕಿದೆ. ಧಾರ್ಮಿಕ ಕಾರ್ಯಕ್ರಮ ನಡೆಸಿದಾಗ ಅಲ್ಲಿನ ವಿಚಾರಧಾರೆ ಆಲಿಸಿ ಸಮಾಜ ಕಟ್ಟುವ ಕೆಲಸ ಮಾಡಬೇಕು. ಹಿಂದುಳಿದ ವರ್ಗಗಳ ಮಧ್ಯದಲ್ಲಿ ನಾವುಗಳು ಎಲ್ಲಾ ಕ್ಷೇತ್ರದಲ್ಲಿ ಬೆಳೆಯುವ ಪ್ರಯತ್ನ ಮಾಡಬೇಕು. ಈ ನಿಟ್ಟಿನಲ್ಲಿ ಮೊದಲು ನಮ್ಮ ಶಕ್ತಿ ಪ್ರದರ್ಶನ ಆಗಬೇಕು. ಧಾರ್ಮಿಕ ಕಾರ್ಯಕ್ರಮ ಮೂಲಕ ಸಂಘಟಿತರಾಗಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಶ್ರೀ ಅಣಪನಹಳ್ಳಿ ಶ್ರೀ ಸೋಮೇಶ್ವರ ಸ್ವಾಮೀಜಿ, ತೊರೆಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ, ಶಾಸಕ ಜ್ಯೋತಿಗಣೇಶ್, ತಿಗಳ ಕ್ಷತ್ರಿಯ ಮಹಾಸಭಾ ರಾಜ್ಯಾಧ್ಯಕ್ಷ ಎಚ್.ಸುಬ್ಬಣ್ಣ, ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು, ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್, ಮಾಜಿ ಜಿಪಂ ಸದಸ್ಯರಾದ ಗಾಯತ್ರಿ ನಾಗರಾಜ್, ಟಿ.ಎಚ್.ಕೃಷ್ಣಪ್ಪ, ಕೆಟಿಎಸ್ ವಿ ಸಂಘ ಉಪಾಧ್ಯಕ್ಷ ಶ್ರೀಕಾಂತ್, ಎಸ್.ಕೆ ಸಿದ್ದಯ್ಯ, ಪಪಂ ಅಧ್ಯಕ್ಷೆ ಮಂಗಳಮ್ಮ ರಾಜಣ್ಣ, ಪಪಂ ಸದಸ್ಯರಾದ ಜಿ.ಆರ್.ಶಿವಕುಮಾರ್, ಮಹಮದ್ ಸಾದಿಕ್, ಶೌಕತ್ ಆಲಿ, ಕುಮಾರ್, ಕಳ್ಳಿಪಾಳ್ಯ ಲೋಕೇಶ್, ಜಿ.ಡಿ.ಸುರೇಶ್ ಗೌಡ, ಯಜಮಾನ್ ಸಣ್ಣಹನುಮಂತಯ್ಯ, ಭಕ್ತಕುಮಾರ್, ಬಲರಾಮಯ್ಯ, ಯೋಗಾನಂದಕುಮಾರ್, ಜಿ.ಬಿ.ಮಲ್ಲಪ್ಪ, ಜಿ.ಸಿ.ಲೋಕೇಶ್ ಬಾಬು, ಜಿ.ಎಸ್.ಮಂಜುನಾಥ್, ಜಿ.ಬಿ.ನಾಗರಾಜ್, ಬಾಲಕೃಷ್ಣ,

ವರದಿ – ಎಸ್. ಕೆ. ರಾಘವೇಂದ್ರ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X