70, 90 ಗಂಟೆ ಬಿಡಿ ವಾರಕ್ಕೆ 120 ಗಂಟೆ ಕೆಲಸ ಮಾಡಿ ಎಂದ ಎಲಾನ್‌ ಮಸ್ಕ್‌

Date:

Advertisements

ಕೆಲಸದ ಅವಧಿಗೆ ಸಂಬಂಧಿಸಿದಂತೆ ಉದ್ಯಮಿಗಳು ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಈ ಮೊದಲು ಭಾರತದ ಕೆಲವು ಉದ್ಯಮಿಗಳು ವಾರಕ್ಕೆ 70, 90 ಗಂಟೆ ಕೆಲಸ ಮಾಡಿ ಎಂದು ಹೇಳಿದ್ದು ಚರ್ಚೆಗೆ ಗ್ರಾಸವಾಗಿತ್ತು.

ಈಗ ವಿಶ್ವದ ಶ್ರೀಮಂತರಲ್ಲಿ ಪ್ರಮುಖ ಸ್ಥಾನದಲ್ಲಿರುವ ಸಾಮಾಜಿಕ ಮಾಧ್ಯಮ ಎಕ್ಸ್‌ನ ಮಾಲೀಕ ಎಲಾನ್‌ ಮಸ್ಕ್‌ ವಾರಕ್ಕೆ 120 ಗಂಟೆ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ.

ಎಲಾನ್ ಮಸ್ಕ್ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದ ತನ್ನ ಎಕ್ಸ್ ಖಾತೆಯಲ್ಲಿ ಎಲಾನ್ ಮಸ್ಕ್ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಡೋಜ್‌ ತಂಡವು ವಾರಕ್ಕೆ 120 ಗಂಟೆಗಳ ಕಾಲ ಕೆಲಸ ಮಾಡುತ್ತಿದೆ. ಆದರೆ ಸರ್ಕಾರಿ ನೌಕರರು ಕೇವಲ 40 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಅಮೆರಿಕ | ಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಾರಂಭ; ಮುಂದಿನ ವಾರ ಮೋದಿ ವಾಷಿಂಗ್ಟನ್‌ ಪ್ರವಾಸ

ಎಲಾನ್ ಮಸ್ಕ್ ಅವರ ಈ ಪೋಸ್ಟ್ ವೈರಲ್ ಆದ ಬಳಿಕ ನೆಟ್ಟಿಗರು ಮಸ್ಕ್ ಅವರ ದೀರ್ಘ ಕಾಲದ ಕೆಲಸದ ಸಮಯದ ನೀತಿಯನ್ನು ಟೀಕಿಸುತ್ತಿದ್ದಾರೆ. ಎಲಾನ್ ಮಸ್ಕ್ ಹೆಚ್ಚು ಸಮಯ ಕೆಲಸ ಮಾಡುವುದನ್ನು ಪ್ರ ತಿಪಾದಿಸಿದ ಏಕೈಕ ಕೈಗಾರಿಕೋದ್ಯಮಿ ಅಲ್ಲ.
ಇದಕ್ಕೂ ಮೊದಲು ಭಾರತದಲ್ಲಿ ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಅವರು ದೇಶದ ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡುವಂತೆ ಕೇಳಿಕೊಂಡಿದ್ದರು.ಇದಾದ ನಂತರ ಎಲ್ & ಟಿ ಸಿಇಒ ಎಸ್ ಎನ್ ಸುಬ್ರಮಣ್ಯಂ ಕೂಡ 90 ಗಂಟೆಗಳ ಕೆಲಸದ ಬಗ್ಗೆ ಮಾತನಾಡಿದರು.

ಅದೇ ಸಮಯದಲ್ಲಿ ಇತ್ತೀಚೆಗೆ ಮಂಡಿಸಲಾದ ಆರ್ಥಿಕ ಸಮೀಕ್ಷೆಯು ವಾರಕ್ಕೆ 60 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡುವುದರಿಂದ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ ಎಂದು ಸ್ಪಷ್ಟವಾಗಿ ಹೇಳುತ್ತದೆ.

image 40
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X