ಸಂವಿಧಾನ ಬದಲಾಯಿಸಲು ಬಂದವರನ್ನೇ ನಾವು-ನೀವು ಬದಲಾಯಿಸಿದ್ದೀವಿ: ಸಿಎಂ ಸಿದ್ದರಾಮಯ್ಯ

Date:

Advertisements
  • ಮನುಸ್ಮೃತಿಯ ಆರಾಧಕರಾದ ಬಿಜೆಪಿ, ಆರ್ ಎಸ್ ಎಸ್ ನವರು ಸಂವಿಧಾನ ವಿರೋಧಿಗಳು
  • ಟೌನ್‌ಹಾಲ್ ನಲ್ಲಿ ಹಮ್ಮಿಕೊಂಡಿದ್ದ ‘ಭೀಮ ಸಂಕಲ್ಪ’ ಸಮಾವೇಶ ಉದ್ಘಾಟಿಸಿದ ಸಿಎಂ

“ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವರಾಗಿದ್ದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿದ್ದ ಅಮಿತ್ ಶಾ ಅವರಾಗಲಿ, ಪ್ರಧಾನಿ ಮೋದಿ ಅವರಾಗಲಿ ಕ್ರಮ ಕೈಗೊಳ್ಳದೆ ಸುಮ್ಮನೆ ಕುಳಿತರು. ಆದರೆ, ನಾವು-ನೀವು ಸುಮ್ಮನೆ ಕೂರಲಿಲ್ಲ. ಸಂವಿಧಾನ ಬದಲಾಯಿಸಲು ಬಂದವರನ್ನೇ ನಾವು-ನೀವು ಬದಲಾಯಿಸಿದ್ದೀವಿ. ಇದು 2024ರಲ್ಲೂ ಪ್ರತಿಧ್ವನಿಸಬೇಕು, ಮರುಕಳಿಸಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅನ್ನು ನೆಲ ಕಚ್ಚಿಸುವ ಭೀಮ ಸಂಕಲ್ಪ ಸಮಾವೇಶ ಹಾಗೂ ಜನಮನ ನಮನ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಭೀಮ ಸಂಕಲ್ಪ ಮತ್ತು ದಸಂಸ ಕಾರ್ಯಕರ್ತರಿಗೆ ಅಭಿನಂದನಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ವಿಗ್ರಹ ಇಟ್ಟುಕೊಂಡು ವಿಚಾರಗಳನ್ನು ಕೊಲ್ಲುವುದು ಬಿಜೆಪಿ, ಆರ್‌ಎಸ್‌ಎಸ್‌ನವರ ಚಾಳಿ. ಸಂವಿಧಾನ ವಿರೋಧಿಸುವ ಬಿಜೆಪಿ ಚುನಾವಣೆಗಾಗಿ ಅಂಬೇಡ್ಕರ್ ಪ್ರತಿಮೆಯನ್ನು ಇಟ್ಟುಕೊಂಡು ನಾಟಕ ಮಾಡುತ್ತಿದೆ” ಎಂದು ಟೀಕಿಸಿದರು.

Advertisements

“ಮನುಸ್ಮೃತಿಯ ಆರಾಧಕರಾದ ಆರ್‌ಎಸ್‌ಎಸ್‌ ಮತ್ತು ಬಿಜೆಪಿಗರು ಸಂವಿಧಾನದ ವಿರೋಧಿಗಳಾಗಿದ್ದಾರೆ. ಸಂವಿಧಾನವನ್ನೇ ಬದಲಾಯಿಸುತ್ತೇವೆ ಎಂದು ಅಹಂಕಾರ ಮೆರೆದವರನ್ನು ನೀವು ಬದಲಾಯಿಸಿದ್ದೀರಿ, ಅಧಿಕಾರಕ್ಕಾಗಿ ಅಲ್ಲಿಗೆ ಹೋದ ಶೋಷಿತ ಸಮುದಾಯಗಳ ಪ್ರತಿನಿಧಿಗಳು ಮನುಸ್ಮೃತಿಯ ಆರಾಧಕರಾಗಿ ಸಂವಿಧಾನ ವಿರೋಧಿಗಳಾಗುತ್ತಿದ್ದಾರೆ” ಎಂದರು.

“ಅಂಬೇಡ್ಕರ್ ಅವರು ಸಂವಿಧಾನ ಜಾರಿಗೊಳ್ಳುವ ಹಿಂದಿನ ದಿನ ಐತಿಹಾಸಿಕ ಭಾಷಣ ಮಾಡುತ್ತಾ, `ಸಾಮಾಜಿಕ, ಆರ್ಥಿಕ ಅಸಮಾನತೆಯನ್ನು ತೊಡೆದು ಹಾಕದಿದ್ದರೆ ಈ ಸ್ವಾತಂತ್ರ್ಯ ಸೌಧವನ್ನು ದೇಶದ ಜನರೇ ಧ್ವಂಸ ಮಾಡುತ್ತಾರೆ’ ಎಂದು ಎಚ್ಚರಿಸಿದ್ದರು. ಜಾತಿ ಸಮಾಜಕ್ಕೆ ಚಲನೆ ಇರುವುದಿಲ್ಲ. ಚಾಲನೆ ಬರಬೇಕಾದರೆ ಸಂವಿಧಾನ ಬದ್ದವಾದ ಜಾತ್ಯತೀತ ಮೌಲ್ಯಗಳು ಜಾರಿಯಾಗಿ ಶೋಷಿತ ಸಮುದಾಯಗಳಿಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಅವಕಾಶಗಳನ್ನು ಕಲ್ಪಿಸಿಕೊಡಬೇಕು. ಈ ಅವಕಾಶಗಳನ್ನು ಕಲ್ಪಿಸುವುದೇ ನನ್ನ ರಾಜಕೀಯ ಬದ್ಧತೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ನಿವಾಸಿಗಳು : ಎಫ್‌ಐಆರ್‌ ದಾಖಲು

ಐಕ್ಯ ಹೋರಾಟ ಚಾಲನಾ ಸಮಿತಿ ಸಲ್ಲಿಸಿದ ಹಲವು ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಉಳಿದವುಗಳನ್ನೂ ಈಡೇರಿಸುತ್ತೇವೆ” ಎಂದು ಭರವಸೆ ನೀಡಿದರು.

“ದೇಶದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸದೆ ವಂಚಿಸಿದ ಬಿಜೆಪಿ, ನುಡಿದಂತೆ ನಡೆದ ನಮ್ಮನ್ನು ಟೀಕಿಸುತ್ತಿದ್ದಾರೆ. ಬಡವರ- ಮಧ್ಯಮ ವರ್ಗದವರ ಕಲ್ಯಾಣಕ್ಕೆ ನಾವು ನೀಡಿರುವ ಗ್ಯಾರಂಟಿಗಳನ್ನು ವಿಫಲಗೊಳಿಸಲು ಬಿಜೆಪಿ ಯತ್ನಿಸುತ್ತಿದೆ. ಇದಕ್ಕಾಗಿ ಸುಳ್ಳುಗಳನ್ನು ಹೊಸೆದು, ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ನಾಡಿನ ಶೇ.85 ಕ್ಕೂ ಹೆಚ್ಚು ಜನರಿಗೆ ತಲುಪುತ್ತದೆ. ಉಳಿದವು ಇನ್ನೂ ಹೆಚ್ಚಿನ ಸಂಖ್ಯೆಯ ಜನರಿಗೆ ತಲುಪುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ದಲಿತ ಮುಖಂಡರುಗಳಾದ ಎಸ್.ಮರಿಸ್ವಾಮಿ, ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ಇಂದೂಧರ ಹೊನ್ನಾಪುರ, ಜಿಗಣಿ ಶಂಕರ್, ವಿ.ನಾಗರಾಜ್, ಎನ್.ವೆಂಕಟೇಶ್ ಸೇರಿ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ 50 ಕ್ಕೂ ಹೆಚ್ಚು ಮುಖಂಡರುಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X