‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

Date:

Advertisements
  • ‘ರಾಜ್ಯ ‘ಕರ್ನಾಟಕ’ ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ’
  • ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು ರೂಪರೇಷೆ ಸಿದ್ಧತೆಗೆ ಸೂಚನೆ

ಮೈಸೂರು ರಾಜ್ಯ ‘ಕರ್ನಾಟಕ’ ಎಂದು ನಾಮಕರಣಗೊಂಡು 50 ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲು ಸೂಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಶುಕ್ರವಾರ ಕನ್ನಡ ಭವನದ ಅಂತರಂಗದಲ್ಲಿ ನಡೆದ ಇಲಾಖೆಯ ಆಯವ್ಯಯ ಸಭೆ ಉದ್ದೇಶಿಸಿ ಮಾತನಾಡಿ, “ಮೈಸೂರು ರಾಜ್ಯ 20-10-1973 ರಂದು ಕರ್ನಾಟಕ ಎಂದು ಮರುನಾಮಕರಣವಾಗಿದ್ದು, ಅದಕ್ಕೆ ಈಗ 50 ವರ್ಷ ಪೂರೈಸುತ್ತಿದೆ. ಈ ಐತಿಹಾಸಿಕ ಸಂದರ್ಭದಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ ಸಾರುವಂತಹ ವಿಶೇಷ ಕಾರ್ಯಕ್ರಮ ರೂಪಿಸಿ ವರ್ಷವಿಡಿ ಆಯೋಜಿಸಲು ಸೂಕ್ತ ರೂಪರೇಷೆಗಳನ್ನು ಸಿದ್ಧಪಡಿಸಿ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ” ಸೂಚಿಸಿದರು.

“ಈ ಬಾರಿ ಆಯವ್ಯಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಕೋರಲಾಗುವುದು. ಆ ಮೂಲಕ ಸಂಸ್ಕೃತಿ ಇಲಾಖೆಯ ಕಾರ್ಯಕ್ರಮಗಳು ವ್ಯಾಪಕವಾಗಿ ಮತ್ತು ಹೆಚ್ಚು ಆಕರ್ಷಣೀಯವಾಗಿ ಯೋಜಿಸಲು ಉದ್ದೇಶಿಸಲಾಗಿದೆ. ರವೀಂದ್ರ ಕಲ್ಲಾಕ್ಷೇತ್ರವನ್ನು ನವೀಕರಿಸಿ, ಅಲ್ಲಿ ಆಸನ ವ್ಯವಸ್ಥೆ ಧ್ವನಿ ಮತ್ತು ಬೆಳಕು ಸುಧಾರಣೆ ಮಾಡಲು ಕ್ರಮ ಕೈಗೊಳ್ಳುವಂತೆ” ಸೂಚಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಭ್ರಷ್ಟ ಪಿಡಿಒಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

“ಕರ್ನಾಟಕ ಪರಂಪರೆ ಬಿಂಬಿಸುವಂತಹ ಚಾಲುಕ್ಯ ಉತ್ಸವ, ಆನೆಗುಂದಿ ಉತ್ಸವ, ಲಕ್ಕುಂಡಿ ಉತ್ಸವ, ಹಂಪಿ ಉತ್ಸವ, ನವರಸಪುರ ಉತ್ಸವ, ಕದಂಬ ಉತ್ಸವ, ಇಟಗಿ ಉತ್ಸವ ಹಾಗೂ ಕನಕಗಿರಿ ಉತ್ಸವ ಮುಂತಾದ ಉತ್ಸವ ಇನ್ಮುಂದೆ ನಿಗದಿತ ದಿನಾಂಕಗಳಂದು ಪ್ರವಾಸಿಗರ ಅನುಕೂಲ ದೃಷ್ಟಿಯಲ್ಲಿ ಇಟ್ಟುಕೊಂಡು ಆಯೋಜಿಸಬೇಕು. ಮತ್ತು ಅದಕ್ಕೊಂದು ವೇಳಾಪಟ್ಟಿಯನ್ನು ಸಿದ್ಧಪಡಿಸಬೇಕು” ಎಂದು ಹೇಳಿದರು.

“ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಭಾಗಗಳಲ್ಲಿ ಜಾನಪದ ಲೋಕ ಸ್ಥಾಪನೆಗೆ ಸೂಕ್ತ ಯೋಜನೆ ರೂಪಿಸಬೇಕು. ಐತಿಹಾಸಿಕ ಸ್ಮಾರಕಗಳ ಮುಂದೆ ಪ್ರತಿ ತಿಂಗಳು ರಜಾ ದಿನಗಳಂದು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಕಾರ್ಯಕ್ರಮ ರೂಪಿಸಲು ಕ್ರಮ ಕೈಗೊಳ್ಳಬೇಕು” ಎಂದು ಸಚಿವರು ಸಭೆಯಲ್ಲಿ ನಿರ್ದೇಶಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ. ಎನ್ ಮಂಜುಳಾ, ನಿರ್ದೇಶಕ ವಿಶ್ವನಾಥ ಪಿ ಹಿರೇಮಠ ಹಾಗೂ ಇತರ ಉನ್ನತ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X