ಚಿತ್ರದುರ್ಗ | ಹಣದಾಸೆಗೆ ಇ-ಸ್ವತ್ತು ಆಸ್ತಿ ವರ್ಗಾವಣೆ ಆರೋಪ; ಗ್ರಾಮಸ್ಥರ ಪ್ರತಿಭಟನೆ

Date:

Advertisements

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಣದಾಸೆಗಾಗಿ ಬೇರೆಯವರ ಹೆಸರಿಗೆ ಇ-ಸ್ವತ್ತು ಖಾತೆ ಮಾಡಿರುವ ಆರೋಪ ಕೇಳಿಬಂದಿದೆ.

ಪರಶುರಾಂಪುರ ಗ್ರಾಮ ಪಂಚಾಯಿತಿ ಕಚೇರಿ ಎದುರು ಜಮಾಯಿಸಿದ ಗ್ರಾಮಸ್ಥರು ಪ್ರತಿಭಟಿಸಿ, ಅಧಿಕಾರಿಗಳ ಅನ್ಯಾಯ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಪರಶುರಾಂಪುರ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳು ಮತ್ತು ಈಗಿನ ಅಧಿಕಾರಿಗಳೂ ಕೂಡಾ ಹಣದಾಸೆಗಾಗಿ ಸಾಮಾನ್ಯ ಜನರಿಗೆ ನೋಟಿಸ್ ನೀಡದೆ ನಮ್ಮ ಖಾತೆಗಳನ್ನು ಬೇರೆಯವರ ಹೆಸರಿಗೆ ಅಕ್ರಮವಾಗಿ ಇ-ಸತ್ತು ಖಾತೆ ಮಾಡಿ ಸದರಿ ಖಾತೆದಾರರಿಗೆ ಅನ್ಯಾಯ ಮಾಡಿದ್ದಾರೆ” ಎಂದು ಗ್ರಾಮಸ್ಥರು ಆರೋಪಿಸಿದರು.

Advertisements

“ಇಷ್ಟೇ ಅಲ್ಲದೆ ಇನ್ನೂ ಅನೇಕ ಹಗರಣಗಳಲ್ಲಿ ಭಾಗಿಯಾಗಿರುವ ಶಂಕೆಯಿದೆ. ಹಣ ಕೊಟ್ಟರೆ ಯಾವುದೇ ಅಕ್ರಮ ಕೆಲಸವನ್ನಾದರೂ ಮಾಡುತ್ತಾರೆಂಬ ಆರೋಪವಿದೆ. ಇದರಿಂದಾಗಿ ಬಡ, ಅನಕ್ಷರಸ್ಥ, ಅಮಾಯಕ ಜನರಿಗೆ ಅನ್ಯಾಯವಾಗುತ್ತಿದೆ.‌ ನಾವು ಮಕ್ಕಳು, ವೃದ್ಧರೊಂದಿಗೆ ಇರಲು ಜಾಗವಿಲ್ಲದೆ, ಮನೆಯಿಲ್ಲದೆ ಅಲೆದಾಡುವ ಸ್ಥಿತಿ ಎದುರಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ‌ಏಮ್ಸ್‌ ಸ್ಥಾಪನೆ ಹೋರಾಟಕ್ಕೆ ಸಾವಿರ ದಿನ – ಅನ್ಯಾಯ ಸಹಿಸಲ್ಲ, ಕೇಂದ್ರ ವಿರುದ್ಧ ಹೋರಾಟ: ಬೋಸರಾಜು

“ಈ ಕುರಿತು ಸಂಬಂಧಪಟ್ಟ ತಹಶೀಲ್ದಾರ್‌, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಸೇರಿದಂತೆ ಜಿಲ್ಲೆಯ ಮೇಲಧಿಕಾರಿಗಳು ಈ ಅನ್ಯಾಯ ಸರಿಪಡಿಸಿ ನ್ಯಾಯ ಒದಗಿಸಬೇಕು. ಪಂಚಾಯಿತಿಯಲ್ಲಿ ನಡೆಯುವ ಹಗರಣಗಳನ್ನು ತಡೆಯಬೇಕು” ಎಂದು ಆಗ್ರಹಿಸಿದರು.

ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಸಂತ್ರಸ್ತ ಮಹಿಳೆಯರು, ಅನ್ಯಾಯಕ್ಕೊಳಗಾದ ಖಾತೆದಾರರು ಸೇರಿದಂತೆ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X