ಭದ್ರಾವತಿಯ ಭದ್ರಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ಕಾರ್ಯವೈಖರಿಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಠಾಣೆಯಲ್ಲಿಯೇ ಪೊಲೀಸರೇ ಡೆಮೋ ನೀಡಿದರು.
ಭದ್ರಾವತಿ ನಗರ ವೃತ್ತದ ಸಿಪಿಐ ಶ್ರೀಶೈಲ್ ಕುಮಾರ್ ನೇತೃತ್ವದಲ್ಲಿ ನಿನ್ನೆ (ಫೆ.5) ಹಳೆನಗರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳಿಗೆ ʼತೆರೆದ ಮನೆʼ ಕಾರ್ಯಕ್ರಮವನ್ನು ಆಯೋಜಿಸಿ, ಠಾಣೆಯ ಕಾರ್ಯವೈಖರಿಯ ಬಗ್ಗೆ ಮಕ್ಕಳ ಹಕ್ಕುಗಳು, ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು, ಮಕ್ಕಳು ತಮ್ಮ ಸುರಕ್ಷತೆಗಾಗಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳು ಸೇರಿದಂತೆ ಮುಂತಾದ ಇಲಾಖೆಯ ಮುಖ್ಯ ಕರ್ತವ್ಯಗಳ ಕುರಿತು ಮಾಹಿತಿ ನೀಡಲಾಯಿತು.

ಅಲ್ಲದೆ ಸಾಮಾಜಿಕ ಜಾಲತಾಣದ ಸುರಕ್ಷಿತ ಬಳಕೆ, ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮ ಪಾಲನೆ, ತುರ್ತು ಮತ್ತು ಅಗತ್ಯ ಸಂದರ್ಭದಲ್ಲಿ ಇಆರ್‌ಎಸ್‌ಎಸ್-112 ಸಹಾಯವಾಣಿ ಬಳಕೆಯ ಬಗ್ಗೆ ಸಂಪೂರ್ಣ ವಿವರ ನೀಡಿದರು.
ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಭದ್ರಾವತಿಯನ್ನ ರಿಪಬ್ಲಿಕ್ ಆಗಲು ಬಿಡಲ್ಲ: ಸಚಿವ ಮಧು ಬಂಗಾರಪ್ಪ
ಈ ವೇಳೆ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.