ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಾನ್ವಿ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಖಾಸಗಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿ ಮೇಲೆ ಅದೇ ತಾಲ್ಲೂಕಿನ 38 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.
‘ಬಾಲಕಿ ಓದುತ್ತಿದ್ದ ಶಾಲೆಗೆ ಹೋದ ವ್ಯಕ್ತಿ ‘ಮನೆಯಲ್ಲಿ ನಿನ್ನ ಪೋಷಕರು ಕರೆಯುತ್ತಿದ್ದಾರೆ’ ಎಂದು ಪುಸಲಾಯಿಸಿ ಬಾಲಕಿಯನ್ನು ಹೊರವಲಯದಲ್ಲಿ ಕರೆದೊಯ್ದು ಕೃತ್ಯ ಎಸಗಿದ್ದಾನೆ’ ಎಂದು ಪೋಷಕರು ಮಾಹಿತಿ ನೀಡಿದ್ದಾರೆ.
ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಆರೋಪಿ ಪತ್ತೆಗೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಮಾನ್ವಿ ತಾಲ್ಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದಿದ್ದಾರೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.