ವಿಜಯಪುರ ಜಿಲ್ಲೆಯ ಹಲವು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಉದ್ಯೋಗಗಳಿಗಾಗಿ ತಜ್ಞ ವೈದ್ಯರು, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹಾಗೂ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದಾರೆ.
ಈ ಕುರಿತು ಜಿಲ್ಲಾ ಆರೋಗ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪತ್ರಕಾ ಪ್ರಕಟಣೆ ಹೊರಡಿಸಿದ್ದು, “ಖಾಲಿಯಿರುವ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಷರತ್ತು ಹಾಗೂ ನಿಬಂಧನೆಗೊಳಪಟ್ಟು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ನೇಮಕ ಮಾಡಿಕೊಳ್ಳಲಾಗುವುದು” ಎಂದು ತಿಳಿಸಿದೆ.
“ಜನರಲ್ ಮೆಡಿಸಿನ್ ತಜ್ಞ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ, ಕಿವಿ, ಮೂಗು ಮತ್ತು ಗಂಟಲು ತಜ್ಞ, ಚರ್ಮರೋಗ ತಜ್ಞ, ಚಿಕ್ಕಮಕ್ಕಳ ತಜ್ಞ, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ, ಹಿರಿಯ ವೈದ್ಯಾಧಿಕಾರಿ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆ ಸಹಿತ ಹಾಜರಾಗಬಹುದು” ಎಂದು ಸೂಚನೆ ನೀಡಿದೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ರೈತರ ಸಮಸ್ಯೆಗೆ ಸ್ಪಂದಿಸದ ಲೈನ್ ಮ್ಯಾನ್ ವರ್ಗಾವಣೆಗೆ ಆಗ್ರಹ
ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲಾತಿ ಸಹಿತ ಹಾಗೂ ಒಂದು ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಸಿಬ್ಬಂದಿ-1 ವಿಭಾಗ ಹಾಗೂ ದೂರವಾಣಿ ಸಂಖ್ಯೆ: 08352 250107ಕ್ಕೆ ಸಂಪರ್ಕಿಸಬಹುದು ಎಂದು ತಿಳಿಸಿದೆ.