ಗೃಹಲಕ್ಷ್ಮಿ ಯೋಜನೆಯಿಂದ ತಮಗೆ ಬಂದಿರುವ ₹ 24 ಸಾವಿರ ರೂಪಾಯಿಯನ್ನು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ದೇಣಿಗೆ ನೀಡಿದ್ದಾರೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಐರಣಿ ಗ್ರಾಮದ ಆಶಾ ಕಾರ್ಯಕರ್ತೆ ಗಂಗಮ್ಮ ಮಹೇಶಪ್ಪ ಲಗುಬಿಗಿ ಅವರು ತಮ್ಮ ಗೃಹ ಲಕ್ಷ್ಮೀ ಗ್ಯಾರಂಟಿ ಹಣವನ್ನು ಹಿರಿಯ ಪ್ರಾಥಮಿಕ ಶಾಲೆಗೆ ದೇಣಿಗೆಯಾಗಿ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಸಾಗುವಳಿ ಭೂಮಿಯ ಹಕ್ಕುಪತ್ರ ನೀಡುವಂತೆ ರೈತರ ಹೋರಾಟ
‘ಶಾಲಾ ಕಾರ್ಯಕ್ರಮಗಳಲ್ಲಿ ಭಾಗವಿಸುವಾಗ ಶಾಲೆಯ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಸಮಸ್ಯೆ ಇರುವುದು ಕಂಡು ಬಂತು. ದೂರದಿಂದ ಶುದ್ಧ ನೀರಿನ ಘಟಕದಿಂದ ನೀರು ತರುತ್ತಿದ್ದರು. ಶಾಲೆಯ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಮಿನಿ ಘಟಕ ಅಥವಾ ನಲಿಕಲಿ ಸ್ಮಾರ್ಟ್ ಕ್ಲಾಸ್ ಹಾಗೂ ಇನ್ನಿತರೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಹಣ ನೀಡಲು ಮುಂದಾದೆ’ ಎಂದು ಗಂಗಮ್ಮ ತಿಳಿಸಿದರು.
