ತೀರ್ಥಹಳ್ಳಿಯ ಕೋಣಂದೂರು ಸಮೀಪ ಮಂಗಳದ ಪ್ರಸಿದ್ಧ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ (86) ಅನಾರೋಗ್ಯದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ನಾಟಿ ವೈದ್ಯರಾಗಿ ರಾಜ್ಯಾದ್ಯಂತ ಹೆಸರು ಗಳಿಸಿದ್ದ ಇವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸೇರಿದಂತೆ ಹಲವು ಗಣ್ಯರಿಗೆ ಚಿಕಿತ್ಸೆ ನೀಡಿದ್ದಾರೆ. ಅನೇಕ ರಾಜ್ಯಮಟ್ಟದ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ನೋವು ಹಾಗೂ ಮೂಳೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ನಿಪುಣರಾಗಿದ್ದರು ಶಿವಣ್ಣ. ಇವರ ಬಳಿ ಚಿಕಿತ್ಸೆ ಪಡೆಯಲು ಹೊರ ರಾಜ್ಯದಿಂದಲೂ ಜನ ಬರುತ್ತಿದ್ದರು.
ಈ ಸುದ್ದಿ ಓದಿದ್ದೀರಾ? ತೀರ್ಥಹಳ್ಳಿ | ಆಗುಂಬೆ ಘಾಟ್‌ನಲ್ಲಿ ಬಸ್‌ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
ಮಂಗಳದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4 ಗಂಟೆಯ ಬಳಿಕ ಅಂತಿಮ ಕ್ರಿಯೆಯ ವಿಧಿ ವಿಧಾನಗಳು ನಡೆಯಲಿವೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.