ಹಾವೇರಿ | ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ್ದ ನರ್ಸ್ ಅಮಾನತು

Date:

Advertisements

ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆಯ ಬದಲು ಫೆವಿಕ್ವಿಕ್ ಹಾಕಿದ್ದ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಅನ್ನು ಅಮಾನತು ಮಾಡಲಾಗಿದೆ. ಜ್ಯೋತಿ ಅಮಾನತುಗೊಂಡ ನರ್ಸ್.

ಜನವರಿ 14ರಂದು ಆಟ ಆಡುತ್ತಿದ್ದ ವೇಳೆ ಬಿದ್ದು ಏಳು ವರ್ಷದ ಬಾಲಕ ಗುರುಕಿಶನ್ ಕೆನ್ನೆಗೆ ಗಾಯವಾಗಿತ್ತು. ಈ ವೇಳೆ ಮಗುವನ್ನು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಅಲ್ಲಿ ನರ್ಸ್ ಜ್ಯೋತಿ ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿ ಚಿಕಿತ್ಸೆ ಬ್ಯಾಂಡೆಡ್ ಅಂಟಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಈ ಬಗ್ಗೆ ವೀಡಿಯೊ ವೈರಲ್ ಆದ ಬೆನ್ನಲ್ಲೆ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ನರ್ಸ್ ಜ್ಯೋತಿಯನ್ನು ಅಮಾನತುಗೊಳಿಸಲಾಗಿದೆ. ಸರಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಗುಬ್ಬಿ | ಅದ್ದೂರಿಯಾಗಿ ಜರುಗಿದ ಲಕ್ಕೇನಹಳ್ಳಿ ಸೂರ್ಯ ಮಂಡಲ ರಥೋತ್ಸವ

ಫೆವಿಕ್ವಿಕ್ ಅಂಟು ದ್ರಾವಣವಾಗಿದ್ದು, ವೈದ್ಯಕೀಯ ಬಳಕೆಯಲ್ಲಿಲ್ಲ. ಮಗುವಿನ ಚಿಕಿತ್ಸೆಗೆ ಫೆವಿಕ್ವಿಕ್ ಬಳಸಿ ಕರ್ತವ್ಯ ಲೋಪವೆಸಗಿದ್ದಾರೆ. ಸ್ಟಾಫ್ ನರ್ಸ್ ಬಗ್ಗೆ ಪ್ರಾಥಮಿಕ ವರದಿ ಪಡೆದು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಮಗುವಿನ ಆರೋಗ್ಯದಲ್ಲಿ ಆಗಬಹುದಾದ ಅಡ್ಡಪರಿಣಾಮಗಳ ಬಗ್ಗೆ ನಿಗಾ ಇಡಲು ಸೂಚನೆ ನೀಡಿದ್ದು, ಚಿಕಿತ್ಸೆಗೆ ಒಳಪಟ್ಟಿದ್ದ ಮಗು ಆರೋಗ್ಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X