ಎಪ್ಪತ್ತು ಗಿರಿಗಿಂತ ಕಪ್ಪತಗಿರಿ ಮೇಲು, ಉತ್ತರ ಕರ್ನಾಟಕದ ಸಹ್ಯಾದ್ರಿ, ಔಷಧಿಯ ಸಸ್ಯಕಾಶಿ ಎಂದೇ ಪ್ರಸಿದ್ಧಿ ಪಡೆದ ಕಪ್ಪತಗುಡ್ಡದಲ್ಲಿ ಬೆಂಕಿ ಕಾಣಿಸಿಗೊಂಡಿದ್ದು, ಡೋಣಿ ಗ್ರಾಮದ ಬಳಿಯ ಗುಡ್ಡಕ್ಕೂ ಬೆಂಕಿ ಹೊತ್ತಿಕೊಂಡಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಪ್ಪತಗುಡ್ಡ ಹಾಗೂ ಡೋಣಿ ಬಳಿಯ ನಂದಿವೇರಿ ಮಠದ ಹಿಂಭಾಗ, ಬಂಗಾರಕೊಳ್ಳ, ದೊಡ್ಡ ಬಂಗಾರಕೊಳ್ಳ, ಉಪ್ಪಾರತಟ್ಟು, ನವಣೆ ರಾಶಿ, ಎತ್ತಿನಗುಡ್ಡ ಪ್ರದೇಶಗಳಲ್ಲಿಯೂ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿಯ ಕೆನ್ನಾಲಿಗೆಗೆ ಸುಮಾರು ನೂರಾರು ಎಕರೆ ಪ್ರದೇಶದ ಅರಣ್ಯ ಸುಟ್ಟು ಕರಕಲಾಗಿದೆ. ಬೆಂಕಿಗೆ ಸಿಲುಕಿದ ಸರಿಸೃಪಗಳು, ಔಷಧೀಯ ಸಸ್ಯಗಳು, ಪ್ರಾಣಿ, ಪಕ್ಷಿಗಳೂ ಕೂಡಾ ಬೆಂಕಿಗಾಹುತಿಯಾಗಿವೆ.
ಈ ಸುದ್ದಿ ಓದಿದ್ದೀರಾ? ಗುಬ್ಬಿ | ಅದ್ದೂರಿಯಾಗಿ ಜರುಗಿದ ಲಕ್ಕೇನಹಳ್ಳಿ ಸೂರ್ಯ ಮಂಡಲ ರಥೋತ್ಸವ.
ವಿಷಯ ತಿಳಿದು ಸ್ಥಳಕ್ಕಾಗಮಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
