ಬಿಜೆಪಿಯೊಳಗಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ ಸಂಗತಿ: ಸಂಸದ ಬೊಮ್ಮಾಯಿ ಬೇಸರ

Date:

Advertisements

ಕಾಂಗ್ರೆಸ್‌ ಸರ್ಕಾರ ವಿರುದ್ಧ ಸಮರ ಸಾರಬೇಕಾಗಿರುವ ಭಾರತೀಯ ಜನತಾ ಪಕ್ಷ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರದಲ್ಲಿ ತೊಡಗಿರುವುದು ಅತ್ಯಂತ ದುರದೃಷ್ಟಕರ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ‌.

“ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯ ವಾಗಿದೆ. ಜನ ಸಾಮನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇದರ ವಿರುದ್ದ ಬಿಜೆಪಿ ಹೋರಾಟ ಮಾಡಬೇಕಿತ್ತು” ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

“ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಈ ಪಕ್ಚ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ” ಎಂದಿದ್ದಾರೆ.

Advertisements

“ಎರಡೂ ಕಡೆ ತಾಳ್ಮೆಯನ್ನು ಕಳೆದುಕೊಳ್ಳದೆ ಕರ್ನಾಟಕ ಬಿಜೆಪಿಯ ಸರ್ವೋಚ್ಚ ನಾಯಕ ಮಾಜಿ ಮುಖ್ಯಮಂತ್ರಿ ಬಿ‌. ಎಸ್ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಇದನ್ನು ಬಗೆ ಹರಿಸಬೇಕು. ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಬೇಕು‌. ವರಿಷ್ಠರು ಕೂಡಲೇ ಕರ್ನಾಟಕದ ಪಕ್ಷದ ಬೆಳವಣಿಗೆಯ ಬಗ್ಗೆ ಗಮನವನ್ನು ಹರಿಸಿ, ಎಲ್ಲ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ನನಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X